Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಬಾಲ್ಯ ವಿವಾಹದಿಂದ ಆರೋಗ್ಯದ...

ಬಳ್ಳಾರಿ | ಬಾಲ್ಯ ವಿವಾಹದಿಂದ ಆರೋಗ್ಯದ ಮೇಲೆ ಪರಿಣಾಮ : ಡಾ.ಯಲ್ಲಾ ರಮೇಶ್ ಬಾಬು

ವಾರ್ತಾಭಾರತಿವಾರ್ತಾಭಾರತಿ29 Dec 2025 7:57 PM IST
share
ಬಳ್ಳಾರಿ | ಬಾಲ್ಯ ವಿವಾಹದಿಂದ ಆರೋಗ್ಯದ ಮೇಲೆ ಪರಿಣಾಮ : ಡಾ.ಯಲ್ಲಾ ರಮೇಶ್ ಬಾಬು
ಸಂಡೂರಿನಲ್ಲಿ ಮಾಹಿತಿ ಕಾರ್ಯಾಗಾರ

ಬಳ್ಳಾರಿ, ಡಿ.29: ಬಾಲ್ಯ ವಿವಾಹವು ಹದಿಹರೆಯದ ಗರ್ಭಧಾರಣೆ ಮತ್ತು ಹೆರಿಗೆ ಸಮಯದಲ್ಲಿ ಅಪಾಯ ಹೆಚ್ಚಿಸುತ್ತದೆ. ಇದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.

ಸಂಡೂರು ತಾಲೂಕಿನ ಬಂಡ್ರಿ ಮತ್ತು ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಗ್ರಾಮಗಳಿಗೆ ಭೇಟಿ ನೀಡಿ ಗರ್ಭೀಣಿ ತಾಯಂದಿರಿಗೆ 18 ವರ್ಷದೊಳಗೆ ಗರ್ಭ ಧರಿಸಿದರೆ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಕುರಿತು ಮಾಹಿತಿ ನೀಡಿದ ಅವರು, ಬಾಲ್ಯವಿವಾಹದಿಂದ ಹೆಚ್‌ಐವಿ/ಏಡ್ಸ್ ನಂತಹ ಲೈಂಗಿಕವಾಗಿ ಹರಡುವ ರೋಗಗಳ ಅಪಾಯ ಸಹ ಹೆಚ್ಚಿಸುತ್ತದೆ ಎಂದು ತಿಳಿಸಿದರು.

ಶಿಕ್ಷಣದ ಮೇಲೆ ಪರಿಣಾಮ:

ಬಾಲ್ಯ ವಿವಾಹದಿಂದಾಗಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚಾಗುತ್ತದೆ, ಇದರಿಂದ ಹುಡುಗಿಯರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಇದು ಅವರ ಭವಿಷ್ಯದ ಉದ್ಯೋಗ ಮತ್ತು ಆರ್ಥಿಕ ಅವಕಾಶಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ಮಾನಸಿಕ ಆರೋಗ್ಯದ ಮೇಲೆ ಪರಿಣಾಮ :

ಬಾಲ್ಯ ವಿವಾಹವು ಖಿನ್ನತೆ, ಆತಂಕ ಮತ್ತು ಆಘಾತದ ನಂತರದ ಒತ್ತಡದ ಅಸ್ವಸ್ಥತೆಗಳಂತಹ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದರು.

ಸಮಾಜದ ಮೇಲೆ ಪರಿಣಾಮ :

ಬಾಲ್ಯ ವಿವಾಹವು ಲಿಂಗ ಅಸಮಾನತೆ ಮತ್ತು ಬಡತನದ ಚಕ್ರವನ್ನು ಮುಂದುವರೆಸುತ್ತದೆ. ಇದು ದೇಶದ ಆರ್ಥಿಕ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತದೆ.

ಪೂರ್ವಜರ ಆಸ್ತಿಯಲ್ಲಿ ಪಾಲು ತಪ್ಪಿಸುವುದು :

ಗ್ರಾಮೀಣ ಪ್ರದೇಶಗಳಲ್ಲಿ, ಕೆಲವು ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಿದರೆ, ಅವರು ತಮ್ಮ ಆಸ್ತಿಯಲ್ಲಿ ಪಾಲು ಕೇಳುವುದಿಲ್ಲ ಎಂದು ಭಾವಿಸುತ್ತಾರೆ, ಇದು ಸಹ ಬಾಲ್ಯ ವಿವಾಹಕ್ಕೆ ಕಾರಣವಾಗುತ್ತದೆ.

ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 :

ಈ ಕಾಯ್ದೆಯು ಹುಡುಗಿಯರಿಗೆ ಕಾನೂನುಬದ್ಧ ವಿವಾಹದ ವಯಸ್ಸನ್ನು 18 ಮತ್ತು ಹುಡುಗರಿಗೆ 21 ಎಂದು ನಿಗದಿಪಡಿಸುತ್ತದೆ. ಇದು ಬಾಲ್ಯ ವಿವಾಹಗಳನ್ನು ಆಚರಿಸುವ ಅಥವಾ ಉತ್ತೇಜಿಸುವವರಿಗೆ ದಂಡ ವಿಧಿಸುತ್ತದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012 ಇದು ವೈವಾಹಿಕ ಸ್ಥಿತಿ ಏನೇ ಇರಲಿ, ಅಪ್ರಾಪ್ತ ವಯಸ್ಕರೊಂದಿಗಿನ ಲೈಂಗಿಕ ಸಂಬಂಧವನ್ನು ಶಾಸನಬದ್ಧ ಅತ್ಯಾಚಾರವೆಂದು ಗುರುತಿಸುತ್ತದೆ. ಶಿಕ್ಷಣ ಹಕ್ಕು ಕಾಯ್ದೆ 2009, ಇದು 14 ವರ್ಷದವರೆಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಖಾತ್ರಿಗೊಳಿಸುತ್ತದೆ, ಇದು ಮದುವೆಗಳನ್ನು ವಿಳಂಬಗೊಳಿಸಲು ಸಹಾಯ ಮಾಡುತ್ತದೆ ಎಂದರು.

ವರದಕ್ಷಿಣೆ ನಿಷೇಧ ಕಾಯ್ದೆ 1961 :

ಇದು ಬಾಲ್ಯ ವಿವಾಹಗಳಿಗೆ ಉತ್ತೇಜನ ನೀಡುವ ವರದಕ್ಷಿಣೆ ಬೇಡಿಕೆಗಳನ್ನು ಪರಿಹರಿಸುತ್ತದೆ. ಬಾಲ್ಯ ವಿವಾಹ ತಡೆಗೆ ಪ್ರಯತ್ನಗಳು ಬೇಟಿ ಬಚಾವೋ, ಬೇಟಿ ಪಡಾವೋ ಕಾಯ್ದೆಯು ಇದು ಲಿಂಗ ಸಮಾನತೆ ಮತ್ತು ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಸಾಂಕ್ರಾಮಿಕ ಅಧಿಕಾರಿ ಡಾ.ವೀರೇಂದ್ರ ಕುಮಾರ್, ಸಂಡೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಭರತ್, ಆಡಳಿತ ವೈದ್ಯಾಧಿಕಾರಿಗಳು ಸೇರಿದಂತೆ ತಾಯಂದಿರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X