ಐಎಫ್‌ಎಸ್ ಫಲಿತಾಂಶ: ಬೆಳಗಾವಿ ಜಿಲ್ಲೆಯ ಬಸವರಾಜ ಕೆಂಪವಾಡ ದೇಶಕ್ಕೆ ಪ್ರಥಮ ಸ್ಥಾನ

ಬೆಳಗಾವಿ : ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಿದ ಅಖಿಲ ಭಾರತ ಅರಣ್ಯ ಸೇವೆ (IFS - Indian Forest Service) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ಬಸವರಾಜ ಕೆಂಪವಾಡ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದ ಯುವಕ ಬಸವರಾಜ ಕೆಂಪವಾಡ ಅವರು ಐಎಫ್‌ಎಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಮೊದಲ ಸ್ಥಾನ ಗಳಿಸುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ.
ಬಸವರಾಜ ಕೆಂಪವಾಡ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಗಣ್ಯರು ಶುಭಾಶಯಗಳನ್ನು ತಿಳಿಸಿ, ಹಾರೈಸಿದ್ದಾರೆ.
Next Story




