Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಗ್ರಾಮೀಣ ಭಾಗದಲ್ಲಿ ಖಾತಾ ನಿಯಮಕ್ಕೆ...

ಗ್ರಾಮೀಣ ಭಾಗದಲ್ಲಿ ಖಾತಾ ನಿಯಮಕ್ಕೆ ಕಾಲಾವಕಾಶ ಬೇಕು : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ17 Dec 2025 7:56 PM IST
share
ಗ್ರಾಮೀಣ ಭಾಗದಲ್ಲಿ ಖಾತಾ ನಿಯಮಕ್ಕೆ ಕಾಲಾವಕಾಶ ಬೇಕು : ಪ್ರಿಯಾಂಕ್ ಖರ್ಗೆ

ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿನ ಕಂದಾಯ ಜಮೀನಿನಲ್ಲಿ ನಿವೇಶನವನ್ನು ಕೇವಲ ಕರಾರು ಒಪ್ಪಂದ ಪತ್ರದಲ್ಲಿ ಖರೀದಿಸಿ, ಮನೆ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡಿ, ಖಾತಾ ಒದಗಿಸುವುದಕ್ಕೆ ನಿಯಮಗಳನ್ನು ರೂಪಿಸಲು ಕಾಲಾವಕಾಶ ಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಜೆ.ಎನ್.ಗಣೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಕಂದಾಯ ನಿವೇಶನಗಳಿಗೆ ಖರೀದಿಯ ಕ್ರಯಪತ್ರ ಮುಂತಾದ ದಾಖಲೆಗಳನ್ನು ಪರಿಶೀಲಿಸಿ, ಇ-ಸ್ವತ್ತು ನೀಡಿ, ಅವುಗಳನ್ನು ತೆರಿಗೆ ವ್ಯಾಪ್ತಿಗೆ ಸೇರಿಸಲು ಕ್ರಮ ವಹಿಸಿದ್ದು, ಈವರೆಗೆ 2,936 ಅರ್ಜಿಗಳು ಸ್ವೀಕೃತವಾಗಿವೆ. ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ ಅಥವಾ ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿನ ನಿವಾಸಿಗಳಿಗೆ ಭೂಸುಧಾರಣಾ ಕಾಯ್ದೆ ಅನ್ವಯ ಹಕ್ಕುಪತ್ರಗಳನ್ನು ಕಂದಾಯ ಇಲಾಖೆಯಿಂದ ವಿತರಿಸಲು ಅವಕಾಶ ಕಲ್ಪಿಸಲಾಗಿದ್ದು, ಕಂದಾಯ ಇಲಾಖೆಯಿಂದ ಹಕ್ಕುಪತ್ರ ಒದಗಿಸಿದಲ್ಲಿ, ಗ್ರಾಮ ಪಂಚಾಯತಿಗಳಿಗೆ ಖಾತೆ ವಿತರಣೆ ಮಾಡಲು ಅವಕಾಶವಿದೆ.

ಆದರೆ ಕೇವಲ ಕರಾರು ಪತ್ರದ ಆಧಾರದಲ್ಲಿ ನಿವೇಶನ ಖರೀದಿಸಿ, ವಸತಿ ನಿರ್ಮಿಸಿದವರಿಗೆ, ಒಂದು ಬಾರಿಯ ಪರಿಹಾರವಾಗಿ ಖಾತಾ ಮಾಡಿಕೊಡಲು ನಿಯಮಗಳನ್ನು ರೂಪಿಸಬೇಕಾಗುತ್ತದೆ. ಇದು ತಕ್ಷಣಕ್ಕೆ ಆಗುವ ಕೆಲಸವಲ್ಲ, ಇದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿ ಇದಕ್ಕೆ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದರು.


Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X