Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವ;...

ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವ; ರಾಜ್ಯಕ್ಕೆ ನೀರು ಬಿಡುವುದು ಕಷ್ಟಕರ: ಸಚಿವ ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ24 Jun 2026 12:07 AM IST
share
ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವ; ರಾಜ್ಯಕ್ಕೆ ನೀರು ಬಿಡುವುದು ಕಷ್ಟಕರ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಮಹಾರಾಷ್ಟ್ರ ರಾಜ್ಯದಲ್ಲಿಯೂ ತೀವ್ರ ನೀರಿನ ಅಭಾವ ಉಂಟಾಗಿರುವುದರಿಂದ ಅಲ್ಲಿಂದ ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡುವುದು ಕಷ್ಟಕರವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಮಾತ್ರವಲ್ಲದೆ ಹಿಂದಿನ ವರ್ಷಗಳಲ್ಲಿಯೂ ರಾಜ್ಯ ಸರ್ಕಾರ ಮಹಾರಾಷ್ಟ್ರಕ್ಕೆ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ನೀರು ದೊರೆತಿಲ್ಲ ಎಂದು ಹೇಳಿದರು. ಕೊಯ್ನಾ ಜಲಾಶಯ ಭರ್ತಿಯಾಗಿದ್ದ ಸಂದರ್ಭಗಳಲ್ಲಿಯೂ ಮಹಾರಾಷ್ಟ್ರ ಸರ್ಕಾರ ನೀರು ಬಿಡುಗಡೆ ಮಾಡಲು ಮುಂದಾಗಿರಲಿಲ್ಲ ಎಂದು ತಿಳಿಸಿದರು.

ಪ್ರಸ್ತುತ ಮಹಾರಾಷ್ಟ್ರದಲ್ಲಿಯೂ ನೀರಿನ ಕೊರತೆ ಎದುರಾಗಿದ್ದು, ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಅಲ್ಲಿನ ಅಧಿಕಾರಿಗಳು ಈಗಾಗಲೇ ತಮ್ಮ ಅಸಮರ್ಥತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಚಿವರು ಹೇಳಿದರು.

ಎರಡು ತಿಂಗಳಿಗೆ ಸಾಕಾಗುವಷ್ಟು ನೀರಿನ ಸಂಗ್ರಹ

ಬೆಳಗಾವಿ ನಗರದಲ್ಲಿ ಮುಂದಿನ ಎರಡು ತಿಂಗಳಿಗೆ ಸಾಕಾಗುವಷ್ಟು ಕುಡಿಯುವ ನೀರಿನ ಸಂಗ್ರಹ ಲಭ್ಯವಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ಭರವಸೆ ನೀಡಿದರು. ನೀರಿನ ಕೊರತೆ ಎದುರಾಗುವ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜು ಸಮರ್ಪಕವಾಗಿ ನಡೆಯುವಂತೆ ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

24×7 ನೀರು ಸರಬರಾಜು ಯೋಜನೆ ಇನ್ನೂ ಪೂರ್ಣಗೊಂಡಿಲ್ಲ

ನಗರದಲ್ಲಿ 24×7 ನಿರಂತರ ನೀರು ಸರಬರಾಜು ಯೋಜನೆ ಜಾರಿಯಲ್ಲಿದ್ದರೂ, ಕೆಲವು ಪ್ರದೇಶಗಳಲ್ಲಿ ಹದಿನೈದು ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆಯಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯೋಜನೆಯ ಕಾಮಗಾರಿಗಳು ಇನ್ನೂ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ನಗರದಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ವಿತರಣಾ ವ್ಯವಸ್ಥೆ ಹಾಗೂ ತಾಂತ್ರಿಕ ಅಡಚಣೆಗಳನ್ನು ಪರಿಗಣಿಸಿ ನೀರು ಪೂರೈಕೆ ಮಾಡಲಾಗುತ್ತಿದೆ. ಯೋಜನೆ ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದ ಬಳಿಕ ನಿರಂತರ ನೀರು ಸರಬರಾಜಿನ ಉದ್ದೇಶವನ್ನು ಸಾಧಿಸಲಾಗುವುದು ಎಂದು ಹೇಳಿದರು.

ಮಹಾನಗರ ಪಾಲಿಕೆಯ ಕಾರ್ಯವೈಖರಿ ಕುರಿತು ಪ್ರತಿಕ್ರಿಯಿಸಿದ ಸಚಿವರು, ಸ್ಥಳೀಯ ನೀರಿನ ಸಮಸ್ಯೆ ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ಮಹಾನಗರ ಪಾಲಿಕೆ ಸಮರ್ಪಕವಾಗಿ ತರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಸ್ಯೆಗಳ ಕುರಿತು ಸ್ಪಷ್ಟ ಮತ್ತು ಸಮಗ್ರ ಮಾಹಿತಿ ದೊರೆತರೆ ಮಾತ್ರ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಂಡು ಸೂಕ್ತ ಪರಿಹಾರ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಚಟುವಟಿಕೆಗಳ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ಇಂತಹ ಪರಿಸ್ಥಿತಿಗಳನ್ನು ಈ ಹಿಂದೆಯೂ ನೋಡಿದ್ದೇವೆ. ಚುನಾವಣೆ ಸಮೀಪ ಬಂದಾಗ ಅದರ ಬಗ್ಗೆ ಚರ್ಚಿಸೋಣ” ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಹಾಗೂ ಮಂತ್ರಿ ಸ್ಥಾನಗಳ ಕುರಿತು ಮಾತನಾಡಿದ ಅವರು, ರಾಜಕೀಯದಲ್ಲಿ ಎಲ್ಲರೂ ಸಚಿವ ಸ್ಥಾನ ಬಯಸುವುದು ಸಹಜ. ಆದರೆ ಎಲ್ಲರಿಗೂ ಅವಕಾಶ ದೊರೆಯುವುದಿಲ್ಲ ಎಂದು ಹೇಳಿದರು. ಬೆಳಗಾವಿ ಜಿಲ್ಲೆಗೆ ಒಂದು ಸಚಿವ ಸ್ಥಾನ ಖಚಿತವಾಗಿದ್ದು, ಹೆಚ್ಚುವರಿ ಸ್ಥಾನ ನೀಡುವ ಅಥವಾ ನೀಡದಿರುವ ನಿರ್ಧಾರ ಹೈಕಮಾಂಡ್‌ಗೆ ಸೇರಿದೆ ಎಂದು ತಿಳಿಸಿದರು.

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆಯ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನೀಟ್ ಪರೀಕ್ಷೆಯ ಅಕ್ರಮಗಳ ಕುರಿತು ಪಕ್ಷದ ಹಿರಿಯ ನಾಯಕರು ಈಗಾಗಲೇ ಪ್ರತಿಕ್ರಿಯೆ ನೀಡಿರುವುದರಿಂದ ಈ ವಿಷಯದಲ್ಲಿ ಹೆಚ್ಚಿನ ಹೇಳಿಕೆ ನೀಡಲು ಇಚ್ಛಿಸುವುದಿಲ್ಲ ಎಂದು ಸಚಿವರು ಹೇಳಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮುಂಗಾರು ಅಧಿವೇಶನ ನಡೆಸುವ ಕುರಿತು ಇನ್ನೂ ಯಾವುದೇ ಅಧಿಕೃತ ಚರ್ಚೆ ನಡೆದಿಲ್ಲ. ಈ ಕುರಿತು ಅಂತಿಮ ನಿರ್ಧಾರವನ್ನು ಡಿ.ಕೆ. ಶಿವಕುಮಾರ್ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹೆಚ್ಚುವರಿಯಾಗಿ ನೀರು ಪೂರೈಸಲಾಗುತ್ತಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದ ಸಚಿವರು, ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಯಾವುದೇ ಹೆಚ್ಚುವರಿ ನೀರು ಪೂರೈಕೆ ಮಾಡಲಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಕೈಗಾರಿಕೆಗಳಿಗೆ ನೀರು ಪೂರೈಕೆ ಮಾಡುವುದಕ್ಕೂ ನಿಗದಿತ ನಿಯಮಗಳು ಮತ್ತು ಮಿತಿಗಳಿದ್ದು, ಅವುಗಳ ವ್ಯಾಪ್ತಿಯಲ್ಲಿಯೇ ನೀರು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಖಾಸಗಿ ಕೈಗಾರಿಕೆಗಳು ತಮ್ಮ ಇಚ್ಛೆಯಂತೆ ನೀರು ಸಾಗಿಸಲು ಅಥವಾ ಬಳಕೆ ಮಾಡಲು ಅವಕಾಶವಿಲ್ಲ. ನೀರಿನ ಬಳಕೆ ಮತ್ತು ಸಾಗಣೆಗೆ ಸಂಬಂಧಿಸಿದ ಕಾನೂನು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಜಿಲ್ಲೆಯ ಕುಡಿಯುವ ನೀರಿನ ಅಗತ್ಯತೆಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

Tags

Satish JarkiholiMaharashtraWater Scarcity
share
ವಾರ್ತಾಭಾರತಿ
ವಾರ್ತಾಭಾರತಿ
Next Story
X