ಹೃದಯಾಘಾತದಿಂದ ಕರ್ತವ್ಯ ನಿರತ ಎಎಸ್‌ಐ ಸಾವು

ಬಳ್ಳಾರಿ: ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದ ಕರ್ತವ್ಯದಲ್ಲಿದ್ದ ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ರಾವ್ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಭದ್ರತಾ ಕರ್ತವ್ಯದಲ್ಲಿದ್ದ ಶ್ರೀನಿವಾಸ್ ರಾವ್ ದಿಢೀರನೆ ಕುಸಿದು ಬಿದ್ದಿದ್ದಾರೆ ಎMದು ತಿಳಿದು ಬಂದಿದೆ.
ತಕ್ಷಣವೇ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾರೆ ಕಡಿಮೆ ರಕ್ತದೊತ್ತಡದಿಂದ ಅವರಿಗೆ ಹೃದಯಾಘಾವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Next Story





