Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಪ್ರಜ್ವಲ್ ಪ್ರಕರಣ | ದೇವೇಗೌಡರ ಕುಟುಂಬ...

ಪ್ರಜ್ವಲ್ ಪ್ರಕರಣ | ದೇವೇಗೌಡರ ಕುಟುಂಬ ರಾಜಕೀಯದಿಂದ ಹಿಂದೆ ಸರಿಯಬೇಕು : ವೀರಪ್ಪ ಮೊಯ್ಲಿ

ವಾರ್ತಾಭಾರತಿವಾರ್ತಾಭಾರತಿ2 May 2024 8:18 PM IST
share
ಪ್ರಜ್ವಲ್  ಪ್ರಕರಣ | ದೇವೇಗೌಡರ ಕುಟುಂಬ ರಾಜಕೀಯದಿಂದ ಹಿಂದೆ ಸರಿಯಬೇಕು : ವೀರಪ್ಪ ಮೊಯ್ಲಿ

ಬೆಳಗಾವಿ : ‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‍ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ತಲೆ ತಗ್ಗಿಸಬೇಕು. ಅವರ ಕುಟುಂಬವೇ ರಾಜಕೀಯ ಕ್ಷೇತ್ರದಿಂದ ಹಿಂದೆ ಸರಿಯಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಒತ್ತಾಯಿಸಿದ್ದಾರೆ.

ಗುರುವಾರ ನಗರದಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಅವರ ಪುತ್ರ ಹಾಗೂ ಮೊಮ್ಮಗನಿಂದ ಸುಮಾರು ಎರಡು ಸಾರವಿಕ್ಕೂ ಹೆಚ್ಚು ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಕೆಟ್ಟ ಹೆಸರು. ದೇಶದ ಎದುರು ಕರ್ನಾಟಕ ರಾಜ್ಯವು ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ದೂರಿದರು.

ಲೈಂಗಿಕ ಹಗರಣದ ಮೂಲ ಸೂತ್ರದಾರ ಪ್ರಜ್ವಲ್ ಜತೆ ಪ್ರಧಾನಿ ಮೋದಿ ವೇದಿಕೆ ಹಂಚಿಕೊಂಡಿದ್ದಾರೆ. ಈ ಮಧ್ಯೆ ಆತ ವಿದೇಶಕ್ಕೆ ತೆರಳಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಲಗಿದ್ದಾರೆಯೇ?. ಇಂತಹ ಕೃತ್ಯ ಎಸಗಿ, ಹಣ ದೋಚಿಕೊಂಡು ದೇಶದಿಂದ ಪರಾರಿಯಾಗುತ್ತಿದ್ದಾರೆ. ಕೇಂದ್ರದಲ್ಲಿ ಇಂತಹ ಸರಕಾರ ಇದ್ದರೆ ಏನು ಪ್ರಯೋಜನ ಎಂದು ವೀರಪ್ಪ ಮೊಯ್ಲಿ ಇದೇ ವೇಳೆ ಕಿಡಿಕಾರಿದರು.

ಪ್ರಧಾನಿ ಮೋದಿ ನಾರಿ ಶಕ್ತಿ, ಬೇಟಿ ಪಡಾವೋ, ಬೇಟಿ ಬಚಾವೋ ಎಂದು ಹೇಳುತ್ತಾರೆ. ಯುಪಿಎ ಸಮಯದಲ್ಲಿ 3ಲಕ್ಷ ಮಹಿಳೆಯರ ಮೇಲಿನ ದೌರ್ಜನ್ಯಗಳ ವರದಿ ಆಗಿತ್ತು. ಈಗ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ 22ಲಕ್ಷ ದಾಟಿದೆ. ಕೇಂದ್ರ ಸರಕಾರದ ಬಳಿಯೇ ರಾಷ್ಟ್ರೀಯ ಅಪರಾಧ ದಾಖಲೆಗಳಿಂದ ಮಾಹಿತಿ ಸಿಕ್ಕಿದೆ ಎಂದು ಅವರು ವಿವರ ನೀಡಿದರು.

‘ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಮತ ಕೇಳಲು ನೈತಿಕತೆ ಇಲ್ಲ. ಮೋದಿ ಬಲಗಡೆ ಬಿಎಸ್‍ವೈ, ಎಡಗಡೆ ದೇವೇಗೌಡ ಇರುತ್ತಾರೆ. ಈ ಇಬ್ಬರೂ ಬಿಜೆಪಿಗೆ ಮೈನಸ್. ಮೈನಸ್ ಯಾವತ್ತೂ ಪ್ಲಸ್ ಆಗುವುದಿಲ್ಲ. ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಉತ್ತರ ಪ್ರದೇಶದಲ್ಲೂ ಕಾಂಗ್ರೆಸ್ ಚೇತರಿಸಿಕೊಳ್ಳಲಿದ್ದು, ದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X