Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿಯ ಚಳಿಗಾಲದ ಅಧಿವೇಶನ ಮಾದರಿಯಾಗಲು...

ಬೆಳಗಾವಿಯ ಚಳಿಗಾಲದ ಅಧಿವೇಶನ ಮಾದರಿಯಾಗಲು ಎಲ್ಲರ ಸಹಕಾರ ಅತ್ಯಗತ್ಯ : ಸ್ಪೀಕರ್ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ8 Dec 2024 3:22 PM IST
share
ಬೆಳಗಾವಿಯ ಚಳಿಗಾಲದ ಅಧಿವೇಶನ ಮಾದರಿಯಾಗಲು ಎಲ್ಲರ ಸಹಕಾರ ಅತ್ಯಗತ್ಯ : ಸ್ಪೀಕರ್ ಯು.ಟಿ.ಖಾದರ್

ಬೆಳಗಾವಿ : ಬೆಳಗಾವಿಯಲ್ಲಿ ನಾಳೆ(ಡಿ 9)ಯಿಂದ ಡಿ.20ರ ವರೆಗೆ ನಿಗದಿಯಾಗಿರುವ ವಿಧಾನ ಮಂಡಲ ಅಧಿವೇಶನವು ಈ ಬಾರಿಯು ಮಾದರಿಯಾಗುವ ರೀತಿಯಲ್ಲಿ ನಡೆಯಲು ಎಲ್ಲರ ಸಹಕಾರ ಕೋರುವೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ರವಿವಾರ ಇಲ್ಲಿನ ಸುವರ್ಣಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಯಿಂದ ಅಧಿವೇಶನವು ವಿದ್ಯುಕ್ತವಾಗಿ ಆರಂಭವಾಗಲಿದೆ. ಇದಕ್ಕೂ ಮೊದಲು 10.30ಕ್ಕೆ ಐತಿಹಾಸಿಕ ಅನುಭವ ಮಂಟಪ ಸ್ಮರಣೆಯ ಬೃಹತ್ ತೈಲ ವರ್ಣದ ಚಿತ್ರದ ಅನಾವರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.

ವಿಧಾನ ಪರಿಷತ್‌ನ ಸಭಾಪತಿಗಳು, ಉಪ ಸಭಾಪತಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದರು.

ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ವಿಧಾನಸಭೆ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧನೆ ನಡೆಯಲಿದೆ. ಮಧ್ಯಾಹ್ನ ಬಿಎಸ್‌ಸಿ (ಕಲಾಪ ಸಲಹಾ ಸಮಿತಿ) ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮುಂದಿನ ಅಧಿವೇಶನದ ರೂಪುರೇಷಗಳ ಬಗ್ಗೆ ಸಮಗ್ರ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.

ಈ ಬಾರಿ ಅಧಿವೇಶನದಲ್ಲಿ 5 ವಿಧೇಯಕಗಳ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ. ಎರಡು ಆಧ್ಯಾದೇಶ(ಸುಗ್ರಿವಾಜ್ಞೆ)ದ‌ ಬದಲಿ ವಿಧೇಯಕಗಳನ್ನು ಪರ್ಯಾಲೋಚನೆಗೆ ತೆಗೆದುಕೊಳ್ಳಲಾಗುವುದು. ಅಧಿವೇಶನದಲ್ಲಿ 10 ದಿನಗಳ ಕಾಲ ಪ್ರಶ್ನೋತ್ತರ ಅವಧಿ ನಿಗದಿಪಡಿಸಲಾಗಿದೆ. ಗಮನ ಸೆಳೆಯುವ ಸೂಚನೆಗಳು, ಶೂನ್ಯ ವೇಳೆ, ನಿಲುವಳಿ ಸೂಚನೆ ನಡೆಸಲಾಗುವುದು. ಈವರೆಗೆ 3004 ಪ್ರಶ್ನೆಗಳು, 205 ಗಮನ ಸೆಳೆಯುವ ಸೂಚನೆಗಳು, 96 ನಿಯಮ 351ರ ಸೂಚನೆಗಳನ್ನು ಸ್ವೀಕರಿಸಲಾಗಿದೆ ಎಂದರು.

ಬೆಂಗಳೂರಿನ ವಿಧಾನಸೌಧದ ವಿಧಾನಸಭೆಯ ಮೊಗಸಾಲೆಯಲ್ಲಿ ಇರುವ ಮಾದರಿಯಲ್ಲಿಯೇ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಹೊಸದಾಗಿ ಸಭಾಧ್ಯಕ್ಷರ ಪೀಠವನ್ನು ಸಿದ್ದಪಡಿಸಲಾಗಿದೆ ಎಂದರು.

ಅಧಿವೇಶನದ ಕಾರ್ಯವ್ಯವಸ್ಥೆಗಾಗಿ 2500 ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್‌ಗಾಗಿ ಅಂದಾಜು 6000 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 8500 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 10 ಸಮಿತಿಗಳನ್ನು ರಚಿಸಿ ವಸತಿ, ಸಾರಿಗೆ ಸೇರಿದಂತೆ ನಾನಾ ವ್ಯವಸ್ಥೆ ಮಾಡಲಾಗಿದೆ ಎಂದರು. ಸುವರ್ಣಸೌಧಕ್ಕೆ ಬರುವವರಿಗೆ ಅನುಕೂಲವಾಗಲು ಮುಖ್ಯದ್ವಾರದಿಂದ ಸೌಧದ ಕಟ್ಟಡದವರೆಗೆ ಕೆಲ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X