Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಜನಪದ ಸಾಹಿತ್ಯ ಜನರ ಬದುಕಿನ...

Ballari | ಜನಪದ ಸಾಹಿತ್ಯ ಜನರ ಬದುಕಿನ ಕನ್ನಡಿಯಾಗಿದೆ: ಬಸವರಾಜ ಬಣಕಾರ

ವಾರ್ತಾಭಾರತಿವಾರ್ತಾಭಾರತಿ10 Jun 2026 5:22 PM IST
share
Ballari | ಜನಪದ ಸಾಹಿತ್ಯ ಜನರ ಬದುಕಿನ ಕನ್ನಡಿಯಾಗಿದೆ: ಬಸವರಾಜ ಬಣಕಾರ

ಸಂಡೂರು/ಬಳ್ಳಾರಿ: ಜನರ ಬದುಕಿನ ಅನುಭವ, ಕಷ್ಟ-ಸುಖ, ಸಂಪ್ರದಾಯ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುವ ಸಾಹಿತ್ಯವೇ ಜನಪದ ಸಾಹಿತ್ಯವಾಗಿದ್ದು, ಅದು ಸಾಮಾನ್ಯ ಜನರ ಬದುಕಿನ ಕನ್ನಡಿಯಾಗಿದೆ ಎಂದು ಕರ್ನಾಟಕ ಜನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಬಸವರಾಜ ಬಣಕಾರ ಅಭಿಪ್ರಾಯಪಟ್ಟರು.

ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಹಂಪಿ ವಿರೂಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್ (ರಿ.) ಸಹಯೋಗದಲ್ಲಿ ಆಯೋಜಿಸಿದ್ದ ‘ನಮ್ಮ ಹಳ್ಳಿಯ ಜಾನಪದ ಗೋಷ್ಠಿ ಮತ್ತು ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಜನಪದ ಸಾಹಿತ್ಯವು ಜನರ ಬಾಯಿಂದ ಬಾಯಿಗೆ ಹರಿದು ಬಂದ ಅಮೂಲ್ಯ ಪರಂಪರೆಯಾಗಿದ್ದು, ಗ್ರಾಮೀಣ ಮಹಿಳೆಯರು ಹಾಗೂ ರೈತರು ತಮ್ಮ ಬದುಕಿನ ಅನುಭವಗಳನ್ನು ಹಾಡು, ಗೀಗೀ ಪದ, ಸೋಬಾನೆ ಪದ, ಗಾದೆ, ಒಗಟು ಹಾಗೂ ಕಥೆಗಳ ರೂಪದಲ್ಲಿ ಅಭಿವ್ಯಕ್ತಗೊಳಿಸಿ ಸಾಹಿತ್ಯಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

“ಶಿಷ್ಟ ಸಾಹಿತ್ಯಕ್ಕೆ ಜನಪದ ಸಾಹಿತ್ಯವೇ ಮೂಲಬೇರು. ‘ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು’ ಎಂಬಂತಹ ಜನಪದ ಗೀತೆಗಳ ಮೂಲಕ ಗ್ರಾಮೀಣ ಮಹಿಳೆಯರು ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳೆಸಿದ್ದಾರೆ. ದೇಶಭಕ್ತಿ, ಶಾಂತಿ, ನೈತಿಕತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಜನಪದ ಸಾಹಿತ್ಯ ಸಮಾಜಕ್ಕೆ ಬೋಧಿಸಿದೆ” ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್, ಗ್ರಾಮೀಣ ಪ್ರದೇಶಗಳ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಜನರು ತಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂದು ಕರೆ ನೀಡಿದರು.

ಗ್ರಾಮದ ಮುಖಂಡ ಎಂ. ತಿರುಮಲ ಮಾತನಾಡಿ, ಜನಪದ ಕಲೆಗಳ ಉಳಿವಿಗೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಹಿಂದೆ ತಾಯಂದಿರು ಮಕ್ಕಳಿಗೆ ಹಾಡು ಮತ್ತು ಕಥೆಗಳ ಮೂಲಕ ಸಂಸ್ಕಾರ ನೀಡುತ್ತಿದ್ದರು. ಆ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಜನಪದ ಕಲಾತಂಡಗಳಿಂದ ಸೋಬಾನೆ ಪದ, ಭಜನಾ ಗಾಯನ, ಡೊಳ್ಳು ವಾದನ ಹಾಗೂ ತೊಗಲು ಗೊಂಬೆಯಾಟ ಪ್ರದರ್ಶನಗಳು ನಡೆದವು. ಬಳ್ಳಾರಿಯ ಲಕ್ಷ್ಮೀದೇವಿ ಮತ್ತು ತಂಡದ ತೊಗಲು ಗೊಂಬೆಯಾಟ ಪ್ರೇಕ್ಷಕರ ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.

ಶ್ರೀ ಹಂಪಿ ವಿರೂಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್ ಅಧ್ಯಕ್ಷ ತಿಪ್ಪೇಸ್ವಾಮಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ವಿವಿಧ ಗಣ್ಯರು, ಕಲಾವಿದರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags

Folk LiteratureBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X