Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಅರಳಿಹಳ್ಳಿ ತಾಂಡದಲ್ಲಿ...

Ballari | ಅರಳಿಹಳ್ಳಿ ತಾಂಡದಲ್ಲಿ ಎಸ್‌ಐಆರ್ ಶೇ.100ರಷ್ಟು ಪೂರ್ಣ; ಬಿಎಲ್‌ಒಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ10 July 2026 6:52 PM IST
share
Ballari | ಅರಳಿಹಳ್ಳಿ ತಾಂಡದಲ್ಲಿ ಎಸ್‌ಐಆರ್ ಶೇ.100ರಷ್ಟು ಪೂರ್ಣ; ಬಿಎಲ್‌ಒಗೆ ಸನ್ಮಾನ

ಬಳ್ಳಾರಿ/ಕಂಪ್ಲಿ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಕಂಪ್ಲಿ ತಾಲೂಕಿನ ಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಹಳ್ಳಿ ತಾಂಡ ಶೇ.100ರಷ್ಟು ಪ್ರಗತಿ ಸಾಧಿಸಿದ್ದು, ಈ ಸಾಧನೆಗೆ ಕಾರಣರಾದ ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಕಟ್ಟಿಮನಿ ಸರಸ್ವತಿ ಅವರನ್ನು ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಜೂಗಲ್ ಮಂಜುನಾಯಕ ಅವರು ಸನ್ಮಾನಿಸಿ ಗೌರವಿಸಿದರು.

ಅರಳಿಹಳ್ಳಿ ತಾಂಡದಲ್ಲಿ ಒಟ್ಟು 683 ಮತದಾರರಿದ್ದು, ಎಲ್ಲರ ಮನೆಗಳಿಗೆ ಎನ್ಯುಮರೇಷನ್ ಅರ್ಜಿಗಳನ್ನು ಸಮರ್ಪಕವಾಗಿ ವಿತರಿಸುವುದರ ಜೊತೆಗೆ, ಭರ್ತಿ ಮಾಡಿದ ಅರ್ಜಿಗಳನ್ನು ಮರಳಿ ಪಡೆದು ಆನ್‌ಲೈನ್ ಮೂಲಕ ಯಶಸ್ವಿಯಾಗಿ ಅಪ್‌ಲೋಡ್ ಮಾಡುವ ಕಾರ್ಯವನ್ನು ಮತಗಟ್ಟೆ ಸಂಖ್ಯೆ–5ರ ಬಿಎಲ್‌ಒ ಕಟ್ಟಿಮನಿ ಸರಸ್ವತಿ ಪೂರ್ಣಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಜೂಗಲ್ ಮಂಜುನಾಯಕ, ಕಂಪ್ಲಿ ತಾಲೂಕಿನಾದ್ಯಂತ ಎಸ್‌ಐಆರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರಳಿಹಳ್ಳಿ ತಾಂಡದಲ್ಲಿ ಶೇ.100 ಸಾಧನೆ ಮಾಡಿರುವ ಬಿಎಲ್‌ಒ ಕಟ್ಟಿಮನಿ ಸರಸ್ವತಿ ಇತರ ಮತಗಟ್ಟೆ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ ಎಂದು ಪ್ರಶಂಸಿಸಿದರು.

ಈ ಯಶಸ್ಸಿನಲ್ಲಿ ಗ್ರಾಮ ಆಡಳಿತಾಧಿಕಾರಿ ಲಕ್ಷ್ಮಣ ನಾಯಕ ಅವರ ಪಾತ್ರವೂ ಮಹತ್ವದ್ದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ತಾಲೂಕಿನ ಎಲ್ಲ ಬಿಎಲ್‌ಒಗಳು ಇದೇ ರೀತಿಯ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಲು ಸಹಕರಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಿರಸ್ತೇದಾರ ಜಿ. ಪಂಪಾಪತಿ, ಎಸ್.ಕೆ. ರಮೇಶ್, ಕಂದಾಯಾಧಿಕಾರಿ ವೈ.ಎಂ. ಜಗದೀಶ್, ಚುನಾವಣಾ ವಿಭಾಗದ ನಿರ್ವಾಹಕ ಸುರೇಶ್, ಕಂದಾಯ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X