ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ, ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ : ಕೆ. ಎಚ್ ಮುನಿಯಪ್ಪ

ಬೆಳಗಾವಿ: ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಒಳ್ಳೆಯ ಕೆಲಸ ಮಾಡ್ತಾ ಇದ್ದು, ಚೆನ್ನಾಗಿ ಸರ್ಕಾರ ನಡಸ್ತಾ ಇದ್ದಾರೆ. ಹಾಗಾಗಿ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೆ. ಎಚ್ ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಹೈಕಮಾಂಡ ತೆಗೆದುಕ್ಕೊಳ್ಳುವ ತಿರ್ಮಾನ. ನಾವು ಯಾರು ಕೂಡಾ ಅದರ ಬಗ್ಗೆ ಪ್ರಸ್ತಾಪ ಮಾಡಲ್ಲ. ಗ್ಯಾರಂಟಿ ಸೇರಿದಂತೆ ನಾವು ಒಳ್ಳೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಮುಂದೆ ಬಜೆಟ್ ಇದ್ದು, ಸಿಎಂ ಒಳ್ಳೆಯ ಬಜೆಟ್ ನೀಡಲಿದ್ದಾರೆ.
ಡಿಕೆಶಿ ಮುಂದಿನ ಸಿಎಂ ಎಂಬ ಡಿಸಿಎಂ ಡಿಕೆಶಿ ಪರ ಕಾರ್ಯಕರ್ತರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಅವರು ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಡಿಸಿಎಂ ಆಗಿ ಕೆಲಸ ಮಾಡ್ತಾ ಇದ್ದಾರೆ ಆ ಪ್ರಶ್ನೆ ನಮ್ಮ ಮುಂದೆ ಇಲ್ಲ ಎಂದರು.
Next Story