Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಹಣದ ಆಮಿಷವೊಡ್ಡಿ...

Ballari | ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ 11 ಮಂದಿಯ ಬಂಧನ : ಎಸ್‌ಪಿ ಡಾ.ಸುಮನ್ ಡಿ.ಪೆನ್ನೇಕರ್

ವಾರ್ತಾಭಾರತಿವಾರ್ತಾಭಾರತಿ12 Nov 2026 7:53 PM IST
share
Ballari | ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ 11 ಮಂದಿಯ ಬಂಧನ : ಎಸ್‌ಪಿ ಡಾ.ಸುಮನ್ ಡಿ.ಪೆನ್ನೇಕರ್

ಬಳ್ಳಾರಿ: ಬಡ ಕುಟುಂಬಗಳ ಹೆಣ್ಣುಮಕ್ಕಳಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಸಂಘಟಿತ ಜಾಲವೊಂದನ್ನು ಬಳ್ಳಾರಿ ಪೊಲೀಸರು ಭೇದಿಸಿದ್ದಾರೆ. ಕಳೆದ ಆರು ತಿಂಗಳಿಂದ ಡಿಜಿಟಲ್ ಮಾಧ್ಯಮಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದ ಈ ಜಾಲದ ಕುರಿತು ಸುದೀರ್ಘ ತನಿಖೆ ನಡೆಸಿದ ಪೊಲೀಸರು, ಒಟ್ಟು 16 ಆರೋಪಿಗಳನ್ನು ಗುರುತಿಸಿದ್ದು, ಈ ಪೈಕಿ 11 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಡಾ.ಸುಮನ್ ಡಿ.ಪೆನ್ನೇಕರ್ ತಿಳಿಸಿದರು.

ನಗರದ ಎಸ್‌ಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ವಿವರಗಳನ್ನು ಬಹಿರಂಗಪಡಿಸಿದ ಅವರು, ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಡ ಕುಟುಂಬಗಳ ಹೆಣ್ಣುಮಕ್ಕಳನ್ನೇ ಮುಖ್ಯವಾಗಿ ಗುರಿಯಾಗಿಸಿಕೊಂಡಿದ್ದ ಆರೋಪಿಗಳು, ಹಣದ ಆಮಿಷವೊಡ್ಡಿ ಅವರನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳುತ್ತಿದ್ದರು. ಈ ಜಾಲವು ಬಳ್ಳಾರಿ ಸೇರಿದಂತೆ ಅನಂತಪುರ, ಚಿಕ್ಕಮಗಳೂರು, ಮೈಸೂರು ಮತ್ತಿತರ ಪ್ರದೇಶಗಳೊಂದಿಗೆ ಸಂಪರ್ಕ ಹೊಂದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದರು.

ಬಳ್ಳಾರಿಯ ಅಕ್ಕಪಡೆ (ಮಹಿಳಾ ಪೊಲೀಸರ ತಂಡ) ಕಳೆದ ಎರಡು ತಿಂಗಳಿಂದ ಈ ಜಾಲದ ಚಟುವಟಿಕೆಗಳ ಮೇಲೆ ನಿಗಾ ಇರಿಸಿತ್ತು. ಆಳವಾದ ತನಿಖೆ ನಡೆಸಿ, ಸುಮಾರು 45 ದಿನಗಳ ಕಾಲ ವಿಶೇಷ ಕಾರ್ಯಾಚರಣೆ ಕೈಗೊಂಡ ತಂಡ ಕೊನೆಗೂ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. ಈ ಸಂಬಂಧ ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವಿವರಿಸಿದರು.

ಫೋಟೊಗಳ ಮೂಲಕ ಹೆಣ್ಣುಮಕ್ಕಳ ಆಯ್ಕೆ :

ಆರೋಪಿಗಳು ಹೆಣ್ಣುಮಕ್ಕಳನ್ನು ಗುರುತಿಸಲು ವ್ಯವಸ್ಥಿತ ವಿಧಾನ ಅನುಸರಿಸುತ್ತಿದ್ದರು ಎನ್ನಲಾಗಿದೆ. ಯುವತಿಯರ ವಯಸ್ಸು, ಎತ್ತರ ಹಾಗೂ ಇತರ ವಿವರಗಳನ್ನು ಕೇಳಿ, ನಿರ್ದಿಷ್ಟ ರೀತಿಯಲ್ಲಿ ಫೋಟೊಗಳನ್ನು ಕಳುಹಿಸುವಂತೆ ಸೂಚಿಸುತ್ತಿದ್ದರು. ಹೀಗೆ ಮೂರು ಹಂತಗಳಲ್ಲಿ ಆಯ್ಕೆ ಮಾಡಲಾದ ಹೆಣ್ಣುಮಕ್ಕಳನ್ನು ‘ಲಕ್ಷ್ಮಿ ಪೂಜೆ’ ಹೆಸರಿನಲ್ಲಿ ಕರೆಯಿಸಿಕೊಂಡು, ಅಲ್ಲಿ ಹಣದ ಮಳೆ ಸುರಿಸಲಾಗುತ್ತದೆ ಎಂದು ನಂಬಿಸುತ್ತಿದ್ದರು. ಪೂಜೆಯಲ್ಲಿ ನೀಡಲಾದ ಹಣವನ್ನು ಯುವತಿ, ಮಧ್ಯವರ್ತಿ ಹಾಗೂ ಜಾಲದ ಮುಖ್ಯಸ್ಥನಿಗೆ ಹಂಚಲಾಗುತ್ತದೆ ಎಂದು ಹೇಳಲಾಗುತ್ತಿತ್ತು.

ಇದಲ್ಲದೆ, ಕೊನೆಗೆ ಬೆತ್ತಲೆ ಫೋಟೊಗಳನ್ನು ಕಳುಹಿಸುವಂತೆಯೂ ಒತ್ತಾಯಿಸಲಾಗುತ್ತಿತ್ತು. ಈ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇತ್ತು. ಜಾಲಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಹೆಣ್ಣುಮಕ್ಕಳ ಫೋಟೊಗಳೂ ಪತ್ತೆಯಾಗಿವೆ ಎಂದು ಎಸ್‌ಪಿ ತಿಳಿಸಿದರು.

ಕೋಡ್‌ ವರ್ಡ್‌ಗಳ ಮೂಲಕ ವ್ಯವಹಾರ :

ಆರೋಪಿಗಳು ತಮ್ಮ ಚಟುವಟಿಕೆಗಳನ್ನು ಗುಟ್ಟಾಗಿ ನಡೆಸಲು ಕೋಡ್‌ ವರ್ಡ್‌ಗಳನ್ನು ಬಳಸುತ್ತಿದ್ದರು. ಜಾಲವನ್ನು ‘ಮೀಡಿಯಾ’, ಹೆಣ್ಣುಮಕ್ಕಳನ್ನು ‘ಪೇಪರ್’ ಹಾಗೂ ಜಾಲದ ಮುಖ್ಯಸ್ಥನನ್ನು ‘ಡಿಆರ್’ ಎಂದು ಕರೆಯುತ್ತಿದ್ದರು. ಈ ಮೂಲಕ ಪರಸ್ಪರ ಸಂವಹನ ನಡೆಸಿ, ಜಾಲದ ಕಾರ್ಯಾಚರಣೆ ಹೊರಜಗತ್ತಿಗೆ ತಿಳಿಯದಂತೆ ನೋಡಿಕೊಳ್ಳುತ್ತಿದ್ದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಳ್ಳಾರಿ ಜಿಲ್ಲೆಯಿಂದ ಮೂವರು ಯುವತಿಯರನ್ನು ಕಳುಹಿಸಿರುವ ಸುಳಿವು ದೊರೆತಿದೆ. ಬಂಧಿತರಲ್ಲಿ 10 ಮಂದಿ ಬಳ್ಳಾರಿಯವರಾಗಿದ್ದು, ಒಬ್ಬರು ಅನಂತಪುರದವರು. ಮತ್ತೊಬ್ಬರು ಪುಣೆಯವರು ಎಂಬ ಮಾಹಿತಿಯೂ ಲಭ್ಯವಾಗಿದ್ದು, ಈ ಕುರಿತು ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಅಕ್ಕಪಡೆ ಜಾಲವನ್ನು ಪತ್ತೆಹಚ್ಚಿದ ಬಳಿಕ ನಗರ ಡಿವೈಎಸ್‌ಪಿ ಗೋವಿಂದರಾಜು, ಎಪಿಎಂಸಿ ಸಿಪಿಐ ಮುಹಮ್ಮದ್ ರಫೀಕ್, ಪಿಎಸ್‌ಐ ವಲಿಬಾಷಾ ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಗೋವಿಂದಮ್ಮ, ನಾಗರಾಜ, ರಾಜು, ಎರ‍್ರಿಸ್ವಾಮಿ, ಈರಮ್ಮ, ಮಹಮ್ಮದ್, ವಿನೂತಬಾಯಿ, ರಾಬಿಯಾ, ಗೌಸಿಯಾ, ಗಂಗಾಧರ, ಅನ್ವರ್, ಉಸ್ಮಾನ್, ರಾಹುಲ್, ಅಲಿಬೈ, ಅಶ್ರಫ್ ಹಾಗೂ ಬಾಬುರಾವ್ ಸೇರಿದಂತೆ ಒಟ್ಟು 16 ಆರೋಪಿಗಳನ್ನು ಗುರುತಿಸಲಾಗಿದೆ. ಈ ಪೈಕಿ 11 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್‌ ಪಿ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರ ಡಿವೈಎಸ್‌ಪಿ ಗೋವಿಂದರಾಜುಲು, ಎಪಿಎಂಸಿ ಸಿಪಿಐ ಮಹಮ್ಮದ್ ರಫೀಕ್ ಹಾಗೂ ಅಕ್ಕಪಡೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಅಕ್ಕಪಡೆಯಿಂದ ಯಶಸ್ವಿ ಕಾರ್ಯಾಚರಣೆ :

ನಗರದ ಕೆಲವು ಸ್ಲಂ ಪ್ರದೇಶಗಳಲ್ಲಿ ಈ ಜಾಲ ಕಾರ್ಯನಿರ್ವಹಿಸುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಅಕ್ಕಪಡೆಯ ಸಿಬ್ಬಂದಿ, ಜಾಲದಲ್ಲಿದ್ದ ಕೆಲವು ಮಹಿಳಾ ಟೈಲರ್‌ ಗಳ ಸಂಪರ್ಕ ಸಾಧಿಸಿದ್ದರು. ಬಳಿಕ ಬಡ ಮಹಿಳೆಯರಂತೆ ಹಳೆಯ ಬಟ್ಟೆಗಳನ್ನು ಧರಿಸಿ ಜಾಲದ ಸದಸ್ಯರನ್ನು ಭೇಟಿಯಾಗಿದ್ದರು. ತಮ್ಮ ಕುಟುಂಬಗಳು ಹಿಂದೆ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿದ್ದವು. ಆಸ್ತಿ ಕಳೆದುಕೊಂಡು ಇದೀಗ ಆರ್ಥಿಕ ಸಂಕಷ್ಟದಲ್ಲಿದ್ದೇವೆ ಎಂದು ಹೇಳಿ ಅವರ ವಿಶ್ವಾಸ ಗಳಿಸಿದ್ದರು.

ಜಾಲದ ಮೂರು-ನಾಲ್ಕು ಹಂತಗಳನ್ನು ದಾಟಿದ ಬಳಿಕ ಅಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ನಂತರ ಹೆಚ್ಚುವರಿ ಪೊಲೀಸ್ ತಂಡದೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಅಕ್ಕಪಡೆಯ ಲಲಿತಮ್ಮ, ಅನಿತಾ, ಶಾಹೀದಾ ಹಾಗೂ ರುಖಿಯಾ ಬಾನು ತಿಳಿಸಿದರು.

Tags

Dr.Suman D.PennekarmoneywomenBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X