400 ಕೋಟಿ ರೂ. ದರೋಡೆ ಪ್ರಕರಣ | ಎಸ್ಐಟಿ ತನಿಖೆ ಪಾರದರ್ಶಕವಾಗಿಲ್ಲ : ಎಸ್ಪಿಗೆ ದೂರುದಾರನ ಪತ್ರ

ಸಾಂದರ್ಭಿಕ ಚಿತ್ರ | PC : gemini AI
ಬೆಳಗಾವಿ : ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ತಿರುವು ಸಿಕ್ಕಿದೆ. ಪ್ರಕರಣದ ದೂರುದಾರ ಸಂದೀಪ್ ದತ್ತಾ ಪಾಟೀಲ್ ಬೆಳಗಾವಿಯಲ್ಲಿ ಎಫ್ಐಆರ್ ದಾಖಲಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಅವರಿಗೆ ಪತ್ರ ಬರೆದಿದ್ದಾರೆ.
ಮಹಾರಾಷ್ಟ್ರದ ಎಸ್ಐಟಿ ತನಿಖೆ ಪಾರದರ್ಶಕವಾಗಿಲ್ಲ ಎಂದು ಆರೋಪಿಸಿರುವ ಸಂದೀಪ್ ಪಾಟೀಲ್, ಘಟನೆಗೆ ಸಂಬಂಧಿಸಿದ ಕೆಲವು ಆಡಿಯೊ ದಾಖಲೆಗಳು ನಮ್ಮ ಬಳಿ ಇರುವುದಾಗಿ ತಿಳಿಸಿದ್ದಾರೆ. ಆ ದಾಖಲೆಗಳ ಆಧಾರದ ಮೇಲೆ ಬೆಳಗಾವಿ ಪೊಲೀಸರು ಎಫ್ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Next Story




