Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ನಕಲಿ ದಾಖಲೆ ಸೃಷ್ಟಿಸಿ ಕದ್ದ...

Ballari | ನಕಲಿ ದಾಖಲೆ ಸೃಷ್ಟಿಸಿ ಕದ್ದ ವಾಹನ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ : 20.50 ಲಕ್ಷ ರೂ. ಮೌಲ್ಯದ 41 ಬೈಕ್ ವಶ

ವಾರ್ತಾಭಾರತಿವಾರ್ತಾಭಾರತಿ24 Jun 2026 10:28 PM IST
share
Ballari | ನಕಲಿ ದಾಖಲೆ ಸೃಷ್ಟಿಸಿ ಕದ್ದ ವಾಹನ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ : 20.50 ಲಕ್ಷ ರೂ. ಮೌಲ್ಯದ 41 ಬೈಕ್ ವಶ

ಸಿರುಗುಪ್ಪ/ಬಳ್ಳಾರಿ : ಅಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೈಕ್ ಕಳ್ಳರ ಜಾಲವನ್ನು ಸಿರುಗುಪ್ಪ ಪೊಲೀಸರು ಭೇದಿಸಿದ್ದು, ಸುಮಾರು 20.50 ಲಕ್ಷ ರೂ. ಮೌಲ್ಯದ 41 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಜೂ.2ರಂದು ಸಿರುಗುಪ್ಪ ಪಟ್ಟಣದ ನಿಟ್ಟೂರು ನರಸಿಂಹಮೂರ್ತಿ ಬಯಲು ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಮುಕ್ಕಣ್ಣ ಎಂಬುವವರ ಹಿರೋ ಪ್ಯಾಷನ್ ಪ್ರೋ (KA-34-ED-7124) ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಬಳ್ಳಾರಿ ನಗರದ ಅಶೋಕನಗರ ನಿವಾಸಿ ಸಿದ್ದಾರೆಡ್ಡಿ ಪ್ರೈಂಡರ್ ಸಿದ್ದಾರೆಡ್ಡಿ (56) ಎಂಬಾತನ ಕೈವಾಡ ಬೆಳಕಿಗೆ ಬಂದಿದೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ, ಸಿರುಗುಪ್ಪ, ಬಳ್ಳಾರಿ, ಹೊಸಪೇಟೆ, ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಚಿತ್ರದುರ್ಗ ಸೇರಿದಂತೆ ವಿವಿಧ ನಗರಗಳಲ್ಲಿ ಬೈಕ್ ಕಳ್ಳತನ ನಡೆಸಿರುವುದು ಪತ್ತೆಯಾಗಿದೆ. ತನಿಖೆಯ ವೇಳೆ ಒಟ್ಟು 41 ಮೋಟಾರ್ ಸೈಕಲ್‌ಗಳನ್ನು ಜಪ್ತಿ ಮಾಡಲಾಗಿದ್ದು, ಅವುಗಳ ಮೌಲ್ಯ ಸುಮಾರು 20.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಜಪ್ತಿ ಮಾಡಲಾದ ವಾಹನಗಳಲ್ಲಿ ಬಳ್ಳಾರಿ ಜಿಲ್ಲೆಯ 16, ಚಿತ್ರದುರ್ಗ ಜಿಲ್ಲೆಯ 21 ಹಾಗೂ ವಿಜಯನಗರ ಜಿಲ್ಲೆಯ 4 ಬೈಕ್‌ಗಳು ಸೇರಿವೆ. ಆರೋಪಿ ಜನನಿಬಿಡ ಪ್ರದೇಶಗಳಲ್ಲಿ ನಿಲ್ಲಿಸಿದ್ದ ವಿಶೇಷವಾಗಿ ಹಿರೋ ಹೊಂಡಾ ಸ್ಪ್ಲೆಂಡರ್ ಮಾದರಿಯ ಬೈಕ್‌ಗಳನ್ನು ನಕಲಿ ಕೀಗಳ ಸಹಾಯದಿಂದ ಕಳ್ಳತನ ಮಾಡುತ್ತಿದ್ದನು.

ಕಳ್ಳತನದ ಬಳಿಕ ವಾಹನಗಳ ಮೂಲ ನಂಬರ್ ಪ್ಲೇಟ್‌ಗಳನ್ನು ತೆಗೆದುಹಾಕಿ, ಸಾರ್ವಜನಿಕರ ವಾಹನಗಳ ನಂಬರ್‌ಗಳನ್ನು ಫೋಟೋ ತೆಗೆದು ಕರ್ನಾಟಕ ಒನ್ ಕೇಂದ್ರಗಳಲ್ಲಿ ನಕಲಿ ಆರ್‌ಸಿ ಪ್ರತಿಗಳನ್ನು ಡೌನ್‌ಲೋಡ್ ಮಾಡಿಸಿಕೊಂಡು ಹೊಸ ನಂಬರ್ ಪ್ಲೇಟ್ ಅಳವಡಿಸಿ ವಾಹನಗಳ ಗುರುತು ಬದಲಾಯಿಸುತ್ತಿದ್ದನು. ಬಳಿಕ ಕದ್ದ ವಾಹನಗಳನ್ನು ಸೆಕೆಂಡ್ ಹ್ಯಾಂಡ್ ವಾಹನಗಳೆಂದು ನಂಬಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನೆಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಯಶಸ್ವಿ ತನಿಖೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್, ಡಿಎಸ್‌ಪಿ ಮಾಲತೇಶ ಕೊನಬೇವು, ಪಿಪಿಐ ವೈ.ಎಸ್. ಹನಮಂತಪ್ಪ, ಪಿಎಸ್‌ಐ ಪರುಶುರಾಮ್ ಹಾಗೂ ಸಿರುಗುಪ್ಪ, ಬಳ್ಳಾರಿ ಗ್ರಾಮೀಣ ಮತ್ತು ಪಿ.ಹಳ್ಳಿ ಠಾಣೆಗಳ ವಿಶೇಷ ತಂಡದ ಸಿಬ್ಬಂದಿ ತಾಂತ್ರಿಕ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ.

ಈ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ಸೆಕರ್ ಶ್ಲಾಘಿಸಿದ್ದು, ಸಾರ್ವಜನಿಕರು ವಾಹನಗಳನ್ನು ಸುರಕ್ಷಿತ ಸ್ಥಳಗಳಲ್ಲಿ ನಿಲ್ಲಿಸುವುದರ ಜೊತೆಗೆ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.




Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X