Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | 6ರಿಂದ 8ನೇ ತರಗತಿ ಗಣಿತ,...

Ballari | 6ರಿಂದ 8ನೇ ತರಗತಿ ಗಣಿತ, ವಿಜ್ಞಾನ ಶಿಕ್ಷಕರಿಗೆ 5 ದಿನಗಳ ತರಬೇತಿ

ವಾರ್ತಾಭಾರತಿವಾರ್ತಾಭಾರತಿ25 Aug 2026 6:31 PM IST
share
Ballari | 6ರಿಂದ 8ನೇ ತರಗತಿ ಗಣಿತ, ವಿಜ್ಞಾನ ಶಿಕ್ಷಕರಿಗೆ 5 ದಿನಗಳ ತರಬೇತಿ

ಸಂಡೂರು/ಬಳ್ಳಾರಿ: 2026-27ನೇ ಸಾಲಿನಿಂದ 6ರಿಂದ 8ನೇ ತರಗತಿಯ ಗಣಿತ ಹಾಗೂ ವಿಜ್ಞಾನ ವಿಷಯಗಳ ಪಠ್ಯಕ್ರಮದಲ್ಲಿ ಅಳವಡಿಸಿರುವ ಹೊಸ ಬೋಧನಾ ವಿಧಾನಗಳು ಮತ್ತು ಬದಲಾದ ಅಂಶಗಳ ಕುರಿತು ಶಿಕ್ಷಕರಿಗೆ ಐದು ದಿನಗಳ ವಿಷಯ ಸಂಪದೀಕರಣ ತರಬೇತಿ ಯಶಸ್ವಿಯಾಗಿ ನಡೆಯಿತು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಬಳ್ಳಾರಿ ಹಾಗೂ ಸಂಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಆ.19ರಿಂದ 24ರವರೆಗೆ ಸಂಡೂರು ತಾಲ್ಲೂಕಿನ TLC ಕೇಂದ್ರ ಹಾಗೂ ಚೋರನೂರು ಹೋಬಳಿಯ GLPS ಆಶ್ರಯ ಶಾಲೆಯಲ್ಲಿ ತರಬೇತಿ ಆಯೋಜಿಸಲಾಗಿತ್ತು.

NCERT ಪಠ್ಯಕ್ರಮದ ರಾಷ್ಟ್ರೀಯ ಅಭಿವೃದ್ಧಿ ಗುರಿಗಳ ಆಶಯಗಳನ್ನು ಒಳಗೊಂಡಿರುವ ನೂತನ ಪಠ್ಯಪುಸ್ತಕಗಳಲ್ಲಿ ಮಕ್ಕಳಲ್ಲಿ 21ನೇ ಶತಮಾನದ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಚಟುವಟಿಕೆ ಆಧಾರಿತ, ಅನ್ವೇಷಣಾತ್ಮಕ ಹಾಗೂ ಅನುಭವಾಧಾರಿತ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

‘ಏನು?, ಏಕೆ?, ಹೇಗೆ?’ ಎಂಬ ಪ್ರಶ್ನೆಗಳ ಮೂಲಕ ಮಕ್ಕಳಲ್ಲಿ ಕುತೂಹಲ ಬೆಳೆಸುವುದು, ನಿತ್ಯಜೀವನದ ಅನುಭವಗಳೊಂದಿಗೆ ವಿಷಯಗಳನ್ನು ಹೋಲಿಸಿ ಕಲಿಯುವಂತೆ ಮಾಡುವುದು ಹಾಗೂ ಕಲಿಕೆಯನ್ನು ಪ್ರಾಯೋಗಿಕವಾಗಿ ಅನ್ವಯಿಸುವ ಅವಕಾಶ ಕಲ್ಪಿಸುವುದು ತರಬೇತಿಯ ಪ್ರಮುಖ ಉದ್ದೇಶವಾಗಿತ್ತು.

ಎರಡು ತರಬೇತಿ ಕೇಂದ್ರಗಳಲ್ಲಿ ಒಟ್ಟು 81 ಶಿಕ್ಷಕರು ಭಾಗವಹಿಸಿದ್ದು, ಪಠ್ಯಪುಸ್ತಕ ವಿಶ್ಲೇಷಣೆ, ಬದಲಾದ ಕಲಿಕಾ ವಿಧಾನಗಳು, ಪ್ರಾಯೋಗಿಕ ಚಟುವಟಿಕೆಗಳು ಹಾಗೂ ತರಗತಿ ಬೋಧನೆಯಲ್ಲಿ ಅವುಗಳ ಅನ್ವಯದ ಕುರಿತು ಮಾರ್ಗದರ್ಶನ ನೀಡಲಾಯಿತು.

APF ತಂಡದ ಸಹಕಾರದೊಂದಿಗೆ ECO ಗೂಳೆಪ್ಪ ಬೆಳ್ಳಕಟ್ಟೆ, BRP ಮಂಜುನಾಥ್ ಆದಿಮನೆ, CRP ನಾಗರಾಜ್ ಸೇರಿದಂತೆ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಿದರು.

ತರಬೇತಿಯ ಮೂಲಕ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ತಾರ್ಕಿಕ ಚಿಂತನೆ, ಅನ್ವೇಷಣಾ ಪ್ರವೃತ್ತಿ ಹಾಗೂ ಅನ್ವಯಿಕ ಕಲಿಕೆಯನ್ನು ಬೆಳೆಸಲು ಶಿಕ್ಷಕರಿಗೆ ಅಗತ್ಯವಾದ ಬೋಧನಾ ತಂತ್ರಗಳನ್ನು ಪರಿಚಯಿಸಲಾಯಿತು. ಹೊಸ ಪಠ್ಯಕ್ರಮದ ಆಶಯಗಳನ್ನು ತರಗತಿ ಹಂತದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತರಬೇತಿ ಸಹಕಾರಿಯಾಗಲಿದೆ ಎಂದು ಆಯೋಜಕರು ತಿಳಿಸಿದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X