Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಯುವ ಸಮುದಾಯ ವಿದ್ಯೆಗೆ ದಾಸರಾಗಬೇಕೇ...

ಯುವ ಸಮುದಾಯ ವಿದ್ಯೆಗೆ ದಾಸರಾಗಬೇಕೇ ಹೊರತು, ದುಶ್ಚಟ ವ್ಯಸನಗಳಿಗಲ್ಲ: ಆಲಂಬಾಷ

ವಾರ್ತಾಭಾರತಿವಾರ್ತಾಭಾರತಿ1 Aug 2025 9:59 PM IST
share
ಯುವ ಸಮುದಾಯ ವಿದ್ಯೆಗೆ ದಾಸರಾಗಬೇಕೇ ಹೊರತು, ದುಶ್ಚಟ ವ್ಯಸನಗಳಿಗಲ್ಲ: ಆಲಂಬಾಷ

ಬಳ್ಳಾರಿ: ಯುವ ಸಮುದಾಯ ವಿದ್ಯೆಗೆ ದಾಸರಾಗಬೇಕೇ ಹೊರತು, ದುಶ್ಚಟ ವ್ಯಸನಗಳಿಗಲ್ಲ ಎಂದು ಸತ್ಯಂ ಶಿಕ್ಷಣ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಬಾಷ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಸದೃಢ ದೇಹದಲ್ಲಿ, ಸದೃಢ ಮನಸ್ಸು ಹೊಂದಿರಲು ಯುವಕರು ದುಶ್ಚಟಗಳಿಗೆ ದಾಸರಾಗಬಾರದು. ಸ್ವಾಸ್ಥö್ಯ ಸಮಾಜ ನಿರ್ಮಾಣವಾಗಬೇಕೆಂದರೆ ಎಲ್ಲರೂ ವ್ಯಸನಮುಕ್ತ ಸಮಾಜದೆಡೆಗೆ ಸಾಗಬೇಕಿದೆ ಎಂದರು.

ದುಶ್ಚಟಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ತಿಳಿಸಿದರು.

ಹನ್ನೆರಡನೆಯ ಶತಮಾನದ ಬಸವಣ್ಣನವರ ಕಾಲದಲ್ಲಿನ ಶರಣರು ಸಮ-ಸಮಾಜ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. ನಮ್ಮ ದೇಶ ಅತಿಹೆಚ್ಚು ಯುವ ಪೀಳಿಗೆಯನ್ನು ಹೊಂದಿದ ದೇಶ. ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೇ ಅವುಗಳನ್ನು ಮೆಟ್ಟಿ ನಿಲ್ಲಬೇಕು. ಯುವಕರು ತಂದೆ-ತಾಯಿಯವರ ಆಶೋತ್ತರಗಳನ್ನು ಈಡೇರಿಸುವಂತವರಾಗಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಂ ಅವರು ಮಾತನಾಡಿ, ಮನಸ್ಸು, ದೇಹ, ಕುಟುಂಬ ಹಾಗೂ ದೇಶದ ಸ್ವಾಸ್ಥö್ಯ ಹಾಳು ಮಾಡುವ ವ್ಯಸನ ದಾಸ್ಯವೂ ಸಾಮಾಜಿಕ ಪಿಡುಗುಗಳಲ್ಲಿ ಒಂದು. ಹಾಗಾಗಿ ಇಂದಿನ ಯುವಪೀಳಿಗೆಯು ಯಾವುದೇ ತರಹದ ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಆರೋಗ್ಯಕರ ಜೀವನವನ್ನು ರೂಪಿಸಿಕೊಳ್ಳಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬೀಳಬಾರದು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಅಧಿಕಾರಿ ಶರ್ಮಸ್ ವಲಿ ಅವರು ಮಾತನಾಡಿ, ಮಾದಕ ವಸ್ತು ವ್ಯಸನಿಗಳಾಗಿದ್ದಲ್ಲಿ ರಾಜ್ಯ ಸರ್ಕಾರವು ರಾಷ್ಟಿçÃಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಟೆಲಿ ಮೆನಸ್ ಎಂಬ 14416 ಉಚಿತ ಸಹಾಯವಾಣಿ ಆರಂಭಿಸಿದ್ದು, ಸಹಾಯವಾಣಿಗೆ ಕರೆ ಮಾಡಿ ಆಪ್ತಸಮಾಲೋಚನೆ ಪಡೆಯಬಹುದು ಎಂದರು.

ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತನಾಗುತ್ತೇನೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಹಿಂದುಸ್ತಾನಿ ಗಾಯಕ ನಾಗಭೂಷಣ ಬಾಪುರೆ ಅವರು ವಚನ ಸಂಗೀತ ಪ್ರಸ್ತುತಪಡಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ಗುರುರಾಜ.ವಿ.ಸಿ., ಸಿಬ್ಬಂದಿಗಳಾದ ವಿಜಯ್ ಕುಮಾರ್, ಮಲ್ಲೇಶಪ್ಪ, ಹನುಮೇಶ್, ಹನುಮಂತಪ್ಪ, ತೇಜ, ದಿವಾಕರ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಗಮನಸೆಳೆದ ಜಾಗೃತಿ ಜಾಥಾ:

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನದ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು. ಜಾಥಾಗೆ ಸರ್ಕಾರಿ (ಮಾಪು) ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸುಂಕಪ್ಪ ಅವರು ಚಾಲನೆ ನೀಡಿದರು.

ಜಾಥಾವು ನಗರದ ಸರ್ಕಾರಿ (ಮಾಪು) ಪದವಿ ಪೂರ್ವ ಕಾಲೇಜು ಆವರಣದಿಂದ ಆರಂಭವಾಗಿ ಡಾ.ರಾಜ್‌ಕುಮಾರ್ ರಸ್ತೆಯಲ್ಲಿನ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದವರೆಗೆ ತಲುಪಿ ಸಂಪನ್ನಗೊAಡಿತು.

ಜಾಥಾದಲ್ಲಿ ‘ಕುಡಿತಕ್ಕಿಳಿಯುವ ಮೊದಲು ನೆನಪಾಗಲಿ-ನಿಮ್ಮ ಮುದ್ದು ಮಗುವಿನ ತೊದಲು’, ‘ಬಿಡಿರೋ ಬಿಡಿರೋ ಕುಡಿತವ-ಕಾಣಿರೋ ಸುಖ ಸಂತೋಷದ ನವಜೀವನ’, ‘ಆಗದಿರಿ ಮಾದರಿ ವ್ಯಸನಿ-ಆಗಿರಿ ಬದುಕಿಗೆ ಸಂಜೀವಿನಿ’, ‘ಮಡದಿ ಮಕ್ಕಳು ಸುಂದರ ಸಂಸಾರ-ಕುಡಿತದಿAದ ಎಲ್ಲವೂ ನಿಸ್ಸಾರ’, ‘ಕುಡಿತದಾಸೆಗೆ ಕಡಿವಾಣ-ಹಾಕಿದವನೇ ಬಲುಜಾಣ’ ಎನ್ನುವ ಜಾಗೃತಿ ಮಾಹಿತಿ ಫಲಕಗಳು ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X