Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ವಿದ್ಯಾರ್ಥಿಗಳಿಂದಲೇ ಬಲಿಷ್ಠ ಭಾರತ...

ವಿದ್ಯಾರ್ಥಿಗಳಿಂದಲೇ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ : ಸ್ಪೀಕರ್‌ ಯು.ಟಿ.ಖಾದರ್‌

ವಾರ್ತಾಭಾರತಿವಾರ್ತಾಭಾರತಿ27 Dec 2025 9:59 PM IST
share
ವಿದ್ಯಾರ್ಥಿಗಳಿಂದಲೇ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ : ಸ್ಪೀಕರ್‌ ಯು.ಟಿ.ಖಾದರ್‌
29ನೇ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್–2025 ಕಾರ್ಯಕ್ರಮ

ಬೆಳಗಾವಿ : ʼಮಕ್ಕಳು ದೇಶದ ಅಮೂಲ್ಯ ಸಂಪತ್ತು. ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ ಹಾಗೂ ಸಕ್ರಿಯ ವ್ಯಕ್ತಿತ್ವ ರೂಪಿಸಲು ನೆರವಾಗುತ್ತವೆ. ಭಾರತ ವಿಶ್ವದಲ್ಲಿ ಮೊದಲ ಸ್ಥಾನ ಪಡೆಯಬೇಕು ಎಂಬುದು ಪ್ರತಿಯೊಬ್ಬರ ಕನಸಾಗಿದ್ದು, ಬಲಿಷ್ಠ ಭಾರತ ನಿರ್ಮಾಣ ವಿದ್ಯಾರ್ಥಿಗಳಿಂದಲೇ ಸಾಧ್ಯʼ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ತಿಳಿಸಿದರು.

ಹೊನಗಾ ಗ್ರಾಮದ ಫೀನಿಕ್ಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ನಡೆದ 29ನೇ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್–2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸಮಯದ ಮೌಲ್ಯವನ್ನು ಅರಿತು ಶಿಸ್ತುಬದ್ಧವಾಗಿ ಬದುಕು ರೂಪಿಸಿಕೊಳ್ಳಬೇಕು. ಇಂದಿನ ನಿಮ್ಮ ವ್ಯಕ್ತಿತ್ವವೇ ನಾಳೆ ನಿಮ್ಮನ್ನು ಉನ್ನತ ಸ್ಥಾನಗಳಿಗೆ ಕರೆದೊಯ್ಯುತ್ತದೆ. ಮಕ್ಕಳು ಉತ್ತಮ ಪ್ರಜೆಗಳಾಗಿ ಸಮಾಜ ಸುಧಾರಣೆಯಲ್ಲಿ ತೊಡಗಿಕೊಳ್ಳಬೇಕು ಎಂದರು.

ಶಿಸ್ತು ಕಲಿಸುವ ಮಹತ್ವದ ವೇದಿಕೆ : ಬಸವರಾಜ ಹೊರಟ್ಟಿ

ವಿಧಾನ ಪರಿಷತ್ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡುವುದು ಶಿಕ್ಷಕರ ಕರ್ತವ್ಯವಾದರೆ, ಶಿಸ್ತು ಮತ್ತು ಜೀವನಪಾಠ ಕಲಿಸುವುದು ಸ್ಕೌಟ್ಸ್–ಗೈಡ್ಸ್‌ನ ಪ್ರಮುಖ ಹೊಣೆಗಾರಿಕೆ. ಐದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಜಾತಿ–ಧರ್ಮ ಭೇದವಿಲ್ಲದೆ ಎಲ್ಲರೂ ಸಮಾನರೆಂಬ ಮೌಲ್ಯವನ್ನು ಮಕ್ಕಳಿಗೆ ಕಲಿಸಲಾಗುತ್ತದೆ. ಬಸವಣ್ಣನವರ ‘ಕಾಯಕವೇ ಕೈಲಾಸ’ ತತ್ವವೂ ಇಲ್ಲಿ ಅಳವಡಿಸಲಾಗುತ್ತಿದೆ. ಮಕ್ಕಳು ದೇಶಪ್ರೇಮಿಗಳಾಗಿ, ತಂದೆ–ತಾಯಿ ಹಾಗೂ ಶಿಕ್ಷಕರಿಗೆ ಗೌರವ ತರುವ ಶ್ರೇಷ್ಠ ವ್ಯಕ್ತಿಗಳಾಗಬೇಕು ಎಂದು ಹೇಳಿದರು.

ಶಿಸ್ತುಬದ್ಧ ಜೀವನಕ್ಕೆ ಪೂರಕ : ಜಗದೀಶ್ ಶೆಟ್ಟರ್‌

ಸಂಸದ ಜಗದೀಶ್ ಶೆಟ್ಟರ್‌ ಮಾತನಾಡಿ, ಶಾಲಾ ಚಟುವಟಿಕೆಗಳ ಜೊತೆಗೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವದ ಕೊಡುಗೆ ನೀಡುತ್ತಿದೆ. ಇದರಿಂದ ವಿದ್ಯಾರ್ಥಿಗಳು ಶಿಸ್ತುಬದ್ಧ ಜೀವನ ನಡೆಸಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಪ್ರತೀ ಶಾಲೆಯಲ್ಲಿ ಸ್ಕೌಟ್ಸ್–ಗೈಡ್ಸ್ ಆರಂಭಕ್ಕೆ ಚಿಂತನೆ : ಮಧುಬಂಗಾರಪ್ಪ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಇನ್ನಷ್ಟು ಮುಂಚೂಣಿಯಲ್ಲಿ ಬೆಳೆಯುವಂತೆ ಶಿಕ್ಷಣ ಇಲಾಖೆ ಜವಾಬ್ದಾರಿಯಾಗಿ ಕೆಲಸ ಮಾಡಲಿದೆ. ರಾಜ್ಯದ ಪ್ರತೀ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಆರಂಭಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಈ ಚಟುವಟಿಕೆಗಳಿಗೆ ಇನ್ನಷ್ಟು ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್‌ ಜಾರಕಿಹೊಳಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ ಮಾತನಾಡಿದರು.

ಭೂತರಾಮನಹಟ್ಟಿಯ ಮುಕ್ತಿಮಠದ ಧರ್ಮಶ್ರೀ ತಪೋರತ್ನ ಶಿವಸಿದ್ಧ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಗುಲಬಾರಾವ್ ಭೂಷಣ ಭೊರಸೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ, ಉಪ ಕಾರ್ಯದರ್ಶಿ ಬಸವರಾಜ ಹೆಗನಾಯಕ, ಅಂತರರಾಷ್ಟ್ರೀಯ ಹೆಚ್ಚುವರಿ ಆಯುಕ್ತ ಎ.ಎಸ್.ಮಧುಸೂದನ್, ಉಪನಿರ್ದೇಶಕಿ ಲೀಲಾವತಿ ಹಿರೇಮಠ, ಸ್ಥಾನಿಕ ಆಯುಕ್ತ ರಾಜಶೇಖರ್‌ ಚಳಗೇರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಜಿಲ್ಲಾ ಮುಖ್ಯ ಆಯುಕ್ತ ಗಜಾನನ ಮನ್ನಿಕೇರಿ ಸ್ವಾಗತಿಸಿದರು. ರಾಜ್ಯ ಸಂಘಟನಾ ಆಯುಕ್ತೆ ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X