Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಕುಡತಿನಿ ಭೂ ಸಂತ್ರಸ್ತರ ಬೇಡಿಕೆಗಳನ್ನು...

ಕುಡತಿನಿ ಭೂ ಸಂತ್ರಸ್ತರ ಬೇಡಿಕೆಗಳನ್ನು ಮಾನವೀಯತೆಯ ಆಧಾರದಲ್ಲಿ ಪರಿಹರಿಸಿ : ವೈ.ಎಂ. ಸತೀಶ್

ವಾರ್ತಾಭಾರತಿವಾರ್ತಾಭಾರತಿ9 Dec 2025 4:33 PM IST
share
ಕುಡತಿನಿ ಭೂ ಸಂತ್ರಸ್ತರ ಬೇಡಿಕೆಗಳನ್ನು ಮಾನವೀಯತೆಯ ಆಧಾರದಲ್ಲಿ ಪರಿಹರಿಸಿ : ವೈ.ಎಂ. ಸತೀಶ್

ಬೆಳಗಾವಿ/ಬಳ್ಳಾರಿ, ಡಿ. 09: ಒಂದು ಸಾವಿರದ ಎಂಭತ್ತೊಂಬತ್ತು ದಿನಗಳಿಂದ ಕುಡತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ 12,000 ಎಕರೆ ಭೂಮಿಯ ಭೂ ಸಂತ್ರಸ್ತ ರೈತರ ಬೇಡಿಕೆಗಳನ್ನು ಮಾನವೀಯತೆಯ ಆಧಾರದ ಮೇಲೆ ಶೀಘ್ರದಲ್ಲೇ ಈಡೇರಿಸಬೇಕು ಎಂದು ಬಳ್ಳಾರಿ-ವಿಜಯನಗರ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಸದಸ್ಯರಾದ ವೈ.ಎಂ.ಸತೀಶ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಳಗಾವಿಯ ʼಸುವರ್ಣ ವಿಧಾನಸೌಧʼದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ಅವರಲ್ಲಿ ಪ್ರಶ್ನೆ ಕೇಳಿದ ಶಾಸಕ ವೈ.ಎಂ.ಸತೀಶ್ ಅವರು, ಕುಡತಿನಿ, ವೇಣಿವೀರಾಪುರ, ಸಿದ್ದಮ್ಮನಹಳ್ಳಿ, ಹರಗಿನಡೋಣಿ ಸೇರಿ ಸುತ್ತಲಿನ ವಿವಿಧ ಗ್ರಾಮಗಳ ಭೂಮಿಗಳನ್ನು ಸರ್ಕಾರ (ಕೆಐಡಿಬಿ) ಸ್ವಾಧೀನ ಮಾಡಿಕೊಂಡು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನೀಡಿದೆ. ಆದರೆ, ಕೈಗಾರಿಕೆಗಳು ಪ್ರಾರಂಭವಾಗದೇ ಉದ್ಯೋಗ ಸಿಗದೇ ಭೂ ಸಂತ್ರಸ್ತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಈಡಾಗುತ್ತಿವೆ. ಅಲ್ಲದೇ, ಹೆಚ್ಚಿನ ಪರಿಹಾರ ನೀಡಲು ವಿವಿಧ ನ್ಯಾಯಾಲಯಗಳು ಆದೇಶ ನೀಡಿದ್ದು, ಪ್ರತಿಭಟನೆ ನಡೆಸುತ್ತಿರುವ ಭೂ ಸಂತ್ರಸ್ತರ ಬೇಡಿಕೆಗಳನ್ನು ಸರ್ಕಾರ ಮಾನವೀಯತೆಯ ಆಧಾರದ ಮೇಲೆ ತ್ವರಿತವಾಗಿ ಈಡೇರಿಸಬೇಕು ಎಂದು ಆಗ್ರಹಿಸಿದರು.

ಈ ಪ್ರಶ್ನೆಗೆ ಉತ್ತರಿಸಿದ ಎಂ.ಬಿ. ಪಾಟೀಲ್ ಅವರು , ಮೆ. ಆರ್ಸೆಲರ್ ಮಿತ್ತಲ್ ಇಂಡಿಯಾ ಲಿ, ಮೆ. ಉತ್ತಮ್ ಗಾಲ್ವಾ ಫೆರೋಸ್ ಲಿ, ಮೆ. ಕರ್ನಾಟಕ ವಿಜಯನಗರ ಸ್ಟೀಲ್ ಲಿ, (ಎನ್‍ಎಂಡಿಸಿ) ಯೋಜನೆಗಳಿಗಾಗಿ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲಾಗಿದೆ. ಈ ಮೂರೂ ಕೈಗಾರಿಗಳ ಭೂ ಸಂತ್ರಸ್ತರು ಹೆಚ್ಚುವರಿ ಪರಿಹಾರಕ್ಕಾಗಿ ನ್ಯಾಯಾಲಯಗಳಲ್ಲಿ ದಾವೆ ಹೂಡಿದ್ದಾರೆ. ಆರ್ಸೆಲರ್ ಮಿತ್ತಲ್ ಇಂಡಿಯಾವು ಪ್ರತೀ ಎಕರೆಗೆ 1.30 ಕೋಟಿ ರೂ. ಪರಿಹಾರ ಪಾವತಿಗೆ ಆದೇಶ ನೀಡಿದೆ. ಈ ಮೊತ್ತವನ್ನು ಕಂಪನಿಯು ದಾವೆದಾರರಿಗೆ ಪಾವತಿಸಿದೆ. ಅಲ್ಲದೇ, ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ 657 ಎಕರೆ ಜಮೀನುಗಳಿಗೂ ಆರ್ಸೆಲರ್ ಮಿತ್ತಲ್ ಕಂಪನಿಯು ಇದೇ ರೀತಿಯಲ್ಲಿ ಪರಿಹಾರವನ್ನು ಪಾವತಿ ಮಾಡಬೇಕಿದೆ ಎಂದು ವಿವರಿಸಿದರು.

ಉತ್ತಮ್ ಗಾಲ್ವಾ ಫೆರೋಸ್ ಲಿಮಿಟೆಡ್ ಕಂಪನಿಯು ಸ್ವಾಧೀನ ಮಾಡಿಕೊಂಡಿರುವ ಒಟ್ಟು ಭೂಮಿಯ ಪೈಕಿ 441 ಎಕರೆ ಭೂಮಿಗೆ ಸಾಮಾನ್ಯ ಐ ತೀರ್ಪು ರಚಿಸಲಾಗಿದೆ. ಈ ಪೈಕಿ 298 ಎಕರೆ ಜಮೀನಿನ ಮಾಲಕರು ಹೆಚ್ಚಿನ ಪರಿಹಾರ ಕೋರಿ ನ್ಯಾಯಾಲಯಗಳಲ್ಲಿ ದಾವೆ ದಾಖಲಿಸಿದ್ದು, ನವೆಂಬರ್ - 2024 ರಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ಪ್ರಕಾರ ಕಂಪನಿಯು 17 ಕೋಟಿ ರೂಪಾಯಿ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಿದೆ. ಅಲ್ಲದೇ, ಮುಖ್ಯಮಂತ್ರಿಗಳ ಜೊತೆ ಭೂ ಸಂತ್ರಸ್ತರ ಸಭೆ ನಡೆದಿದೆ. ಈ ಸಭೆಯಲ್ಲಿ ಪ್ರತಿಭಟನಾ ನಿರತರದಲ್ಲಿ ಸಮಯಾವಕಾಶ ಕೇಳಲಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ವೈ.ಎಂ. ಸತೀಶ್ ಅವರು, ಭೂ ಸಂತ್ರಸ್ತ ಪ್ರತಿಭಟನಾ ನಿರತರು, 15 ವರ್ಷಗಳಿಂದ ಭೂ ಸಂತ್ರಸ್ತ ಕುಟುಂಬದ ಸದಸ್ಯರು ಉದ್ಯೋಗ - ಹೆಚ್ಚಿನ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಯ ನಿರೀಕ್ಷೆಯಲ್ಲಿದ್ದಾರೆ. ಮಾನವೀಯತೆಯ ಆಧಾರದ ಮೇಲೆ ಹೆಚ್ಚಿನ ಪರಿಹಾರ ಅಥವಾ ಸ್ವಾಧೀನ ಮಾಡಿಕೊಂಡಿರುವ ಭೂಮಿಯನ್ನು ಹಿಂದಿರುಗಿಸಿ ಕೃಷಿಯನ್ನು ನಡೆಸಲು ಸಹಕಾರ ನೀಡಬೇಕು' ಎಂದು ಮನವಿ ಮಾಡಿದ್ದಾರೆ.

ಸಚಿವ ಎಂ.ಬಿ. ಪಾಟೀಲ್ ಅವರು, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅಡ್ವಕೇಟ್ ಜನರಲ್ ಅವರ ಜೊತೆಯಲ್ಲಿ ಸಭೆ ನಡೆದಿದೆ. ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆಗಳಿವೆ. ಉತ್ತಮ್ ಗಾಲ್ವಾ ಫೆರೋಸ್ ಲಿಮಿಟೆಡ್ ಕೈಗಾರಿಕೆಯ ಸ್ವರೂಪವನ್ನು ಬದಲಾವಣೆ ಮಾಡಲು ಕೋರಿದ್ದು, ಅರ್ಜಿ ಸಲ್ಲಿಸಲು ಸರ್ಕಾರ ಕೋರಿದೆ. ಆರ್ಸೆಲರ್ ಮಿತ್ತಲ್ ಇಂಡಿಯಾ ಬೇರೆ ರಾಜ್ಯದಲ್ಲಿ 1 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿ ಭಾರತದಲ್ಲಿಯೇ ಅತಿ ದೊಡ್ಡದಾದ ಉಕ್ಕು ಕಾರ್ಖಾನೆಯನ್ನು ನಿರ್ಮಾಣ ಮಾಡುತ್ತಿದೆ. ಪ್ರತಿಭಟನಾ ನಿರತರ ಬೇಡಿಕೆಗಳನ್ನು ಮಾನವೀಯತೆಯ ಆಧಾರದ ಮೇಲೆ ಪರಿಹರಿಸಲು ಪ್ರಯತ್ನಿಸಲಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X