ಕಬ್ಬಿಗೆ ಬೆಲೆ ನಿಗದಿ ವಿಚಾರ | ಇಂದು ಬೆಳಗಾವಿ ಬಂದ್‌ಗೆ ಕರೆ ನೀಡಿದ ಕರವೇ ಶಿವರಾಮೇಗೌಡ ಬಣ

ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬು ಬೆಳೆಗಾರರ ಹೋರಾಟ ಮುಂದುವರೆದಿರುವ ಹಿನ್ನೆಲೆ, ಕರವೇ ಶಿವರಾಮೇಗೌಡ ಬಣ ಹಾಗೂ ಕರುನಾಡು ರಕ್ಷಣಾ ವೇದಿಕೆ ಸೇರಿ ಹಲವು ಕನ್ನಡಪರ ಹಾಗೂ ರೈತಪರ ಸಂಘಟನೆಗಳು ಇಂದು ಬೆಳಗಾವಿ ಬಂದ್‌ಗೆ ಕರೆ ನೀಡಿವೆ.
ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ರೈತರ ಪ್ರತಿಭಟನೆ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ.
ಬೆಳಗಾವಿ ನಗರ ಸೇರಿದಂತೆ ಹತ್ತರಗಿ ಟೋಲ್ ನಾಕಾವನ್ನು ಬಂದ್ ಮಾಡುವುದಾಗಿ ಸಂಘಟನೆಗಳು ಕರೆ ನೀಡಿದೆ. ಕಬ್ಬು ನುರಿಯುವ ಹಂಗಾಮು ಆರಂಭವಾದರೂ ಸರಕಾರ ಇನ್ನೂ ಸ್ಪಷ್ಟ ಬೆಲೆ ಘೋಷಣೆ ಮಾಡದಿರುವುದರಿಂದ ರೈತರು ಟನ್‌ಗೆ 3,500 ನಿಗದಿ ಮಾಡುವಂತೆ ಆಗ್ರಹಿಸಿದ್ದಾರೆ.
Next Story





