Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ನ.15 ರಂದು ಮೇಯರ್, ಉಪಮೇಯರ್,...

Ballari | ನ.15 ರಂದು ಮೇಯರ್, ಉಪಮೇಯರ್, ಸ್ಥಾಯಿ ಸಮಿತಿ ಸ್ಥಾನಗಳಿಗೆ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ13 Nov 2025 8:07 PM IST
share
Ballari | ನ.15 ರಂದು ಮೇಯರ್, ಉಪಮೇಯರ್, ಸ್ಥಾಯಿ ಸಮಿತಿ ಸ್ಥಾನಗಳಿಗೆ ಚುನಾವಣೆ
ಮಹಾನಗರ ಪಾಲಿಕೆ ಸುತ್ತ ನಿಷೇಧಾಜ್ಞೆ ಜಾರಿ : ಡಿಸಿ ನಾಗೇಂದ್ರ ಪ್ರಸಾದ್ ಕೆ.

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ನವೆಂಬರ್ 15 ರಂದು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ರಕ್ಷಣೆ ಒದಗಿಸುವ ಹಿತದೃಷ್ಠಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಮಹಾನಗರ ಪಾಲಿಕೆ ಸುತ್ತ-ಮುತ್ತಲಿನ 500 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

ನಿಷೇಧಿಸಲಾದ ಚಟುವಟಿಕೆ :

ಇಂಕ್ (ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರೆ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತ್ರ, ಬಡಿಗೆ, ಬಂದೂಕು, ಚಾಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು ತೆಗೆದುಕೊಂಡು ಹೋಗುವುದು ನಿಷೇಧಿಸಲಾಗಿದೆ.

ಯಾವುದೇ ದಾಹಕ (ನಾಶಕಾರಿ) ಇಲ್ಲವೆ ಸ್ಫೋಟಕ ವಸ್ತು ಒಯ್ಯುವುದು, ಪಟಾಕಿ/ಸಿಡಿಮದ್ದು ಸಿಡಿಸುವುದು. ಕಲ್ಲು ಎಸೆಯುವ ವಸ್ತು ಅಥವಾ ಅಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಶಸ್ತ್ರಗಳು ಅಥವಾ ಸಾಧನಗಳು ಇವುಗಳನ್ನು ತೆಗೆದುಕೊಂಡು ತಿರುಗಾಡುವುದು ನಿಷೇಧಿಸಲಾಗಿದೆ.

ಕಾರು, ಮೋಟರ್ ಬೈಕ್ ಮತ್ತು ಇತರೆ ವಾಹನಗಳಲ್ಲಿ ರ‍್ಯಾಲಿಯನ್ನು ಆಯೋಜಿಸುವುದು. ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನಕೂಟಗಳನ್ನು ಏರ್ಪಡಿಸುವುದು. 5 ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವುದು (ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಹೊರಡುಪಡಿಸಿ) ನಿಷೇಧಿಸಲಾಗಿದೆ.

ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಆಫೀಸರ್ ಅಭಿಪ್ರಾಯದಲ್ಲಿ ಸಭ್ಯತೆ, ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ಪದಾರ್ಥದ ತಯಾರಿ ಪ್ರದರ್ಶನ ಅಥವಾ ಪ್ರಸಾರ ಮಾಡುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X