Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಮಾಜಿ ಶಾಸಕ ಸುರೇಶ್ ಬಾಬು...

Ballari | ಮಾಜಿ ಶಾಸಕ ಸುರೇಶ್ ಬಾಬು ಆರೋಪ ರಾಜಕೀಯ ಪ್ರೇರಿತ: ಬಸವರಾಜ್ ಬಡಗಿ

ವಾರ್ತಾಭಾರತಿವಾರ್ತಾಭಾರತಿ19 Aug 2026 8:51 PM IST
share
Ballari | ಮಾಜಿ ಶಾಸಕ ಸುರೇಶ್ ಬಾಬು ಆರೋಪ ರಾಜಕೀಯ ಪ್ರೇರಿತ: ಬಸವರಾಜ್ ಬಡಗಿ
ಕಾಲುವೆಗಳಿಗೆ ನೀರು, ರೈತರ ಸಮಸ್ಯೆ ಹಾಗೂ ಕ್ಷೇತ್ರದ ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಶಾಸಕ ಗಣೇಶ್ ಸಿದ್ಧ

ಬಳ್ಳಾರಿ/ಕಂಪ್ಲಿ: ರೈತರ ಸಮಸ್ಯೆ, ಕಾಲುವೆಗಳಿಗೆ ನೀರು ಹಾಗೂ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮಾಜಿ ಶಾಸಕ ಟಿ.ಎಚ್. ಸುರೇಶ್ ಬಾಬು ಅವರು ಹಾಲಿ ಶಾಸಕ ಜೆ.ಎನ್. ಗಣೇಶ್ ವಿರುದ್ಧ ಮಾಡಿರುವ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು, ವಾಸ್ತವಾಂಶಗಳಿಗೆ ವಿರುದ್ಧವಾಗಿವೆ ಎಂದು ಶಾಸಕ ಜೆ.ಎನ್. ಗಣೇಶ್ ಅವರ ಬೆಂಬಲಿಗ ಕಾಂಗ್ರೆಸ್ ಮುಖಂಡ ದೊಡ್ಡ ಬಸವರಾಜ್ ಬಡಗಿ ತೀವ್ರವಾಗಿ ಖಂಡಿಸಿದರು.

ಪಟ್ಟಣದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಲುವೆಗಳಿಗೆ ನೀರು ಹರಿಸುವುದು ಜಲಾಶಯಗಳ ನೀರಿನ ಮಟ್ಟ, ನೀರಿನ ಲಭ್ಯತೆ, ನೀರಾವರಿ ಇಲಾಖೆಯ ತಾಂತ್ರಿಕ ನಿರ್ಧಾರಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಸಮನ್ವಯದ ಆಧಾರದ ಮೇಲೆ ನಡೆಯುತ್ತದೆ. ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ವಿಚಾರದಲ್ಲಿ ಮೂರು ರಾಜ್ಯಗಳೊಂದಿಗೆ ಚರ್ಚಿಸುವ ಅಗತ್ಯವಿದೆ. ಈ ವಾಸ್ತವಾಂಶ ತಿಳಿದಿದ್ದರೂ ಮಾಜಿ ಶಾಸಕರು ಸಂಪೂರ್ಣ ಹೊಣೆಯನ್ನು ಹಾಲಿ ಶಾಸಕರ ಮೇಲೆ ಹೊರಿಸುತ್ತಿರುವುದು ಜನರನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

“ಕಾಲುವೆಗೆ ನೀರು ಬಂದಿಲ್ಲ, ಶಾಸಕರನ್ನು ಊರೊಳಗೆ ಬಿಟ್ಟುಕೊಡಬೇಡಿ” ಎಂಬ ಹೇಳಿಕೆ ಜವಾಬ್ದಾರಿಯುತ ಮಾಜಿ ಶಾಸಕರಿಗೆ ಶೋಭೆ ತರುವಂತಹದ್ದಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ಜನರಲ್ಲಿ ಪ್ರಚೋದನೆ ಹಾಗೂ ದ್ವೇಷದ ವಾತಾವರಣ ನಿರ್ಮಿಸುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿದರು.

ಶಾಸಕ ಜೆ.ಎನ್. ಗಣೇಶ್ ಅವರು ರೈತರ ನೀರಾವರಿ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರವಾಗಿ ಚರ್ಚಿಸುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಸಮಸ್ಯೆಗಳ ಕುರಿತು ಜನರ ಮುಂದೆ ಲೆಕ್ಕ ನೀಡಲು ಶಾಸಕರು ಸದಾ ಸಿದ್ಧರಿದ್ದಾರೆ ಎಂದು ಹೇಳಿದರು.

ಮಾಜಿ ಶಾಸಕರು ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಹೊಂದಿದ್ದರೆ, ಮಾಧ್ಯಮಗಳ ಮೂಲಕ ಆರೋಪ ಮಾಡುವ ಬದಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಸಹಕರಿಸಬೇಕು. ತಮ್ಮ ಅಧಿಕಾರಾವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ವಿವರವನ್ನು ಜನರ ಮುಂದಿಡಬೇಕು. ಯಾರು ಎಷ್ಟು ಕೆಲಸ ಮಾಡಿದ್ದಾರೆ ಎಂಬುದನ್ನು ಕಂಪ್ಲಿ ಕ್ಷೇತ್ರದ ಜನತೆ ತೀರ್ಮಾನಿಸಲಿದ್ದಾರೆ ಎಂದು ಬಸವರಾಜ್ ಬಡಗಿ ಹೇಳಿದರು.

“ಟೀಕೆಗಳು ಸಾಯುತ್ತವೆ, ಕೆಲಸಗಳು ಜೀವಿಸುತ್ತವೆ” ಎಂಬ ಶಾಸಕ ಗಣೇಶ್ ಅವರ ಮಾತಿನಂತೆ ಸುಳ್ಳು ಆರೋಪಗಳಿಗೆ ಉತ್ತರ ನೀಡುವುದಕ್ಕಿಂತ ಅಭಿವೃದ್ಧಿ ಕೆಲಸಗಳ ಮೂಲಕವೇ ಉತ್ತರ ನೀಡುತ್ತೇವೆ. ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಆದ್ಯತೆ. ರಾಜಕೀಯ ಕಾರಣಕ್ಕಾಗಿ ರೈತರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನವನ್ನು ಜನರು ಒಪ್ಪುವುದಿಲ್ಲ ಎಂದು ತಿಳಿಸಿದರು.

ಕಾಲುವೆ ನೀರು, ರೈತರ ಸಮಸ್ಯೆ ಹಾಗೂ ಕ್ಷೇತ್ರದ ಅಭಿವೃದ್ಧಿ ಕುರಿತು ಯಾವುದೇ ಬಹಿರಂಗ ಚರ್ಚೆಗೆ ಶಾಸಕ ಜೆ.ಎನ್. ಗಣೇಶ್ ಸಿದ್ಧರಾಗಿದ್ದಾರೆ. ಆರೋಪಗಳಿಂದ ಅಭಿವೃದ್ಧಿಯ ವೇಗವನ್ನು ತಡೆಯಲು ಸಾಧ್ಯವಿಲ್ಲ. ಜನರ ಆಶೀರ್ವಾದ ಹಾಗೂ ಸಹಕಾರದೊಂದಿಗೆ ಕ್ಷೇತ್ರದ ಅಭಿವೃದ್ಧಿ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X