Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಸೂಕ್ತ ಪರಿಹಾರ ನೀಡಿ ಭೀಮಗಢ ಅರಣ್ಯವಾಸಿಗಳ...

ಸೂಕ್ತ ಪರಿಹಾರ ನೀಡಿ ಭೀಮಗಢ ಅರಣ್ಯವಾಸಿಗಳ ಸ್ಥಳಾಂತರ : ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ17 Dec 2024 4:51 PM IST
share
ಸೂಕ್ತ ಪರಿಹಾರ ನೀಡಿ ಭೀಮಗಢ ಅರಣ್ಯವಾಸಿಗಳ ಸ್ಥಳಾಂತರ : ಈಶ್ವರ್ ಖಂಡ್ರೆ

ಬೆಳಗಾವಿ : ಭೀಮಗಢ ಅರಣ್ಯ ಪ್ರದೇಶದೊಳಗೆ ಇರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಿ, ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ

ಸೋಮವಾರ ರಾತ್ರಿ ಅಧಿವೇಶನದ ಬಳಿಕ ಖಾನಾಪುರ ತಾಲೂಕಿನ ತಾಳೇವಾಡಿಗೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಅವರು ಸಭೆ ನಡೆಸಿದರು.

ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲು ಸರಕಾರ ಸಿದ್ಧವಿದ್ದು, ಅರಣ್ಯವಾಸಿಗಳು ಸ್ವಯಂ ಪ್ರೇರಿತವಾಗಿ ಸ್ಥಳಾಂತರಕ್ಕೆ ಸಮ್ಮತಿಸಬೇಕು. ಭೀಮಗಢ ದಟ್ಟಾರಣ್ಯದೊಳಗೆ ಒಟ್ಟು 13 ಜನವಸತಿಗಳಲ್ಲಿ 754 ಕುಟುಂಬಗಳಿದ್ದು, 3059 ಜನ ವಾಸಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಈಶ್ವರ್ ಖಂಡ್ರೆ, ಪೂರ್ಣ ಗ್ರಾಮದ ಜನರು ಸ್ಥಳಾಂತರಕ್ಕೆ ಸಮ್ಮತಿಸಿದರೆ ಅಂತಹ ಗ್ರಾಮಗಳ ಜನರಿಗೆ ಪುನರ್ವಸತಿ ಪರಿಹಾರ ನೀಡಿ ಸ್ಥಳಾಂತರಕ್ಕೆ ಕ್ರಮ ವಹಿಸುವಂತೆ ಸೂಚಿಸಿದರು.

ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಈಶ್ವರ್ ಖಂಡ್ರೆ, ಸರಕಾರ ಅರಣ್ಯವಾಸಿಗಳಿಗೆ ಸ್ಥಳಾಂತರಕ್ಕಾಗಿ ನೀಡುವ ಪುನರ್ವಸತಿ ಪರಿಹಾರದ ಹಣ ಅನ್ಯರ ಪಾಲಾಗದಂತೆ ಎಚ್ಚರವಹಿಸುವಂತೆ ಮತ್ತು ಅರಣ್ಯದ ಹೊರಗೆ ಕಂದಾಯ ಭೂಮಿ ಖರೀದಿಸಿ ಬದುಕು ಕಟ್ಟಿಕೊಳ್ಳುವಂತೆ, ಬ್ಯಾಂಕ್ ಖಾತೆಯಲ್ಲಿ ನಿಶ್ಚಿತ ಠೇವಣಿ ಇಡುವಂತೆ ಸಲಹೆ ನೀಡಿದರು.

ಭೀಮಗಢಕ್ಕೆ ಹೋಗುವ ಮಾರ್ಗದಲ್ಲಿ ಕಾಡಿನೊಳಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ ಸಮಸ್ಯೆ ವಿಚಾರಿಸಿದ ಅವರು, ಕಾಡು ಪ್ರಾಣಿಗಳಿಂದ ಆಗುತ್ತಿರುವ ತೊಂದರೆ ಬಗ್ಗೆ ಮಾಹಿತಿ ಪಡೆದರು. ಪರಿಹಾರ ಪಡೆದು ಕಾಡಿನಿಂದ ಸ್ಥಳಾಂತರಗೊಳ್ಳುವಂತೆ ಅವರ ಮನವೊಲಿಸಿದರು.

ಕೊಂಗಲದಲ್ಲಿ 63 ಕುಟುಂಬಗಳು, ಪಸ್ತೋಲಿಯಲ್ಲಿ 36, ಗವಾಳಿಯಲ್ಲಿ 90, ಅಬನಾಳಿಯಲ್ಲಿ 81, ಜಾಮಗಾವ್ ನಲ್ಲಿ 82, ಹೆಮ್ಮಡಗದಲ್ಲಿ 128, ತಾಳೆವಾಡಿಯಲ್ಲಿ 13, ದೇಗಾವ್ ನಲ್ಲಿ 31, ಪಾಲಿಯಲ್ಲಿ 73, ಮೆಂಡಿಲ್ ನಲ್ಲಿ 40, ಕೃಷ್ಣಾಪುರದಲ್ಲಿ 12, ಹೋಲ್ಡಾದಲ್ಲಿ 7 ಹಾಗೂ ಅಮಗಾವ್ ನಲ್ಲಿ 98 ಕುಟುಂಬಗಳಿದ್ದು, ಈ ಪೈಕಿ 1530 ಪುರುಷರು, 1443 ಮಹಿಳೆಯರು ಸೇರಿ ಒಟ್ಟು 3059 ಜನರು ಇಲ್ಲಿ ವಾಸಿಸುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳಗಳು ತುಂಬಿ ಹರಿಯುವ ಕಾರಣ ಕೆಲವು ಜನವಸತಿಗಳು ಸಂಪರ್ಕವನ್ನೇ ಕಳೆದುಕೊಳ್ಳುತ್ತವೆ ಎಂದು ಅಧಿಕಾರಿಗಳು ತಿಳಿಸಿದರು.

ಇದಕ್ಕೂ ಮುನ್ನ ಮಾರ್ಗಮಧ್ಯೆ ಈಶ್ವರ್ ಖಂಡ್ರೆ, ಮಹಾದಾಯಿ ನದಿಯ ವೀಕ್ಷಣೆ ಮಾಡಿ, ಹೆಮ್ಮಡಗಾದ ಭೀಮಗಢ ವನ್ಯಜೀವಿಧಾಮದ ಶಿಬಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್, ಬೆಳಗಾವಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌವ್ಹಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತು ರಾಜ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನಿತಾ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X