Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಕಳಪೆ ಆಹಾರ ಪೂರೈಕೆಯಾದರೆ ಉಪ ನಿರ್ದೇಶಕರ...

ಕಳಪೆ ಆಹಾರ ಪೂರೈಕೆಯಾದರೆ ಉಪ ನಿರ್ದೇಶಕರ ಮೇಲೆ ಕಠಿಣ ಕ್ರಮ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ27 Jun 2024 7:46 PM IST
share
ಕಳಪೆ ಆಹಾರ ಪೂರೈಕೆಯಾದರೆ ಉಪ ನಿರ್ದೇಶಕರ ಮೇಲೆ ಕಠಿಣ ಕ್ರಮ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ

ಯರಗಟ್ಟಿ(ಬೆಳಗಾವಿ) : ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, "ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದಿಂದ ಕೂಡಿದ್ದರೆ ಎಂಎಸ್‍ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು. ಅಂಗನವಾಡಿ ಮಕ್ಕಳು ಸ್ವಂತ ಮಕ್ಕಳು ಎಂದು ತಿಳಿದು ಉತ್ತಮ ಗುಣಮಟ್ಟದ ಪೂರಕ ಆಹಾರಗಳನ್ನು ಒದಗಿಸಬೇಕು" ಎಂದು ಹೇಳಿದರು.

ʼಕಳಪೆ ಆಹಾರಗಳ ಪೂರೈಕೆಯನ್ನು ಯಾವುದೇ ಕಾರಣದಿಂದ ಸಹಿಸಲು ಸಾಧ್ಯವಿಲ್ಲ. ಸ್ಥಳೀಯ ಮಟ್ಟದಲ್ಲಿ ತಪ್ಪುಗಳಾದರೆ ಅದು ಮೇಲ್ಮಟ್ಟದವರೆಗೆ ಎಲ್ಲರಿಗೂ ಕೆಟ್ಟ ಹೆಸರು ತರುತ್ತದೆ. ಮಕ್ಕಳ ಹಾಗೂ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಗುಣಮಟ್ಟಕ್ಕೆ ಅತೀ ಹೆಚ್ಚು ಆದ್ಯತೆ ನೀಡಬೇಕುʼ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಾಕೀತು ಮಾಡಿದರು.

ಘಟಕದ ಪ್ರತಿಯೊಂದು ಉತ್ಪನ್ನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಯಾವುದಾದರೂ ಕಳಪೆ ಎಂದು ಕಂಡು ಬಂದರೆ ಘಟಕದವರೇ ತಿರಸ್ಕರಿಸಬೇಕು. ಎಲ್ಲ ಉತ್ಪನ್ನಗಳನ್ನು ಸ್ವಚ್ಛಗೊಳಿಸಿ ಪೂರೈಸಬೇಕು. ಈ ವಿಷಯದಲ್ಲಿ ತಪ್ಪಾದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅಂಗನವಾಡಿ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಭಾಗಗಳನ್ನು ಸಂಪೂರ್ಣ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ಎಂಎಸ್‍ಪಿಸಿ ಘಟಕಗಳ ಸುಧಾರಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ವಿಶ್ವಾಸ್ ವೈದ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X