ಸಿಎಂ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆ ಇರೋದೂ ಇಲ್ಲ: ಡಿಕೆಶಿ

PC: x.com/DKShivakumar
ಬೆಳಗಾವಿ: ಯಾವಾಗಲೂ ನಮ್ಮದು ಒಂದೇ, ಅದು ಏಕತೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆ ಇರೋದೂ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಡಿಸಿಎಂ ಈ ರೀತಿ ಪ್ರತಿಕ್ರಿಯಿಸಿದರು.
ಯತೀಂದ್ರ “ಅವರ ಹೇಳಿಕೆ ಏನು ಅಂತ ನನಗೆ ಅರ್ಥವಾಗಿಲ್ಲ. ಅವರ ಜೊತೆ ಮಾತನಾಡುತ್ತೇನೆ,” ಎಂದು ಉಪಮುಖ್ಯಮಂತ್ರಿ ಹೇಳಿದರು.
Next Story





