ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರ ಸಾವು

ಬೆಳಗಾವಿ : ತಾಲೂಕಿನ ಹಿರೇಬಾಗೆವಾಡಿ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ, ಕಾರು ಮತ್ತು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಹರಿದ ಲಾರಿ ಪರಿಣಾಮ ಇಬ್ಬರು ಸ್ಥಳದಲ್ಲೇ ಅಸುನೀಗಿದ್ದು, ಮೃತರ ವಿವರಗಳು ಸದ್ಯಕ್ಕೆ ತಿಳಿದು ಬಂದಿಲ್ಲ. ಲಾರಿ ಚಾಲಕನ ಶರವೇಗದ ಚಾಲನೆಯಿಂದಾಗಿ ಭೀಕರ ಸ್ವರೂಪದ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯಲ್ಲಿ ನಾಲ್ಕೈದು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ತಾಲೂಕಿನ ಹಿರೇಬಾಗೆವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
Next Story