Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ನೋಡುಗರ ಕಣ್ಮನ ಸೆಳೆದ ‘ಫಲಪುಪ್ಪ...

ನೋಡುಗರ ಕಣ್ಮನ ಸೆಳೆದ ‘ಫಲಪುಪ್ಪ ಪ್ರದರ್ಶನ’

ವಾರ್ತಾಭಾರತಿವಾರ್ತಾಭಾರತಿ11 Dec 2023 10:10 PM IST
share

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಹ್ಯೂಮ್ ಪಾರ್ಕ್‍ನಲ್ಲಿ ಜಿ.ಪಂ., ಕೃಷಿ, ತೋಟಗಾರಿಕೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ಇಲಾಖೆ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಫಲಪುಷ್ಪ ಪ್ರದರ್ಶನ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದಲ್ಲಿ ಏರ್ಪಡಿಸಿರುವ 64ನೇ ಫಲಪುಷ್ಪ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ವಿವಿಧ ಹೂವುಗಳಿಂದ ತಯಾರಿಸಿದ್ದ ಕಲಾಕೃತಿಗಳು ಎಲ್ಲರ ಗಮನ ಸೆಳೆದವು. ಹೂವಿನಲ್ಲಿ ಅರಳಿದ ಇತಿಹಾಸ ಪ್ರಸಿದ್ಧ ಕಮಲ ಬಸದಿ, ಶಾವಿಗೆಯಲ್ಲಿ ಮೂಡಿದ ಸಿದ್ದೇಶ್ವರ ಸ್ವಾಮೀಜಿ, ಸಿರಿಧಾನ್ಯಗಳಿಂದ ಸಿದ್ಧಪಡಿಸಿರುವ ಕಿತ್ತೂರು ರಾಣಿ ಚೆನ್ನಮ್ಮನ ಮೂರ್ತಿ, ಮರಳಿನಿಂದ ನಿರ್ಮಿಸಿರುವ ಚಂದ್ರಯಾನ-3, ರಂಗೋಲಿಯಲ್ಲಿ ಬಿಡಿಸಿರುವ ನಾಟ್ಯಭೂಷಣ ಏಣಗಿ ಬಾಳಪ್ಪ, ಗಾನ ಕೋಗಿಲೆ ಗಂಗೂಬಾಯಿ ಹಾನಗಲ್, ವರಕವಿ ದ.ರಾ.ಬೇಂದ್ರೆ, ಕಾಯಕ ಯೋಗಿ ಸಿದ್ಧಗಂಗಾ ಸ್ವಾಮೀಜಿ, ಸರ್ ಎಂ.ವಿಶ್ವೇಶ್ವರಯ್ಯ, ತೋಟಗಾರಿಕಾ ಪಿತಾಮಹ ಎಂ.ಎಚ್.ಮರಿಗೌಡರ ಭಾವಚಿತ್ರಗಳು ಸೇರಿ ಮತ್ತಿತರ ಕಲಾಕೃತಿಗಳು ಜನರ ಗಮನ ಸೆಳೆಯುತ್ತಿವೆ.

ಅಲಂಕಾರಿಕ ಹೂವು ಪ್ರದರ್ಶನ: ಫಲಪುಷ್ಪ ಪ್ರದರ್ಶನದಲ್ಲಿನ ಅಲಂಕಾರಿಕ ಹೂವುಗಳು ಪ್ರದರ್ಶನಕ್ಕೆ ಆಗಮಿಸಿದ ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲರ ಮನಸ್ಸನ್ನು ಮುದಗೊಳಿಸಿತು. ಇಲ್ಲಿನ ಆಹ್ಲಾದಕರ ವಾತಾವರಣ ಸವಿದರು. ಕುಟುಂಬ ಸಮೇತರಾಗಿ ಸೆಲ್ಫಿ ಪೊಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

ಆರ್ಕಿಡ್ಸ್, ಸಾಲ್ವಿಯಾ, ಪೆಟೂನಿಯಾ, ಜಿರೇನಿಯಂ, ಡಯಾಂತಸ್, ಹೈಪೋಸ್ಟಸ್, ಗುಲಾಬಿ, ಸೇವಂತಿ, ಚೆಂಡು ಹೂವು, ಜರ್ಬೆರಾ, ಅಂಥೂರಿಯಂ ಸೇರಿ 25ಕ್ಕೂ ಹೆಚ್ಚು ಅಲಂಕಾರಿಕ ಹೂವು ಮತ್ತು ಹೂವಿನ ಸಸಿಗಳನ್ನು ಪ್ರದರ್ಶನದಲ್ಲಿ ಇಡಲಾಗಿದೆ.

ಸಾರ್ವಜನಿಕರಿಂದ ಮೆಚ್ಚುಗೆ: ‘ಫಲಪುಷ್ಪ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರೋತ್ಸಾಹ ಸಿಕ್ಕಿದೆ. ಹೂವಿನಲ್ಲಿ ಅರಳಿದ ಕಮಲ ಬಸದಿ ಈ ಬಾರಿಯ ಕೇಂದ್ರ ಬಿಂದುವಾಗಿದೆ. ಮೈಸೂರಿನ ಕಲಾವಿದರಾದ ಗೌರಿ ಅವರಿಂದ ಚಂದ್ರಯಾನ-3 ಮರಳಿನ ಕಲಾಕೃತಿ ಎಲ್ಲರನ್ನು ಆಕರ್ಷಿಸುತ್ತಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X