ಯತೀಂದ್ರ ಹೇಳಿಕೆಗೂ ಸಿಎಂ ಸ್ಥಾನದ ವಿಚಾರಕ್ಕೂ ಸಂಬಂಧವಿಲ್ಲ : ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ
ಬೆಳಗಾವಿ : ‘ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ‘ಅಹಿಂದ ನಾಯಕತ್ವ’ದ ಬಗ್ಗೆ ಹೇಳಿಕೆ ನೀಡಿದ್ದಾರೆಯೇ ಹೊರತು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಗ್ಗೆ ಅಲ್ಲ’ ಎಂದು ಲೋಕೋಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಪಕ್ಷದ ಕಾರ್ಯ ಚಟುವಟಿಕೆಗಳೇ ಬೇರೆ, ಅಹಿಂದ ನಾಯಕತ್ವವೇ ಬೇರೆ. ಮುಖ್ಯಮಂತ್ರಿ ಹುದ್ದೆಗೂ, ಅಹಿಂದ ನಾಯಕತ್ವಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ದಿಲ್ಲಿಯಲ್ಲೇ ತೀರ್ಮಾನ: ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದ್ದಾರೆ. ಆ ಬಗ್ಗೆ ಬೆಂಗಳೂರು ಮತ್ತು ದಿಲ್ಲಿ ಮಟ್ಟದಲ್ಲಿ ಚರ್ಚೆ ಆಗಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
Next Story





