ಬಳ್ಳಾರಿ ಬ್ಯಾನರ್ ಗಲಾಟೆ: ಗನ್ಮ್ಯಾನ್ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು

ಸಾಂದರ್ಭಿಕ ಚಿತ್ರ
ಬೆಂಗಳೂರು : ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.
ಬಳ್ಳಾರಿ ಬ್ಯಾನರ್ ಗಲಾಟೆ ಸಂಬಂಧ ಬ್ರೂಸ್ಪೇಟೆ ಠಾಣೆಯಲ್ಲಿ ಒಟ್ಟು 6 ಪ್ರಕರಣ ದಾಖಲಾಗಿವೆ. ಗನ್ಮ್ಯಾನ್ಗಳಾದ ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ಹಾಗೂ ಮಹೇಂದ್ರ ಸಿಂಗ್ ಸೇರಿದಂತೆ ಕಾಂಗ್ರೆಸ್ನ 10, ಬಿಜೆಪಿಯ 11 ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದರು.
ಜ.5ರಂದು ಪ್ರಮುಖ ಆರೋಪಿ ಗುರುಚರಣ್ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಆದೇಶ ಬೆನ್ನಲ್ಲೇ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು.
ಬಳ್ಳಾರಿಯ ಬ್ರೂಸ್ಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ಗೆ ಸಂಬಂಧಿಸಿದ ಗನ್ನಿಂದಲೇ 12 ಎಂಎಂ ಬುಲೆಟ್ ಫೈರ್ ಮಾಡಿದ್ದಾನೆ. ಹೀಗಾಗಿ ಗುರುಚರಣ್ ಸಿಂಗ್ ಹೊರತು ಪಡಿಸಿ ಕ್ರೈಮ್ ನಂಬರ್ 4ರಲ್ಲಿನ 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.







