Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಅಕ್ರಮ ಪಡಿತರ ಚೀಟಿ ವಿರುದ್ಧ ವಿಶೇಷ...

ಅಕ್ರಮ ಪಡಿತರ ಚೀಟಿ ವಿರುದ್ಧ ವಿಶೇಷ ಕಾರ್ಯಾಚರಣೆ : ಸಚಿವ ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ9 Dec 2024 5:52 PM IST
share
ಅಕ್ರಮ ಪಡಿತರ ಚೀಟಿ ವಿರುದ್ಧ ವಿಶೇಷ ಕಾರ್ಯಾಚರಣೆ : ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ : ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಸೋಮವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯರಾದ ಟಿ.ಎನ್.ಜವರಾಯಿಗೌಡ, ಸಿ.ಟಿ.ರವಿ, ನಿರಾಣಿ ರುದ್ರಪ್ರ ಹನುಮಂತಪ್ಪ ಹಾಗೂ ಜೆಡಿಎಸ್ ಸದಸ್ಯ ಶರವಣ ಟಿ.ಎ., ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯಾದ್ಯಂತ 2021ರ ಜನವರಿಯಿಂದ 2023ರ ಮೇ ವರೆಗಿನ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿ(ಬಿಪಿಎಲ್)ಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ 13,51,30,858 ರೂ.ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರಕಾರ ಕ್ರಮವಹಿಸಿದೆ ಎಂದರು.

ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಪ್ರಕರಣ ದಾಖಲಿಸಿ, ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದು ಕೆ.ಎಚ್.ಮುನಿಯಪ್ಪ ಹೇಳಿದರು.

ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿ(ಎಪಿಎಲ್)ಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದ ಕೆ.ಎಚ್.ಮುನಿಯಪ್ಪ ಅವರು, ಸರಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್‍ಟಿ ಅಥವಾ ಸಿಎಸ್‍ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್‍ಐಸಿಯಿಂದ ಕೆಎಸ್‍ಡಿಸಿಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಕೆ.ಎಚ್.ಮುನಿಯಪ್ಪ ತಿಳಿಸಿದರು.

ಪಡಿತರ ಅಕ್ರಮ ಸಾಗಣೆ: 213 ಎಫ್‍ಐಆರ್, 238 ಮಂದಿ ಬಂಧನ..!

ಪಡಿತರ ಅಕ್ರಮ ಸಾಗಣೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್‍ಐಆರ್ ದಾಖಲಿಸಿ ಒಟ್ಟು 2,68,07,872 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಆಹಾರ ಇಲಾಖೆಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X