Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಮಕ್ಕಳಲ್ಲಿ ಖಗೋಳಶಾಸ್ತ್ರದ ಬಗ್ಗೆ ಆಸಕ್ತಿ...

ಮಕ್ಕಳಲ್ಲಿ ಖಗೋಳಶಾಸ್ತ್ರದ ಬಗ್ಗೆ ಆಸಕ್ತಿ ಹೆಚ್ಚಿಸಲು ವಿಜ್ಞಾನ ಕೇಂದ್ರಗಳ ಸ್ಥಾಪನೆ : ಸಚಿವ ಭೋಸರಾಜು

ಹಿಡಕಲ್‌ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ-ಮಿನಿ ತಾರಾಲಯ ಶೀಘ್ರದಲ್ಲಿ ಲೋಕಾರ್ಪಣೆ ಭರವಸೆ

ವಾರ್ತಾಭಾರತಿವಾರ್ತಾಭಾರತಿ20 Jan 2025 6:05 PM IST
share
ಮಕ್ಕಳಲ್ಲಿ ಖಗೋಳಶಾಸ್ತ್ರದ ಬಗ್ಗೆ ಆಸಕ್ತಿ ಹೆಚ್ಚಿಸಲು ವಿಜ್ಞಾನ ಕೇಂದ್ರಗಳ ಸ್ಥಾಪನೆ : ಸಚಿವ ಭೋಸರಾಜು

ಬೆಳಗಾವಿ : ರಾಜ್ಯ ಸರಕಾರ ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನದ‌ ಕುರಿತು ಆಸಕ್ತಿ ಹಾಗೂ ಹೆಚ್ಚಿನ ಜ್ಞಾನ ಒದಗಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಪ್ರಾರಂಭಿಸಿದೆ. ಇಂದು ಶಂಕುಸ್ಥಾಪನೆಯಾಗಿರುವ ಹಿಡಕಲ್ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್‌.ಎಸ್‌.ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು .

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜಲಸಂಪನ್ಮೂಲ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಿಡಕಲ್‌ ಉದ್ಯಾನಕಾಶಿಯಲ್ಲಿ ಸೋಮವಾರ(ಜ.20) ರಾಜಾ ಲಖಮಗೌಡ ಉದ್ಯಾನಕಾಶಿ ಅಭಿವೃದ್ಧಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಉಪಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ ಮಿನಿ ತಾರಾಲಯಗಳಳನ್ನು ಸ್ಥಾಪಿಸಲಾಗಿದೆ. ಇನ್ನುಳಿದ ಮೂರು ಜಿಲ್ಲೆಗಳಲ್ಲಿ ಇವುಗಳ ಸ್ಥಾಪನೆಗೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಯಲ್ಲೇ, ವಿಜ್ಞಾನ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

ಬೆಂಗಳೂರಿನ ಹೆಬ್ಬಾಳದಲ್ಲಿ ಏಷಿಯಾ ಖಂಡದಲ್ಲಿ ನಂಬರ್ ಒನ್ ಮಾದರಿಯಲ್ಲಿ ಸೈನ್ಸ್ ಗ್ಯಾಲರಿ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ‌ ಜಿಲ್ಲೆಗಳಲ್ಲಿ ತಾರಾಲಯ‌ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ. ಮಂಗಳೂರು ಜಿಲ್ಲೆಯ ಪಿಲಿಕುಳಿಯಲ್ಲಿ 350 ಎಕರೆ ಪ್ರದೇಶದಲ್ಲಿ ದೊಡ್ಡ ತಾರಾಲಯವನ್ನು ಸ್ಥಾಪಿಸಲಾಗಿದೆ. ಸರಕಾರದ ವತಿಯಿಂದ ರಾಜ್ಯದ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದ್ದು ಮುಂದಿನ ದಿನಗಳಲ್ಲಿ ಲ್ಯಾಬರೋಟರಿಗಳನ್ನು‌ ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ.

ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತನಾಡಿ‌, ವಿಜ್ಞಾನ ಕೇಂದ್ರದ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಈಗಾಗಲೇ 13 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ತಾರಾಲಯ ಉಪಯೋಗವಾಗಲಿದೆ. ಜಿಲ್ಲೆಯಲ್ಲಿ ಪ್ರವಾಸೊದ್ಯಮಕ್ಕೆ ಉತ್ತೇಜನ ನೀಡುವ ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸಿ ಸರ್ಕಿಟ್ ನಿರ್ಮಿಸಲು ಗೋಕಾಕ್‌ ಫಾಲ್ಸ್, ಬೆಳಗಾವಿಯ ರಾಣಿ ಚನ್ನಮ್ಮ‌ ಮೃಗಾಲಯ ಹಾಗೂ ಹಿಡಕಲ್ ಡ್ಯಾಂ‌ ಯೋಜ‌ನೆಯೊಂದಿಗೆ ಪ್ರವಾಸಿ ಸರ್ಕಿಟ್ ನಿರ್ಮಿಸುವ ಯೋಜನೆ ಸರಕಾರದ್ದಾಗಿದೆ. ಹಿಡಕಲ್ ಡ್ಯಾಂ ಹಿನ್ನೀರಿನಲ್ಲಿ ಜಲಕ್ರೀಡೆಗಳಿಗೂ ಪ್ರಾಶಸ್ತ್ಯವಾಗಿದ್ದು ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.

ಹುಕ್ಕೇರಿ ತಹಶೀಲ್ದಾರ್ ಮಂಜುಳಾ ನಾಯಕ, ಕರ್ನಾಟಕ ನೀರಾವರಿ ನಿಗಮ ನಿಯಮಿತ ಬೆಳಗಾವಿ ಉತ್ತರ ವಲಯದ ಮುಖ್ಯ ಇಂಜಿನಿಯರ್ ಬಿ.ಆರ್ ರಾಠೋಡ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ನೀರಾವರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X