Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಬರ ಪರಿಹಾರ ಕಾಮಗಾರಿ...

Ballari | ಬರ ಪರಿಹಾರ ಕಾಮಗಾರಿ ಆರಂಭಿಸಿ, ಬಾಕಿ ಪಿಂಚಣಿ ಬಿಡುಗಡೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Oct 2026 7:26 PM IST
share
Ballari | ಬರ ಪರಿಹಾರ ಕಾಮಗಾರಿ ಆರಂಭಿಸಿ, ಬಾಕಿ ಪಿಂಚಣಿ ಬಿಡುಗಡೆಗೆ ಆಗ್ರಹ

ಬಳ್ಳಾರಿ/ಕಂಪ್ಲಿ: ರಾಜ್ಯದಲ್ಲಿ ಮುಂಗಾರು ವಿಫಲತೆಯಿಂದ ವ್ಯಾಪಕ ಬರಗಾಲ ಆವರಿಸಿದ್ದು, ತಕ್ಷಣವೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಹಾಗೂ ಬಾಕಿ ಇರುವ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ದೇವದಾಸಿ ವಿಮೋಚನಾ ಸಂಘ, ಒಂಟಿ ಮಹಿಳೆಯರ ಸಂರಕ್ಷಣಾ ಸಂಘ ಹಾಗೂ ಮಸಣ ಕಾರ್ಮಿಕರ ಸಂಘದ ಜಂಟಿ ಆಶ್ರಯದಲ್ಲಿ ಈ ಪ್ರತಿಭಟನಾತ್ಮಕ ಮನವಿ ಸಲ್ಲಿಸಲಾಯಿತು. ಬರಗಾಲದಿಂದಾಗಿ ರೈತರು ಪ್ರತಿ ಎಕರೆಗೆ 25,000 ರೂ.ಗೂ ಅಧಿಕ ನಷ್ಟ ಅನುಭವಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ಜಾರಿಯಾಗದ ಕಾರಣ ಬಡವರು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆ ವೃದ್ಧರು, ಅಂಗವಿಕಲರು ಹಾಗೂ ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿಯನ್ನು ಬಾಕಿ ಉಳಿಸಿಕೊಂಡಿರುವುದು ಬಡ ಕುಟುಂಬಗಳನ್ನು ಹಸಿವಿನ ದವಡೆಗೆ ತಳ್ಳಿದೆ ಎಂದು ಸಂಘಟನೆಗಳ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಉದ್ಯೋಗ ಖಾತರಿ ಯೋಜನೆಯಡಿ ಕೆಲಸದ ದಿನಗಳನ್ನು 200 ದಿನಗಳಿಗೆ ವಿಸ್ತರಿಸಿ, ಕನಿಷ್ಠ ದಿನಗೂಲಿಯನ್ನು 424 ರೂ.ಗೆ ಹೆಚ್ಚಿಸಬೇಕು. ಎಲ್ಲ ಪಡಿತರ ಚೀಟಿದಾರರಿಗೆ ಮಳೆಗಾಲದವರೆಗೆ ಅಕ್ಕಿ, ಜೋಳ ಸೇರಿದಂತೆ 14 ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಿಸಬೇಕು ಎಂದು ಒತ್ತಾಯಿಸಿದರು.

ಬಾಕಿ ಇರುವ ಎಲ್ಲ ಪಿಂಚಣಿಗಳನ್ನು ತಕ್ಷಣ ಬಿಡುಗಡೆ ಮಾಡಿ, ಮಾಸಿಕ ಪಿಂಚಣಿ ಮೊತ್ತವನ್ನು 6,000 ರೂ.ಗೆ ಹೆಚ್ಚಿಸಬೇಕು. ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ 20,000 ರೂ. ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ದೇವದಾಸಿ ಮಹಿಳೆಯರು, ಒಂಟಿ ಮಹಿಳೆಯರು ಹಾಗೂ ಮಸಣ ಕಾರ್ಮಿಕರ ಗಣತಿ ಪೂರ್ಣಗೊಳಿಸಿ, ಅವರಿಗೆ ಪುನರ್ವಸತಿ ಕಲ್ಪಿಸಬೇಕು. ‘ದೇವದಾಸಿ ನಿಷೇಧ ಕಾಯ್ದೆ-2025’ ಅನ್ನು ತಕ್ಷಣ ಜಾರಿಗೊಳಿಸಬೇಕು. ವಸತಿ ಹಾಗೂ ಉಳುಮೆಗಾಗಿ ತಲಾ ಐದು ಎಕರೆ ಜಮೀನು ಒದಗಿಸಬೇಕು. ನಿರುದ್ಯೋಗಿ ಮಕ್ಕಳಿಗೆ ಮಾಸಿಕ 10,000 ರೂ. ಭತ್ಯೆ ನೀಡಬೇಕು ಎಂದು ಸಂಘಟನೆಗಳ ಪದಾಧಿಕಾರಿಗಳು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ದುರುಗಮ್ಮ, ಎಸ್ಟಾಮಿ, ಎಚ್. ದುರುಗಮ್ಮ, ಸಿ. ವೀರೇಶ ಸೇರಿದಂತೆ ನೂರಾರು ಮಹಿಳೆಯರು ಉಪಸ್ಥಿತರಿದ್ದರು.

Tags

droughtBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X