ಈ.ಡಿ. ದಾಳಿಗೆ ಸಂಬಂಧಿಸಿದ ದೂರುದಾರರ ಬಗ್ಗೆ ಖಚಿತ ಮಾಹಿತಿ ಇಲ್ಲ : ಸತೀಶ್ ಜಾರಕಿಹೊಳಿ

ಬೆಳಗಾವಿ : ಜಾರಿ ನಿರ್ದೇಶನಾಲಯದ ದಾಳಿಗೆ ಸಂಬಂಧಿಸಿದಂತೆ ಇಂತಹವರೇ ದೂರು ನೀಡಿದ್ದಾರೆ ಎಂಬ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ. ಈ ಕುರಿತು ಚರ್ಚಿಸಿ, ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ ಬಳಿಕವೇ ಪ್ರತಿಕ್ರಿಯಿಸಲಾಗುವುದು. ಸೂಕ್ತ ದಾಖಲೆಗಳಿಲ್ಲದೆ ಯಾರ ಮೇಲೂ ಆರೋಪ ಮಾಡಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ.ಡಿ. ದಾಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಪರಿಶೀಲಿಸಿದ ನಂತರ ಮಾತನಾಡುವುದಾಗಿ ಸ್ಪಷ್ಟಪಡಿಸಿದರು.
ಎಸ್ಟಿ ಸಮುದಾಯದ ನಾಯಕರನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಲವೆಡೆ ಇಂತಹ ಘಟನೆಗಳು ನಡೆದಿವೆ. ಮುಂದಿನ ದಿನಗಳಲ್ಲಿ ನೋಡೋಣ ಎಂದು ಉತ್ತರಿಸಿದರು.
Next Story




