Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಅಮಾನತುಗೊಳಿಸಿ ಆದೇಶ

ವಾರ್ತಾಭಾರತಿವಾರ್ತಾಭಾರತಿ20 Dec 2023 10:31 PM IST
share
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಅಮಾನತುಗೊಳಿಸಿ ಆದೇಶ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾಗಿ ಈ ಹಿಂದೆ ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ವಿರುದ್ಧ ಜಿಲ್ಲಾ ಕಚೇರಿ ಸಿಬ್ಬಂದಿಗಳಿಗೆ ಹಾಗೂ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಿರುಕುಳ, ಮಾನಸಿಕ ಹಿಂಸೆ, ಮಹಿಳಾ ಸಿಬ್ಬಂದಿಗಳ ಜೊತೆ ದುರ್ನಡತೆ, ದಬ್ಬಾಳಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿಬಂದಿದ್ದು, ಸಾರ್ವಜನಿಕರ ಮುಂದೆ ಸಿಬ್ಬಂದಿಗಳನ್ನು ಅವಮಾನಿಸುತ್ತಿದ್ದರು ಎನ್ನುವ ಆರೋಪಗಳಿವೆ.

ಅಲ್ಲದೇ ಕಚೇರಿ ಸಮಯ ಮುಗಿದ ನಂತರವೂ ಅವಶ್ಯಕತೆ ಇಲ್ಲದಿದ್ದರೂ ಮಹಿಳಾ ಸಿಬ್ಬಂದಿಗಳನ್ನು ರಾತ್ರಿ 8-9 ಗಂಟೆವರೆಗೆ ಕಚೇರಿಯಲ್ಲಿ ಉಳಿಯುವಂತೆ ಆದೇಶಿಸಿದ್ದರು. ಮನೆಗೆ ಹೋದ ಬಳಿಕವೂ ಸಿಬ್ಬಂದಿಗಳಿಗೆ ರಾತ್ರಿ 10-11 ಗಂಟೆಗೆ ಕರೆ ಮಾಡಿ ಕೆಲಸ ಹೇಳುತ್ತಿದ್ದರು. ಇಲಾಖೆಯ ಕಾರ್ಯಕ್ರಮ ನಡೆಯುತ್ತಿದ್ದಾಗ ಬೇರೆ ಇಲಾಖೆ ಅಧಿಕಾರಿಗಳ ಎದುರಿಗೆ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳನ್ನು ಕೆಟ್ಟ ಶಬ್ದಗಳಿಂದ ಬೈದು ಅವಮಾನಿಸುತ್ತಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿಗಳು ಬಸವರಾಜು ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದರು.

ಅಲ್ಲದೇ ಚಿಕ್ಕೋಡಿ ಸಂಸದ ಅಣ್ಣಸಾಹೇಬ ಜೊಲ್ಲೆ ಸೇರಿದಂತೆ ಹಲವರು ಎ.ಎಂ.ಬಸವರಾಜು ವಿರುದ್ಧ ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದರು. ಮಾತ್ರವಲ್ಲ ಬಸವರಾಜು ಅವರನ್ನು ಬೆಳಗಾವಿ ಜಿಲ್ಲೆಯಿಂದ ಬೇರೆಕಡೆಗೆ ವರ್ಗಾವಣೆ ಮಾಡಬಹುದಾಗಿದೆ ಅಥವಾ ಚುನಾವಣಾ ಕರ್ತವ್ಯದಿಂದ ನಿರ್ಬಂಧಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದರು.

ಇತ್ತೀಚೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಮತ್ತೆ ಬೆಳಗಾವಿಗೆ ಆಗಮಿಸಿ ಹಾಲಿ ಉಪನಿರ್ದೇಶಕ ನಾಗರಾಜ ಅವರು ಸುವರ್ಣ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತನಗೆ ನ್ಯಾಯಾಲಯದಿಂದ ಆದೇಶವಾಗಿದೆ ಎಂದು ಹೇಳಿ ಕಚೇರಿಗೆ ಹಾಜರಾಗಿ ಸಿಬ್ಬಂದಿಯನ್ನು ಅವಾಚ್ಯವಾಗಿ ಬೈದು, ಅನುಚಿತವಾಗಿ ವರ್ತಿಸಿದ್ದರು ಎನ್ನುವ ಆರೋಪ ಬಸವರಾಜು ಮೇಲಿದೆ.

ಪರಿಶಿಷ್ಟ ಜಾತಿಯ ನೌಕರರಿಗೆ ಜಾತಿ ನಿಂದನೆ ಮಾಡಿದ ಆರೋಪ, ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಮೊದಲಾದ ಆರೋಪಗಳು ಸಹ ಇವರ ಮೇಲಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್., ಅವರು ಬಸವರಾಜು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X