Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಕಡಬ ಆ್ಯಸಿಡ್ ದಾಳಿ ಪ್ರಕರಣ: ಸೂಕ್ತ...

ಕಡಬ ಆ್ಯಸಿಡ್ ದಾಳಿ ಪ್ರಕರಣ: ಸೂಕ್ತ ಕ್ರಮಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 March 2024 8:05 PM IST
share
ಕಡಬ ಆ್ಯಸಿಡ್ ದಾಳಿ ಪ್ರಕರಣ: ಸೂಕ್ತ ಕ್ರಮಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಘಟನೆ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಇದೊಂದು ಹೀನಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವ ಉದ್ದೇಶದಿಂದ ಮಾಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಪೊಲೀಸರು ಸಮಗ್ರವಾಗಿ ತನಿಖೆ ಮಾಡುತ್ತಿದ್ದಾರೆ. ಈ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ನಾನು ಕೂಡ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ತ್ವರಿತ ಕ್ರಮಕ್ಕೆ ಮುಂದಾಗಿದೆ. ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ಆಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಾಧ್ಯವಾದಷ್ಟು ಮುನ್ನಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಕಾಲೇಜು ಆವರಣದಲ್ಲಿಯೇ ಯುವಕನೊಬ್ಬ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ. ಈ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿವೆ. ಈಗಾಗಲೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X