Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಭೂಮಿ ವಿವಾದದ ಆರೋಪಗಳು...

Ballari | ಭೂಮಿ ವಿವಾದದ ಆರೋಪಗಳು ಆಧಾರರಹಿತ: ಮಾಜಿ ಶಾಸಕ ಸೋಮಲಿಂಗಪ್ಪ

ವಾರ್ತಾಭಾರತಿವಾರ್ತಾಭಾರತಿ29 Sept 2026 5:44 PM IST
share
Ballari | ಭೂಮಿ ವಿವಾದದ ಆರೋಪಗಳು ಆಧಾರರಹಿತ: ಮಾಜಿ ಶಾಸಕ ಸೋಮಲಿಂಗಪ್ಪ

ಬಳ್ಳಾರಿ/ಸಿರುಗುಪ್ಪ: ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಹಾಗೂ ತಮ್ಮ ಮಕ್ಕಳ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿನ ಆರೋಪಗಳು ಆಧಾರರಹಿತವಾಗಿವೆ ಎಂದು ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಆರೋಪಿಸಿದರು.

ತೆಕ್ಕಲಕೋಟೆಯ ಗೃಹಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೆ ನಂ. 8/3ರಲ್ಲಿದ್ದ ಮೂರು ಎಕರೆ ಜಮೀನಿನ ಪೈಕಿ 75 ಸೆಂಟ್ಸ್ ಜಮೀನನ್ನು ಫಿರ್ಯಾದುದಾರರಾದ ಮಂಜುಳ ಅವರು ಜಿಪಿಎ ಪಡೆದಿದ್ದ ಆಧಾರದ ಮೇಲೆ ತಮ್ಮ ಪುತ್ರ ವೆಂಕಟಪ್ಪನಾಯಕ ಖರೀದಿಸಿದ್ದಾರೆ ಎಂದು ತಿಳಿಸಿದರು.

‘ಮಂಜುಳ ಅವರು ಈ ಹಿಂದೆಯೂ ನನ್ನ ಹಾಗೂ ಮಕ್ಕಳ ವಿರುದ್ಧ ಹಲವು ಬಾರಿ ದೂರು ನೀಡಿದ್ದಾರೆ. ಆ ಪ್ರಕರಣಗಳಲ್ಲಿನ ಆರೋಪಗಳು ಸುಳ್ಳು ಎಂಬುದು ಸಿರುಗುಪ್ಪ ಹಾಗೂ ಬಳ್ಳಾರಿ ಜಿಲ್ಲಾ ನ್ಯಾಯಾಲಯಗಳಲ್ಲಿನ ವಿಚಾರಣೆಯಲ್ಲಿ ಸಾಬೀತಾಗಿದೆ’ ಎಂದು ಹೇಳಿದರು.

ಸೆ. 27ರಂದು ತಮ್ಮ ಹಾಗೂ ಮಕ್ಕಳ ವಿರುದ್ಧ ಸಿರುಗುಪ್ಪ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪ್ರಕರಣದಲ್ಲಿ ಉಲ್ಲೇಖಿಸಿರುವ ಘಟನಾ ಸ್ಥಳದಲ್ಲಿ ತಾವು ಅಥವಾ ತಮ್ಮ ಮಕ್ಕಳು ಇರಲಿಲ್ಲ. ಆ ದಿನದ ಮೊಬೈಲ್ ಫೋನ್ ಲೊಕೇಶನ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರೆ ವಾಸ್ತವಾಂಶ ತಿಳಿಯಲಿದೆ ಎಂದು ಹೇಳಿದರು.

ಸಂಬಂಧಿಸಿದ ಜಮೀನಿನ ನೋಂದಣಿ ಪ್ರಕ್ರಿಯೆಯನ್ನು ಮಂಜುಳ ಅವರೇ ಸಿರುಗುಪ್ಪ ನೋಂದಣಿ ಕಚೇರಿಯಲ್ಲಿ ನಡೆಸಿದ್ದಾರೆ. ನೋಂದಣಿ ಬಳಿಕ ಖರೀದಿಸಿದ ಜಮೀನಿನ ಸುತ್ತ ತಂತಿಬೇಲಿ ಹಾಕಲಾಗಿದೆ. ಅವರ ಉಳಿದ ಜಮೀನಿಗೂ ತಮ್ಮ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸೋಮಲಿಂಗಪ್ಪ ಸ್ಪಷ್ಟಪಡಿಸಿದರು.

ತಮ್ಮ ಹಾಗೂ ಕುಟುಂಬದ ವಿರುದ್ಧ ಆರೋಪ ಮಾಡುತ್ತಿರುವುದರಿಂದ ತೇಜೋವಧೆಯಾಗುತ್ತಿದೆ. ಪ್ರಕರಣದ ವಿರುದ್ಧ ಕಾನೂನು ಮೂಲಕ ಹೋರಾಟ ನಡೆಸಲಾಗುವುದು. ಅಗತ್ಯಬಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಸಿದರು.

ಮಂಜುಳ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ಕಾನೂನಿನ ಅರಿವು ಹೊಂದಿದ್ದಾರೆ. ಹೀಗಿದ್ದರೂ ತಮ್ಮ ವಿರುದ್ಧ ಇಂತಹ ಆರೋಪ ಮಾಡಿರುವುದು ಸರಿಯಲ್ಲ ಎಂದು ಅವರು ಹೇಳಿದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X