Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ‘ಒನ್ ಮ್ಯಾನ್ ಶೋ' ವಿಚಾರ ನಾನು...

‘ಒನ್ ಮ್ಯಾನ್ ಶೋ' ವಿಚಾರ ನಾನು ನಂಬುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ23 Nov 2025 5:04 PM IST
share
‘ಒನ್ ಮ್ಯಾನ್ ಶೋ ವಿಚಾರ ನಾನು ನಂಬುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಯಾರೊಬ್ಬರ ಶ್ರಮದಿಂದ ಬಂದಿಲ್ಲ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಹಿರಿಯ ನಾಯಕರವರೆಗೆ ಎಲ್ಲರ ಶ್ರಮವೂ ಇದೆ. ಹಾಗಾಗಿ, ‘ಒನ್ ಮ್ಯಾನ್ ಶೋ' ವಿಚಾರ ನಾನು ನಂಬುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ರವಿವಾರ ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕು, ಯಾವಾಗ ಆಗಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತದೆ. ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ಮಾಡಬೇಕು ಎಂಬ ವಿಚಾರ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ನಮಗಿರುವ 1.25 ಕೋಟಿ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ತನ್ನಿಂದಲೇ ಸರಕಾರ ರಚನೆಯಾಗಿದೆ ಎಂದು ಯಾರಾದರೂ ಹೇಳಿದರೆ ಅದನ್ನು ನಾನು ಒಪ್ಪುವುದಿಲ್ಲ. ಅದು ನ್ಯಾಯವೂ ಅಲ್ಲ. ಎಲ್ಲರದ್ದೂ ಸಮಾನ ಶ್ರಮವಿದೆ, ಸಮಾನ ಪ್ರಾಧಾನ್ಯತೆ ಸಿಗಬೇಕು ಎಂದು ಅವರು ಹೇಳಿದರು.

ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ದುಡಿದಿದ್ದಾರೆ. ಅವರ ಕಾಲದಲ್ಲಿ ಮಾಡಿದ ಕಾರ್ಯಕ್ರಮಗಳ ಕಾರಣದಿಂದ ಕಾಂಗ್ರೆಸ್‍ಗೆ ಬಲ ಬಂದಿದೆ. ಸರಕಾರ ರಚನೆ ಮಾಡುವಷ್ಟು ಪಕ್ಷವನ್ನು ಸಿದ್ಧಪಡಿಸಿದವರಲ್ಲಿ ಅವರೂ ಒಬ್ಬರು. ಅವರಿಗೂ ಸಮಾನ ಅವಕಾಶ ಸಿಗಬೇಕು ಎಂಬುದು ನನ್ನ ಒತ್ತಾಸೆ ಎಂದು ಅವರು ಉಲ್ಲೇಖಿಸಿದರು.

ಕೆಲವರಿಗೆ ಅಧಿಕಾರ ಇಂದೇ ಬರಬಹುದು ಅಥವಾ ಇಂದೇ ಹೋಗಬಹುದು. ಮತ್ತೆ ಕೆಲವರಿಗೆ ಒಂದು ವರ್ಷ ಬಿಟ್ಟು ಬರಬಹುದು, ಕೆಲವರಿಗೆ ಹೋಗಲೂಬಹುದು. ಆದರೆ, ಇದಕ್ಕೆ 'ತ್ಯಾಗ' ಎಂಬ ಪದ ಸರಿಯಲ್ಲ' ಎಂದೂ ಅವರು ನುಡಿದರು.

ಪರಿಶಿಷ್ಟರು, ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ: ‘ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟರು, ಅಲ್ಪಸಂಖ್ಯಾತ ಸಮುದಾಯದವರೇ ಮುಖ್ಯ ಮತದಾರರು. ಹಾಗಾಗಿ, ಆ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಹಿಮಾಲಯ ಏರಿದವರಿಗೆ ಬೆಲೆ ಇಲ್ಲವೇ?:

‘1960ರಲ್ಲಿ ತೇನ್‍ಸಿಂಗ್ ಹಿಮಾಲಯ ಪರ್ವತ ಏರಿದರು. ಆಗ ಜಗತ್ತಿನ ಎಲ್ಲ ಪತ್ರಿಕೆಗಳೂ ತೇನ್‍ಸಿಂಗ್ ಬಗ್ಗೆ ಮಾತ್ರ ಬರೆದವು. ಅವರ ಜೊತೆಗೆ ಇನ್ನೂ 14 ಜನ ಕೂಡ ಇದ್ದರು. ಅವರ ಹೆಸರು ಎಲ್ಲೂ ಬರಲಿಲ್ಲ. ಇದು ಹಾಗೇ ಆಗಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X