Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಪಿಎಂ ಕುಸುಮ್-ಸಿ ಯೋಜನೆಯಡಿ 3000...

ಪಿಎಂ ಕುಸುಮ್-ಸಿ ಯೋಜನೆಯಡಿ 3000 ಮೆ.ವ್ಯಾ. ಸಾಮರ್ಥ್ಯದ ಸೌರ ಯೋಜನೆಗಳ ಅನುಷ್ಠಾನ : ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ16 Dec 2025 8:15 PM IST
share
ಪಿಎಂ ಕುಸುಮ್-ಸಿ ಯೋಜನೆಯಡಿ 3000 ಮೆ.ವ್ಯಾ. ಸಾಮರ್ಥ್ಯದ ಸೌರ ಯೋಜನೆಗಳ ಅನುಷ್ಠಾನ : ಕೆ.ಜೆ.ಜಾರ್ಜ್

ಬೆಳಗಾವಿ : ಪಿಎಂ ಕುಸುಮ್-ಸಿ ಯೋಜನೆಯಡಿ ರಾಜ್ಯಕ್ಕೆ ಎಂಎನ್‍ಆರ್‌ಇ ಯಿಂದ ಹಂಚಿಕೆಯಾಗಿರುವ ಪಂಪ್‍ಸೆಟ್‍ಗಳಿಗೆ ಅನುಗುಣವಾಗಿ ಸುಮಾರು 3000 ಮೆ.ವ್ಯಾ. ಸಾಮರ್ಥ್ಯದ ಸೌರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಮಂಗಳವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿ.ಎನ್.ಜವರಾಯಿಗೌಡ ಪ್ರಶ್ನೆಗೆ ಲಿಖಿತವಾಗಿ ಉತ್ತರಿಸಿರುವ ಸಚಿವರು, ರಾಜ್ಯದಲ್ಲಿ ಪಿ.ಎಂ.ಕುಸುಮ್ ಯೋಜನೆಯಲ್ಲಿ ಪ್ರಸ್ತುತ 415 ಸ್ಥಳಗಳಲ್ಲಿ 2592 ಮೆ.ವ್ಯಾ. ಸಾಮರ್ಥ್ಯದ ಯೋಜನೆಗಳಿಗೆ ಕಾರ್ಯಾದೇಶ ನೀಡಲಾಗಿದೆ ಮತ್ತು ಬಾಕಿ ಉಳಿದ ಸುಮಾರು 410 ಮೆ.ವ್ಯಾ. ಸಾಮರ್ಥ್ಯಕ್ಕೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಕಾರ್ಯಾದೇಶ ನೀಡಲಾಗಿರುವ ಯೋಜನೆಗಳಲ್ಲಿ 213ಮೆ.ವ್ಯಾ. ಸಾಮರ್ಥ್ಯದ ಯೋಜನೆಗಳು ಅನುಷ್ಠಾನಗೊಂಡಿದ್ದು, 1190ಮೆ.ವ್ಯಾ. ಸಾಮರ್ಥ್ಯದ ಯೋಜನೆಗಳು ಪ್ರಗತಿಯಲ್ಲಿದ್ದು ಮತ್ತು 1189 ಮೆ.ವ್ಯಾ. ಸಾಮರ್ಥ್ಯದ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಿದೆ ಎಂದು ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಯೋಜನೆಗೆ ಸಂಬಂಧಿಸಿದಂತೆ ಇರುವ ಅಡಚಣೆಗಳನ್ನು ನಿವಾರಿಸಲು ಕಾಲ-ಕಾಲಕ್ಕೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ. ಅವಶ್ಯವಿರುವ ಖಾಸಗಿ/ಸರಕಾರಿ ಜಮೀನು ದೊರೆಯದಿದ್ದ ಪಕ್ಷದಲ್ಲಿ, ಕೆರೆ ಅಂಗಳದ ಜಮೀನುಗಳನ್ನು ಗುರುತಿಸಿ. ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮೋದನೆ ಪಡೆದು ಪರಿಸರಕ್ಕೆ ಹಾನಿಯಾಗದಂತೆ ಕೈಗೆತ್ತಿಕೊಳ್ಳಲಾಗಿದೆ ಎಂದು ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಉಪಕೇಂದ್ರಗಳ ಬಳಿ ಸೂಕ್ತ ಸರಕಾರಿ ಜಮೀನು ಲಭ್ಯವಿರುವ ಸ್ಥಳಗಳಲ್ಲಿ ಸರಕಾರಿ ಜಮೀನನ್ನು ಈ ಯೋಜನೆಗೆ ಕಾಯ್ದಿರಿಸಲು ಈಗಾಗಲೇ ಕಂದಾಯ ಹಾಗೂ ಇಂಧನ ಇಲಾಖೆಗಳಿಂದ ಜಂಟಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ಕಂದಾಯ ಇಲಾಖೆಯಿಂದ ಇಂಧನ ಇಲಾಖೆಗೆ ಕಾಯ್ದಿರಿಸಿದ ಸರಕಾರಿ ಜಮೀನುಗಳಿಗೆ ಪ್ರತಿ ಎಕರೆಗೆ ಪ್ರತಿ ವರ್ಷಕ್ಕೆ 25 ಸಾವಿರ ರೂ. ನಿಗದಿಪಡಿಸಿ ಪ್ರತಿ 2 ವರ್ಷಗಳಿಗೊಮ್ಮೆ ಶೇ.5ರಂತೆ ಸೌರ ಅಭಿವೃದ್ಧಿದಾರರಿಂದ ನಿಗದಿತ ಉಪಯೋಗ ದರ ಸಂಗ್ರಹಿಸಿ, ಸಂಗ್ರಹವಾದ ಹಣದಿಂದ ಎಲ್‍ಎಡಿಎಫ್ ನಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರಕಾರಿ ಆದೇಶ ಹೊರಡಿಸಲಾಗಿದೆ ಎಂದು ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X