Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಮಳೆಯ ಕೊರತೆ ನೀಗಿಸಲು...

Ballari | ಮಳೆಯ ಕೊರತೆ ನೀಗಿಸಲು ಜಲಮೂಲಗಳ ಅಭಿವೃದ್ಧಿಗೆ ಒತ್ತು: ಮಡಗಿನ ಬಸಪ್ಪ

ವಾರ್ತಾಭಾರತಿವಾರ್ತಾಭಾರತಿ18 Aug 2026 8:09 PM IST
share
Ballari | ಮಳೆಯ ಕೊರತೆ ನೀಗಿಸಲು ಜಲಮೂಲಗಳ ಅಭಿವೃದ್ಧಿಗೆ ಒತ್ತು: ಮಡಗಿನ ಬಸಪ್ಪ

ಸಂಡೂರು/ಬಳ್ಳಾರಿ: ಪ್ರಸಕ್ತ ಸಾಲಿನಲ್ಲಿ ಮಳೆಯ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮುಂದಿನ ದಿನಗಳಲ್ಲಿ ನೀರಿನ ಕೊರತೆ ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಡೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಹೇಳಿದರು.

ಮಂಗಳವಾರ ಸಂಡೂರು ತಾಲೂಕಿನ ಜಿ.ಎಲ್.ಹಳ್ಳಿ, ಯರ್ರಯ್ಯನಹಳ್ಳಿ ಹಾಗೂ ಬೊಮ್ಮಗಟ್ಟ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಜಿ.ಎಲ್.ಹಳ್ಳಿ ಗ್ರಾಮದ ಸಮೀಪ ವಿಬಿ-ಜಿ ರಾಮ್‌ಜಿ ಯೋಜನೆಯಡಿ ನಡೆಯುತ್ತಿದ್ದ ಸಣ್ಣ ಕುಂಟೆ ಪುನಶ್ಚೇತನ ಕಾಮಗಾರಿಯನ್ನು ವೀಕ್ಷಿಸಿದರು. ಈ ವೇಳೆ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ವಿಬಿ-ಜಿ ರಾಮ್‌ಜಿ ಯೋಜನೆಯ ಉದ್ದೇಶ, ಅನುಷ್ಠಾನ ಕ್ರಮ ಹಾಗೂ ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳ ಕುರಿತು ಅರಿವು ಮೂಡಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದರಿಂದ ಮಳೆನೀರು ಸಂಗ್ರಹವಾಗುವುದರ ಜತೆಗೆ ಅಂತರ್ಜಲ ಮಟ್ಟ ಹೆಚ್ಚಿಸಲು ಹಾಗೂ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದರು.

ಜಲಮೂಲಗಳ ಅಭಿವೃದ್ಧಿಗೆ ಆದ್ಯತೆ :

ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ತಾಲೂಕಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಸಣ್ಣ ಕೆರೆ, ಕುಂಟೆ, ಹಳ್ಳ-ಕೊಳ್ಳಗಳ ಪುನಶ್ಚೇತನ ಸೇರಿದಂತೆ ಜಲಮೂಲಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ನೀರಿನ ಕೊರತೆಯನ್ನು ತಗ್ಗಿಸಲು ಸಾಧ್ಯವಾಗಲಿದೆ ಎಂದು ಮಡಗಿನ ಬಸಪ್ಪ ಹೇಳಿದರು.

ವೈಯಕ್ತಿಕ ಕಾಮಗಾರಿಗಳಿಗೂ ಹೆಚ್ಚಿನ ಆದ್ಯತೆ ನೀಡುವ ಮೂಲಕ ಗ್ರಾಮೀಣ ಕುಟುಂಬಗಳು ಆರ್ಥಿಕವಾಗಿ ಸದೃಢರಾಗಲು ಯೋಜನೆಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗುಳೆ ತಪ್ಪಿಸಲು ನಿರಂತರ ಉದ್ಯೋಗ :

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಬೇರೆಡೆಗೆ ಗುಳೆ ಹೋಗುವುದನ್ನು ತಪ್ಪಿಸಲು ನಿರಂತರವಾಗಿ ಕೆಲಸ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಅರ್ಹ ಕುಟುಂಬಗಳಿಗೆ ಒಂದು ಆರ್ಥಿಕ ವರ್ಷದಲ್ಲಿ ಗರಿಷ್ಠ 125 ದಿನಗಳ ಉದ್ಯೋಗ ಒದಗಿಸಲಾಗುತ್ತದೆ. ಪ್ರಸ್ತುತ ದಿನಕ್ಕೆ 382 ರೂ. ಕೂಲಿ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.

ಕಾಮಗಾರಿ ಸ್ಥಳಗಳಲ್ಲಿ ನಿಗದಿತ ಅಳತೆ ಮತ್ತು ಮಾನದಂಡಗಳಿಗೆ ಅನುಗುಣವಾಗಿ ಗುಣಮಟ್ಟದ ಕೆಲಸ ನಿರ್ವಹಿಸಬೇಕು. ಕಾರ್ಮಿಕರು ಯೋಜನೆಯ ನಿಯಮಗಳು ಹಾಗೂ ತಮ್ಮ ಹಕ್ಕುಗಳ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡು ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕ ವಸಂತ್ ರಾಜ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಾಪಣ್ಣ, ಕಾರ್ಯದರ್ಶಿ ಸದಾಶಿವಪ್ಪ ತೆಗ್ಗಿ, ಡಾಟಾ ಎಂಟ್ರಿ ಆಪರೇಟರ್, ಬಿಎಫ್‌ಟಿ ಹಾಗೂ ಗ್ರಾಮ ಕಾಯಕ ಮಿತ್ರರು ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X