Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ನಕಲಿ ಮತಗಳನ್ನು...

Ballari | ನಕಲಿ ಮತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು : ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಆರೋಪ

ವಾರ್ತಾಭಾರತಿವಾರ್ತಾಭಾರತಿ13 Jun 2026 9:10 PM IST
share
Ballari | ನಕಲಿ ಮತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು : ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಆರೋಪ

ಬಳ್ಳಾರಿ/ಕಂಪ್ಲಿ: ಚುನಾವಣಾ ಆಯೋಗದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದ್ದು, ನಕಲಿ ಮತಗಳನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮಾಜಿ ಶಾಸಕ ಟಿ.ಎಚ್. ಸುರೇಶಬಾಬು ಆರೋಪಿಸಿದರು.

ಪಟ್ಟಣದ ಕೊಟ್ಟಾಲ್ ರಸ್ತೆಯಲ್ಲಿರುವ ತುಂಗಭದ್ರ ಕಾರ್ಯಾಲಯದಲ್ಲಿ ಬಿಜೆಪಿ ಜಿಲ್ಲಾ ಘಟಕ ಹಾಗೂ ಕಂಪ್ಲಿ ಮಂಡಲದ ವತಿಯಿಂದ ಆಯೋಜಿಸಿದ್ದ ಬಿಎಲ್‌ಎ-2 ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಯನ್ನು ಪಾರದರ್ಶಕಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ ಎಸ್‌ಐಆರ್ ಜಾರಿಗೊಳಿಸಿದ್ದು, ಕಂಪ್ಲಿ ಕ್ಷೇತ್ರದ ಪ್ರತಿಯೊಂದು ಬೂತ್ ಮಟ್ಟದಲ್ಲೂ ಬಿಜೆಪಿ ಕಾರ್ಯಕರ್ತರು ಮತದಾರರ ಪಟ್ಟಿಯನ್ನು ಪರಿಶೀಲಿಸುವ ಕಾರ್ಯ ಕೈಗೊಳ್ಳಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳ ಆಧಾರದಲ್ಲಿ ಅಧಿಕಾರಕ್ಕೆ ಬಂದಿದ್ದು, ಅಭಿವೃದ್ಧಿ ಕಾರ್ಯಗಳಲ್ಲಿ ವಿಫಲವಾಗಿದೆ. ಕಂಪ್ಲಿ ಸೇತುವೆ ಸೇರಿದಂತೆ ಹಲವು ಪ್ರಮುಖ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿಲ್ಲ. ಕಮಿಷನ್ ರಾಜಕಾರಣದಿಂದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಟೀಕಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಅನೀಲ್‌ಕುಮಾರ್ ಮೋಕಾ ಮಾತನಾಡಿ, 24 ವರ್ಷಗಳ ಬಳಿಕ ದೇಶಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಇದು ಬಿಜೆಪಿ ಕಾರ್ಯಕ್ರಮವಲ್ಲ, ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದೆ. ರಾಜ್ಯದಲ್ಲಿ ಸುಮಾರು 86 ಲಕ್ಷ ಹಾಗೂ ಜಿಲ್ಲೆಯಲ್ಲಿ 92 ಸಾವಿರಕ್ಕೂ ಹೆಚ್ಚು ನಕಲಿ ಮತಗಳಿರುವ ಶಂಕೆ ಇದ್ದು, ಅವುಗಳನ್ನು ಪತ್ತೆಹಚ್ಚುವ ಕಾರ್ಯಕ್ಕೆ ಬಿಜೆಪಿ ಕಾರ್ಯಕರ್ತರು ಮುಂದಾಗಬೇಕು ಎಂದು ಹೇಳಿದರು.

ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ. ಮಹಾದೇವ ಅಧ್ಯಕ್ಷತೆ ವಹಿಸಿ ಮಾತನಾಡಿ, ಮತದಾರರ ಪಟ್ಟಿಯ ಪಾರದರ್ಶಕತೆಗೆ ಬಿಜೆಪಿ ಸದಾ ಬೆಂಬಲ ನೀಡಲಿದೆ ಎಂದರು.

ಕ್ಷೇತ್ರದ ಬಿಎಲ್‌ಎ1 ಸಂಚಾಲಕ ಜಿ. ಶ್ರೀನಿವಾಸ ಪ್ರಾಸ್ತಾವಿಕವಾಗಿ ಮಾತನಾಡಿ, ಎಸ್‌ಐಆರ್ ಮೂಲಕ ಅರ್ಹ ಮತದಾರರ ಹಕ್ಕು ರಕ್ಷಣೆ ಹಾಗೂ ನಕಲಿ ಮತಗಳಿಗೆ ಕಡಿವಾಣ ಹಾಕುವ ಉದ್ದೇಶವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೂತನವಾಗಿ ನೇಮಕಗೊಂಡ ವಿವಿಧ ಮೋರ್ಚಾಗಳ ಪದಾಧಿಕಾರಿಗಳಿಗೆ ಆದೇಶ ಪ್ರತಿಗಳನ್ನು ವಿತರಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್‌ರೆಡ್ಡಿ, ಎಸ್‌ಐಆರ್ ಸಂಚಾಲಕ ಗಾಳಿ ಶಂಕ್ರಪ್ಪ, ರಾಜ್ಯ ಕಾರ್ಯಕಾರಿಣಿ ಸದಸ್ಯ ರಂಗಳ್ಳಿ ತಿಮ್ಮಾರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಅಳ್ಳಳ್ಳಿ ವಿರೇಶ್, ಕುರುಗೋಡು ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ, ರಬಿಯಾ ನಿಸಾರ್, ಎನ್. ಮನೋಜಗೌಡ, ಮುರಳಿ ಮೋಹನ್‌ರೆಡ್ಡಿ, ಕಟ್ಟೆ ವಿಶ್ವನಾಥ, ಬಸವಪ್ರಭು ಸೇರಿದಂತೆ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X