Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಒಳಮೀಸಲಾತಿ ಘೋಷಣೆ ಐತಿಹಾಸಿಕ ನಿರ್ಧಾರ :...

ಒಳಮೀಸಲಾತಿ ಘೋಷಣೆ ಐತಿಹಾಸಿಕ ನಿರ್ಧಾರ : ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ25 April 2026 5:35 PM IST
share
ಒಳಮೀಸಲಾತಿ ಘೋಷಣೆ ಐತಿಹಾಸಿಕ ನಿರ್ಧಾರ : ಸತೀಶ್ ಜಾರಕಿಹೊಳಿ

ಬೆಳಗಾವಿ : ದಶಕಗಳ ಕಾಲದ ಬೇಡಿಕೆಯಾಗಿದ್ದ ಒಳಮೀಸಲಾತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಘೋಷಿಸಿರುವುದು ಐತಿಹಾಸಿಕ ನಿರ್ಧಾರ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು ಹಾಗೂ ವಿವಿಧ ಸಮುದಾಯದ ಪ್ರತಿನಿಧಿಗಳ ಸಮ್ಮುಖದಲ್ಲಿ ಒಳಮೀಸಲಾತಿ ಘೋಷಿಸಲಾಗಿದೆ. ಈ ನಿರ್ಧಾರಕ್ಕೆ ಎಲ್ಲಾ ಸಮುದಾಯಗಳಲ್ಲಿಯೂ ಸಂತೋಷ ವ್ಯಕ್ತವಾಗಿದೆ ಮತ್ತು ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಸರ್ವಾನುಮತದಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಒಳಮೀಸಲಾತಿ ಹಂಚಿಕೆ ಕುರಿತು ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ವಿರೋಧ ಪಕ್ಷಗಳು ಸರಕಾರದ ಪ್ರತಿಯೊಂದು ನಿರ್ಧಾರದಲ್ಲೂ ಲೋಪದೋಷ ಹುಡುಕುವುದು ಸಹಜ. ಆದರೆ ಜನಹಿತದ ದೃಷ್ಟಿಯಿಂದ ತೆಗೆದುಕೊಳ್ಳಲಾದ ಈ ನಿರ್ಧಾರಕ್ಕೆ ಸಾರ್ವಜನಿಕ ಬೆಂಬಲವಿದೆ ಎಂದು ಅವರು ಸ್ಪಷ್ಟಪಡಿಸಿದರು. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಿರೋಧ ಪಕ್ಷಗಳು ಇಂತಹ ಹೇಳಿಕೆಗಳನ್ನು ನೀಡುತ್ತವೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದ ಒಳಗಿನ ನಾಯಕತ್ವ ಗೊಂದಲ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಈಗಾಗಲೇ ಒಂದು ನಿರ್ಧಾರಕ್ಕೆ ಬಂದಿದ್ದು, ಸೂಕ್ತ ಸಮಯದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅವರು ಪ್ರಮುಖ ಖಾತೆಗಳನ್ನು ಹೊಂದಿರುವುದರಿಂದ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಅಭಿವೃದ್ಧಿ ಹಾಗೂ ಆಡಳಿತ ಸಂಬಂಧಿತ ವಿಚಾರಗಳಿಗಾಗಿ ದೆಹಲಿಗೆ ಭೇಟಿ ನೀಡುವುದು ಸಾಮಾನ್ಯ. ಪ್ರತಿಯೊಂದು ಭೇಟಿಗೂ ರಾಜಕೀಯ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

Tags

Minister Satish Jarkiholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X