ಬಳ್ಳಾರಿ | ಮೇ 15ರಂದು ಬಾಲ ಚೈತನ್ಯ ಮಕ್ಕಳ ಆರೈಕೆ ಕೇಂದ್ರಗಳ ಚಾಲನಾ ಕಾರ್ಯಕ್ರಮ

ಸಾಂದರ್ಭಿಕ ಚಿತ್ರ
ಬಳ್ಳಾರಿ : ಜಿಲ್ಲೆಯಲ್ಲಿ ಅಂಗನವಾಡಿಗಳಿಗೆ ದಾಖಲಾಗಿರುವ ಮಕ್ಕಳಲ್ಲಿ ಅಪೌಷ್ಟಿಕತೆಯ ನಿಯಂತ್ರಣಕ್ಕಾಗಿ ಬಳ್ಳಾರಿ, ಸಿರಗುಪ್ಪ, ಸಂಡೂರು, ಕುರಗೋಡು ಹಾಗೂ ಕಂಪ್ಲಿ ತಾಲ್ಲೂಕುಗಳಲ್ಲಿನ ಆಯ್ದ ಸರಕಾರಿ ವಸತಿ ನಿಲಯ(ಹಾಸ್ಟೆಲ್) ಗಳಲ್ಲಿ 14 ದಿನಗಳ ಕಾಲ ಮಗುವಿನ ಆರೈಕೆಗಾಗಿ ತಾಯಿಯೊಂದಿಗೆ ಮಗುವಿಗೆ ವಸತಿ ವ್ಯವಸ್ಥೆಯೊಂದಿಗೆ ಅವಕಾಶ ಕಲ್ಪಿಸುವ ‘ಬಾಲಚೈತನ್ಯ ಮಕ್ಕಳ ಆರೈಕೆ ಕೇಂದ್ರ’ ಗಳನ್ನು ಏಕಕಾಲಕ್ಕೆ ಮೇ 15 ರಂದು ಆರಂಭಿಸಲಾಗುತ್ತಿದೆ.
ಈ ಸಂಬಂಧ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಾರ್ಗದರ್ಶನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಮೇ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಿ.ದೇವರಾಜ್ ಅರಸು ಬಾಲಕರ ಮೆಟ್ರಿಕ್ ಪೂರ್ವ ವಸತಿ ನಿಲಯ (ಮಯೂರ ಹೋಟೆಲ್ ಹಿಂಭಾಗ)ದಲ್ಲಿ ಚಾಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
Next Story