Ballari | ಬಾಲ್ಯ ವಿವಾಹ ಆರೋಪ : ಯುವಕನ ವಿರುದ್ಧ ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ
ಬಳ್ಳಾರಿ/ಕುರುಗೋಡು: ತಾಲ್ಲೂಕಿನ ಗ್ರಾಮವೊಂದರ ನಿವಾಸಿ ರಾಜಶೇಖರ ಎಂಬ ಯುವಕನ ವಿರುದ್ಧ ಬಾಲ್ಯವಿವಾಹ, ಪೋಕ್ಸೊ ಹಾಗೂ ಅತ್ಯಾಚಾರ ಸೇರಿದಂತೆ ಮೂರು ಪ್ರಕರಣಗಳು ಕುರುಗೋಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು ರಾಜಶೇಖರ 2025ರ ನವೆಂಬರ್ 11ರಂದು ವಿವಾಹವಾಗಿದ್ದ ಎನ್ನಲಾಗಿದೆ. ಬಳಿಕ ಬಾಲಕಿ ಗರ್ಭಿಣಿಯಾಗಿದ್ದು, ಹೆರಿಗೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆ.15ರಂದು ಬೆಳಗ್ಗೆ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದು, ನಂತರ ತೀವ್ರ ರಕ್ತಸ್ರಾವದಿಂದಾಗಿ ಅಂದೇ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಬಾಲಕಿಯ ಮಾವ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜಶೇಖರನನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
Next Story




