ಸಿಎಂ ಬದಲಾವಣೆ ಹೇಳಿಕೆಗೆ ಶೀಘ್ರವೇ ತೆರೆ ಬೀಳಲಿದೆ : ಸತೀಶ್ ಜಾರಕಿಹೊಳಿ

ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸಚಿವ ಕೆ.ಎನ್. ರಾಜಣ್ಣ ಅವರ “ಮುಂದಿನ ಸಿಎಂ ಪರಮೇಶ್ವರ್ ಆಗಲಿ” ಎಂಬ ಹೇಳಿಕೆಗೆ ಹೈಕಮಾಂಡ್ ಮಟ್ಟದಲ್ಲೇ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ರಾಜಣ್ಣ ಅವರ ಹೇಳಿಕೆಗೆ ಸಂಬಂಧಿಸಿದಂತೆ ಆದಷ್ಟು ಬೇಗ ದೆಹಲಿಯಿಂದ ಬುಲಾವ್ ಬರಲಿದೆ. ಈ ಎಲ್ಲ ವಿಚಾರಗಳು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಲಿದ್ದು, ಶೀಘ್ರದಲ್ಲೇ ಇದಕ್ಕೆ ಅಂತಿಮ ತೆರೆ ಬೀಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಖಾಸಗಿ ತರಕಾರಿ ಮಾರುಕಟ್ಟೆ ವ್ಯಾಪಾರಿಗಳ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, “ಈ ಕುರಿತು ಇಂದು ಸಭೆ ಕರೆಯಲಾಗಿದೆ. ಮಾರುಕಟ್ಟೆ ವ್ಯಾಪಾರಿಗಳೊಂದಿಗೆ ಚರ್ಚೆ ನಡೆಸುತ್ತೇವೆ. ಸರ್ಕಾರದಿಂದ ಸಾಧ್ಯವಾದ ನೆರವನ್ನು ನೀಡುತ್ತೇವೆ. ಆದರೆ ಎಲ್ಲರಿಗೂ ಕಾನೂನು ಮುಖ್ಯ. ಅದರ ಚೌಕಟ್ಟಿನೊಳಗೆ ಅನುಕೂಲ ಕಲ್ಪಿಸಲಾಗುವುದು” ಎಂದು ಹೇಳಿದರು.
Next Story




