Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಅರ್ಥ ಸಂಭ್ರಮ–2026:...

Ballari | ಅರ್ಥ ಸಂಭ್ರಮ–2026: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ2 July 2026 7:28 PM IST
share
Ballari | ಅರ್ಥ ಸಂಭ್ರಮ–2026: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಸಂಡೂರು/ಬಳ್ಳಾರಿ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ “ಅರ್ಥ ಸಂಭ್ರಮ–2026” ಹೆಸರಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು 2024–26ನೇ ಸಾಲಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಕಾರ್ಯ ವಿಭಾಗದ ಸಂಯೋಜಕಿ ಡಾ. ಸುಮಾ ಕೆ.ಜಿ., ಜೀವನದಲ್ಲಿ ಯಶಸ್ಸು ಸಾಧಿಸಲು ಶ್ರಮ, ಶಿಸ್ತು ಹಾಗೂ ನಿರಂತರ ಕಲಿಕೆ ಅತ್ಯಗತ್ಯವಾಗಿದ್ದು, ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉನ್ನತ ಸಾಧನೆಗಳನ್ನು ಮಾಡಬಹುದು ಎಂದು ಹೇಳಿದರು.

ಮುಖ್ಯ ಅತಿಥಿ ಡಾ. ಮಂಜುನಾಥ ಉಲವತ್ತಿ ಶೆಟ್ಟರ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿ ಸಮಯವನ್ನು ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಡಾ. ಸೋಮಶೇಖರ್ ಅವರು ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಮಾನವೀಯ ಗುಣಗಳನ್ನು ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಉಪನ್ಯಾಸಕ ಡಾ. ಕೃಷ್ಣ ಅವರು ಅರ್ಥಶಾಸ್ತ್ರದ ಮಹತ್ವ, ಅದರ ಪ್ರಾಯೋಗಿಕ ಉಪಯೋಗಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಪಾತ್ರವನ್ನು ವಿವರಿಸಿದರು.

ಕೇಂದ್ರದ ನಿರ್ದೇಶಕ ಪ್ರೊ. ತಿಪ್ಪೇಸ್ವಾಮಿ ಹೆಚ್. ಮಾತನಾಡಿ, ಪದವಿಗಿಂತ ಮೌಲ್ಯಾಧಾರಿತ ಜೀವನ ಮುಖ್ಯವಾಗಿದ್ದು, ಉತ್ತಮ ಶಿಕ್ಷಣದೊಂದಿಗೆ ಮಾನವೀಯತೆ ಮತ್ತು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ವಿಭಾಗದ ಅಧ್ಯಾಪಕ ಡಾ. ನಾಗರಾಜ ಜೆ. ಅವರು ತಾಳ್ಮೆ, ಶಿಸ್ತು ಮತ್ತು ಪರಿಶ್ರಮದ ಮಹತ್ವವನ್ನು ವಿವರಿಸಿ, ತಂದೆ-ತಾಯಿಗಳಿಗೆ ಗೌರವ ನೀಡಿ ಉತ್ತಮ ನಾಗರಿಕರಾಗಿ ಬೆಳೆಯುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ವಿಭಾಗದ ಸಂಯೋಜಕ ಡಾ. ಚೌಡಪ್ಪ ವಿ.ಎ. ಅವರು ಅರ್ಥಶಾಸ್ತ್ರ ವಿಭಾಗದ ಬೆಳವಣಿಗೆ, ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿ, ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು ಹೊಸ ಜ್ಞಾನವನ್ನು ಸದಾ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಅನುಭವಗಳು ಹಾಗೂ ನೆನಪುಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ನಿರೂಪಣೆಯನ್ನು ನಾಗರಾಜ ಜಿ., ಸ್ವಾಗತವನ್ನು ಸುದರ್ಶನ ಎಸ್. ಹಾಗೂ ವಂದನಾರ್ಪಣೆಯನ್ನು ಮಲ್ಲಿಕಾರ್ಜುನ ನೆರವೇರಿಸಿದರು.

ಸಂಶೋಧನಾ ವಿದ್ಯಾರ್ಥಿಗಳು, ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X