Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಂಡೂರಿನ ಜೋಳ ಬೆಳೆಗಾರರಿಗೆ ಆತಂಕ ತಂದ...

ಸಂಡೂರಿನ ಜೋಳ ಬೆಳೆಗಾರರಿಗೆ ಆತಂಕ ತಂದ ಕೀಟಬಾಧೆ: ತಕ್ಷಣ ನಿಯಂತ್ರಣ ಕ್ರಮಕ್ಕೆ ಕೃಷಿ ಇಲಾಖೆ ಸಲಹೆ

ವಾರ್ತಾಭಾರತಿವಾರ್ತಾಭಾರತಿ28 Aug 2026 8:13 PM IST
share
ಸಂಡೂರಿನ ಜೋಳ ಬೆಳೆಗಾರರಿಗೆ ಆತಂಕ ತಂದ ಕೀಟಬಾಧೆ: ತಕ್ಷಣ ನಿಯಂತ್ರಣ ಕ್ರಮಕ್ಕೆ ಕೃಷಿ ಇಲಾಖೆ ಸಲಹೆ

ಸಂಡೂರು : ತಾಲೂಕಿನ ಚೋರನೂರು ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಜೋಳದ ಬೆಳೆಗೆ ಕ್ಯಾಟರ್‌ಪಿಲ್ಲರ್‌ (Helicoverpa species) ಕೀಟದ ಬಾಧೆ ಕಾಣಿಸಿಕೊಂಡಿದ್ದು, ರೈತರು ಕೂಡಲೇ ಅಗತ್ಯ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಕೃಷಿ ಇಲಾಖೆ ಸೂಚಿಸಿದೆ.

ಅಗ್ರಹಾರ, ಕಾಳಿಂಗೇರಿ, ಸೋವೇನಹಳ್ಳಿ, ಬೊಮ್ಮಘಟ್ಟ, ಹಿರೆಕೆರೆಯಾಗಿನಹಳ್ಳಿ, ಬಂಡ್ರಿ ಹಾಗೂ ನಿಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೋಳದ ಬೆಳೆಗೆ ಕೀಟ ಬಾಧೆ ಕಂಡುಬಂದಿರುವ ಕುರಿತು ರೈತರಿಂದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಆಗಸ್ಟ್ 27 ಮತ್ತು 28ರಂದು ವಿವಿಧ ಗ್ರಾಮಗಳಲ್ಲಿ ಬೆಳೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಜೋಳದ ಬೆಳೆಯಲ್ಲಿ ಟಸಾಕ್ ಕ್ಯಾಟರ್‌ಪಿಲ್ಲರ್ ಕೀಟದ ಹಾವಳಿ ಕಂಡುಬಂದಿದೆ ಎಂದು ಉಪ ಕೃಷಿ ನಿರ್ದೇಶಕ ಮಹಮ್ಮದ್ ರಫಿಉಲ್ಲಾ ರಝ್ವಿ ತಿಳಿಸಿದ್ದಾರೆ.

ಈ ಕೀಟವು ಮುಖ್ಯವಾಗಿ ರಾತ್ರಿ ವೇಳೆಯಲ್ಲಿ ಬೆಳೆಯ ಮೇಲೆ ಕಾಣಿಸಿಕೊಂಡು ಜೋಳದ ತೆನೆ ಭಾಗದಲ್ಲಿರುವ ಕಾಳುಗಳನ್ನು ತಿಂದು ಹಾನಿ ಮಾಡುತ್ತದೆ. ಇದರಿಂದ ಬೆಳೆಯ ಇಳುವರಿ ಕುಂಠಿತವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೈತರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದು ಇಲಾಖೆ ತಿಳಿಸಿದೆ.

ಕೀಟ ಬಾಧೆಗೆ ಕಾರಣವೇನು?

ನೈಸರ್ಗಿಕವಾಗಿ ಕೀಟಗಳನ್ನು ನಿಯಂತ್ರಿಸುವ ಭಕ್ಷಕ ಕೀಟಗಳ ಸಂಖ್ಯೆ ಕಡಿಮೆಯಾಗಿರುವುದು, ಒಣಹವೆಯಿಂದ ಉಷ್ಣಾಂಶ ಹೆಚ್ಚಾಗಿರುವುದು, ಮೊಟ್ಟೆ ಹಾಗೂ ಕೀಟಗಳ ಬೆಳವಣಿಗೆಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿರುವುದು ಹಾಗೂ ಗಾಳಿಯ ವೇಗದಿಂದ ಕೀಟಗಳ ಮೊಟ್ಟೆ ಮತ್ತು ಹುಳುಗಳು ಹರಡುವ ಸಾಧ್ಯತೆ ಹೆಚ್ಚಿರುವುದು ಪ್ರಮುಖ ಕಾರಣಗಳಾಗಿವೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಕೀಟದ ಜೀವನಚಕ್ರವು ನಿರ್ದಿಷ್ಟ ಅವಧಿಗಳಲ್ಲಿ ಪುನರಾವರ್ತನೆಯಾಗುವ ಕಾರಣ, ಹಾನಿ ಕಂಡುಬಂದಿರುವ ಪ್ರದೇಶಗಳಲ್ಲಿ ತಕ್ಷಣವೇ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಲಾಖೆ ರೈತರಿಗೆ ಸಲಹೆ ನೀಡಿದೆ.

ನಿಯಂತ್ರಣಕ್ಕೆ ಇಲಾಖೆಯ ಸಲಹೆ

ಜೋಳದ ಬೆಳೆಯಲ್ಲಿ ಕೀಟ ಬಾಧೆ ಕಂಡುಬಂದಿರುವ ರೈತರು ಕೃಷಿ ಇಲಾಖೆಯ ತಾಂತ್ರಿಕ ಸಲಹೆಯಂತೆ ಶಿಫಾರಸು ಮಾಡಲಾದ ಕೀಟನಾಶಕಗಳನ್ನು ಬಳಸುವಂತೆ ಸೂಚಿಸಲಾಗಿದೆ. ಇಮಾಮೆಕ್ಟಿನ್ ಬೆಂಜೋಯೇಟ್, ಸೈನೋಸ್ಯಾಡ್, ಕ್ಲೋರಾಂಟ್ರಾನಿಲಿಪ್ರೋಲ್‌ (ಕೋರಾಜೆನ್) ಸೇರಿದಂತೆ ಇಲಾಖೆಯಿಂದ ಸೂಚಿಸಲಾದ ಕೀಟನಾಶಕಗಳನ್ನು ನಿಗದಿತ ಪ್ರಮಾಣದಲ್ಲಿ ಸಿಂಪಡಿಸುವಂತೆ ತಿಳಿಸಲಾಗಿದೆ.

ಎಲೆಗಳ ಮೇಲೆ ಕೀಟ ಬಾಧೆ ಕಂಡುಬಂದಲ್ಲಿ ಇಲಾಖೆಯ ಶಿಫಾರಸಿನಂತೆ ಸೂಕ್ತ ಪುಡಿ ಔಷಧಿಗಳನ್ನು ದೂಳೀಕರಿಸುವ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಲಾಗಿದೆ.

ರೈತರಿಗೆ ಅಗತ್ಯವಿರುವ ಔಷಧಿಗಳು ಹಾಗೂ ಔಷಧಿ ಸಿಂಪರಣಾ ಉಪಕರಣಗಳು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಧನದಲ್ಲಿ ಲಭ್ಯವಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪ ಕೃಷಿ ನಿರ್ದೇಶಕ ಮಹಮ್ಮದ್ ರಫಿಉಲ್ಲಾ ರಝ್ವಿ ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Tags

Agriculturedepartment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X