Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಶಾಂತಿ–ಸೌಹಾರ್ದದಿಂದ...

Ballari | ಶಾಂತಿ–ಸೌಹಾರ್ದದಿಂದ ಗಣೇಶೋತ್ಸವ ಆಚರಿಸಿ : ಎಸ್ಪಿ ಡಾ.ಸುಮನ್ ಡಿ.ಪೆನ್ನಕರ್

ವಾರ್ತಾಭಾರತಿವಾರ್ತಾಭಾರತಿ13 Sept 2026 7:28 PM IST
share
Ballari | ಶಾಂತಿ–ಸೌಹಾರ್ದದಿಂದ ಗಣೇಶೋತ್ಸವ ಆಚರಿಸಿ : ಎಸ್ಪಿ ಡಾ.ಸುಮನ್ ಡಿ.ಪೆನ್ನಕರ್

ಬಳ್ಳಾರಿ/ಕಂಪ್ಲಿ: ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಗಣೇಶೋತ್ಸವಕ್ಕೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತಿದ್ದು, ಸ್ಥಳೀಯ ಮುಖಂಡರು ಹಾಗೂ ಗಣಪತಿ ಮಂಡಳಿಯವರು ಜವಾಬ್ದಾರಿಯುತವಾಗಿ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನಕರ್ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಸಂಜೆ ನಡೆದ ಗೌರಿ–ಗಣೇಶ ಹಬ್ಬದ ಪೂರ್ವಭಾವಿ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಣೇಶೋತ್ಸವಕ್ಕೆ ಪ್ರಾಚೀನ ಇತಿಹಾಸವಿದ್ದು, ಯುವಕರು ಜಾನಪದ, ನಾಟಕ, ಭಕ್ತಿಗೀತೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಹಬ್ಬವನ್ನು ಸಡಗರ–ಸಂಭ್ರಮದಿಂದ ಆಚರಿಸಬೇಕು ಎಂದರು.

ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆವರೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ಡಿಜೆ ವ್ಯವಸ್ಥೆಯನ್ನು ನಿಷೇಧಿಸಲಾಗಿದ್ದು, ಕಡಿಮೆ ಶಬ್ದದ ಸೌಂಡ್ ಸಿಸ್ಟಮ್‌ಗಳನ್ನು ಮಾತ್ರ ಬಳಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮಗಳನ್ನು ಪಾಲಿಸಿ ಹಬ್ಬ ಆಚರಿಸುವಂತೆ ಮನವಿ ಮಾಡಿದರು.

ನಂತರ ಮಾತನಾಡಿದ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಬಿ. ವಾಸುಕುಮಾರ, ಕಂಪ್ಲಿಯಲ್ಲಿ ಎಲ್ಲ ಸಮುದಾಯಗಳ ಸಹಕಾರದಿಂದ ಹಬ್ಬಗಳು ಶಾಂತಿಯುತವಾಗಿ ನಡೆಯುತ್ತಿವೆ. ಈ ಬಾರಿಯೂ ಗಣಪತಿ ಮಂಡಳಿಯವರು ಸೌಹಾರ್ದತೆ ಕಾಪಾಡಿ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಈಗಾಗಲೇ ಕಂಪ್ಲಿ ತಾಲೂಕು ವ್ಯಾಪ್ತಿಯ ನಂ.10 ಮುದ್ದಾಪುರ ಹಾಗೂ ಗೋನಾಳ ಗ್ರಾಮಗಳಲ್ಲಿ ಗಣೇಶೋತ್ಸವಕ್ಕೆ ನಿಷೇಧ ವಿಧಿಸಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು, ಗಣಪತಿ ವಿಸರ್ಜನೆಗಾಗಿ ತುಂಗಭದ್ರ ನದಿಗೆ ತೆರಳುವ ಕೋಟೆ ರಸ್ತೆಯಲ್ಲಿ ಬೀದಿ ದೀಪಗಳ ಕೊರತೆ ಇರುವುದರಿಂದ ಕತ್ತಲಿನಲ್ಲಿ ವಿಸರ್ಜನೆ ನಡೆಸಬೇಕಾಗಿದೆ. ರಸ್ತೆ ಹಾಗೂ ನದಿ ತೀರದಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಮಾಡಬೇಕು ಮತ್ತು ವಿಸರ್ಜನೆ ವೇಳೆ ರಾತ್ರಿ ವಿದ್ಯುತ್ ಕಡಿತ ಮಾಡಬಾರದು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಡಿವೈಎಸ್‌ಪಿ ಪ್ರಸಾದ್ ಗೋಖುಲೆ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಜೆಇ ವಿನೋದ, ಕಂದಾಯ ಇಲಾಖೆಯ ಮೌನೇಶ್, ಎಪಿಎಂಸಿ ಅಧ್ಯಕ್ಷ ಎನ್. ಹಬೀಬ್ ರೆಹಮಾನ್, ಮುಖಂಡರಾದ ಕೆ.ಎಂ. ಹೇಮಯ್ಯಸ್ವಾಮಿ, ಸೈಯದ್ ಉಸ್ಮಾನ್, ಹೆಚ್.ಪಿ. ಶಿಕಾರಿ ರಾಮು, ಬೆಳಗೋಡ್‌ಹಾಳ್ ದೊಡ್ಡ ಬಸವರಾಜ ಬಡಗಿ, ಗೋಪಾಲ, ಜಾಫರ್, ಮನೋಜಗೌಡ ಸೇರಿದಂತೆ ಗಣಪತಿ ಮಂಡಳಿಯ ಪದಾಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X