Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ...

ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ ಸ್ಪೀಕರ್‌ ಗೆ ಮಹಾರಾಷ್ಟ್ರ ಸಂಸದ ದೂರು; ಕನ್ನಡ ಸಂಘಟನೆಗಳ ತೀವ್ರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ22 Dec 2025 7:49 PM IST
share
ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ ಸ್ಪೀಕರ್‌ ಗೆ ಮಹಾರಾಷ್ಟ್ರ ಸಂಸದ ದೂರು; ಕನ್ನಡ ಸಂಘಟನೆಗಳ ತೀವ್ರ ಆಕ್ರೋಶ

ಬೆಳಗಾವಿ: ನವೆಂಬರ್ 1ರಂದು ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದನ್ನು ಖಂಡಿಸಿ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಅವರು ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಲೋಕಸಭೆ ಸ್ಪೀಕರ್‌ ಗೆ ದೂರು ನೀಡಿರುವುದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಕನ್ನಡ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು.

ಮಹಾರಾಷ್ಟ್ರ ಏಕೀಕರಣ ಸಮಿತಿಯು ನವೆಂಬರ್ 1ರಂದು ಆಚರಿಸಿದ “ಕಪ್ಪುದಿನ” ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಲಿದ್ದ ಸಂಸದ ಧೈರ್ಯಶೀಲ್ ಮಾನೆಗೆ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್ ಅವರು ರಾಜ್ಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರು. ಇದನ್ನು ತಮ್ಮ ಹಕ್ಕುಗಳ ಉಲ್ಲಂಘನೆ ಎಂದು ಆರೋಪಿಸಿರುವ ಧೈರ್ಯಶೀಲ್ ಮಾನೆ, ಡಿ.20ರಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ.

ಡಿಸಿ ವಿರುದ್ಧ ದೂರು ನೀಡಿರುವುದನ್ನು ಖಂಡಿಸಿ ಕನ್ನಡ ಸಂಘಟನೆಗಳು ರಾಣಿ ಚನ್ನಮ್ಮ ವೃತ್ತದಲ್ಲಿ ಧರಣಿ ನಡೆಸಿ, ಮಾನೆಯವರ ಅಣಕು ಶವಯಾತ್ರೆ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ಈ ವೇಳೆ ಅಣಕು ಶವಯಾತ್ರೆ ತಡೆಯಲು ಮುಂದಾದ ಪೊಲೀಸರ ವಿರುದ್ಧವೂ ಕರವೇ ಮುಖಂಡರು ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, “ಧೈರ್ಯಶೀಲ್ ಮಾನೆ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಡೆ ಗಮನಹರಿಸಬೇಕು. ಅದನ್ನು ಬಿಟ್ಟು ಕರ್ನಾಟಕಕ್ಕೆ ಬಂದು ಭಾಷಾ ಸಾಮರಸ್ಯಕ್ಕೆ ಧಕ್ಕೆ ತಂದು ಕಾನೂನು-ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ವಿರುದ್ಧ ಹಕ್ಕುಚ್ಯುತಿ ಪ್ರಕರಣ ದಾಖಲಿಸಬೇಕು” ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಕನ್ನಡ ಕಳಕಳಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ಕಾರ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದರು.

ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಮಾತನಾಡಿ, “ಜಿಲ್ಲಾಧಿಕಾರಿಗಳ ವಿರುದ್ಧ ದೂರು ಸಲ್ಲಿಸಿರುವುದು ಅಸಮಂಜಸ ಹಾಗೂ ತರ್ಕಹೀನ. ವಾಸ್ತವಾಂಶ ಮರೆಮಾಚಿ ಸಭಾಧ್ಯಕ್ಷ ಪೀಠವನ್ನು ದುರುಪಯೋಗಪಡಿಸಿಕೊಂಡಿದ್ದಾರೆ” ಎಂದು ಆರೋಪಿಸಿದರು. ದೇಶದ ಯಾವುದೇ ಭಾಗದ ಸಂಸದರು ಎಲ್ಲೆಡೆ ಸಂಚರಿಸಬಹುದಾದರೂ, ನವೆಂಬರ್ 1ರಂದು ಗಡಿ ಭಾಗದಲ್ಲಿ ‘ಕಪ್ಪುದಿನ’ ಆಚರಣೆ ಮೂಲಕ ಪ್ರಚೋದನಾತ್ಮಕ ಭಾಷಣಗಳು ನಡೆಯುವ ಹಿನ್ನೆಲೆ ಇರುವುದರಿಂದ ನಿರ್ಬಂಧ ವಿಧಿಸಲಾಗಿತ್ತು. ಈ ಸತ್ಯವನ್ನು ಮಾನೆಯವರು ಮುಚ್ಚಿಟ್ಟಿದ್ದಾರೆ ಎಂದು ಅವರು ಕಿಡಿಕಾರಿದರು.

ಒಟ್ಟಾರೆ, ಗಡಿ ಹಾಗೂ ಭಾಷಾ ವಿಚಾರದಲ್ಲಿ ಪ್ರಚೋದನೆಗೆ ಅವಕಾಶ ನೀಡಬಾರದೆಂಬ ಬೇಡಿಕೆಯೊಂದಿಗೆ ಕನ್ನಡ ಸಂಘಟನೆಗಳು ಜಿಲ್ಲಾಡಳಿತದ ಕ್ರಮಕ್ಕೆ ಬೆಂಬಲ ಸೂಚಿಸಿ, ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.

Tags

BelagaviMaharashtraLok Sabha SpeakerKannada Groups
share
ವಾರ್ತಾಭಾರತಿ
ವಾರ್ತಾಭಾರತಿ
Next Story
X