Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಗ್ರಾಮೀಣರ ಮನೆ ಬಾಗಿಲಿಗೆ...

Ballari | ಗ್ರಾಮೀಣರ ಮನೆ ಬಾಗಿಲಿಗೆ ಆರೋಗ್ಯ ಸೇವೆ; ಸಂಡೂರಿನಲ್ಲಿ 3 ಮೊಬೈಲ್ ಹೆಲ್ತ್ ಯೂನಿಟ್‌ಗಳಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Sept 2026 7:34 PM IST
share
Ballari | ಗ್ರಾಮೀಣರ ಮನೆ ಬಾಗಿಲಿಗೆ ಆರೋಗ್ಯ ಸೇವೆ; ಸಂಡೂರಿನಲ್ಲಿ 3 ಮೊಬೈಲ್ ಹೆಲ್ತ್ ಯೂನಿಟ್‌ಗಳಿಗೆ ಚಾಲನೆ

ಸಂಡೂರು/ಬಳ್ಳಾರಿ: ಆರೋಗ್ಯ ಸೇವೆಗಾಗಿ ಗ್ರಾಮೀಣ ಜನರು ದೂರದ ಆಸ್ಪತ್ರೆಗಳಿಗೆ ಅಲೆದಾಡುವುದನ್ನು ತಪ್ಪಿಸಿ, ವೈದ್ಯಕೀಯ ಸೇವೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದ ಮಹತ್ವದ ಜನಪರ ಯೋಜನೆಗೆ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಚಾಲನೆ ದೊರೆಯಿತು.

ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಜನರಿಗೆ ಆರೋಗ್ಯ ಸೇವೆ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ JSW ಸಂಸ್ಥೆಯ CSR ನಿಧಿಯ ಸಹಯೋಗದಲ್ಲಿ ಮೂರು ಮೊಬೈಲ್ ಹೆಲ್ತ್ ಯೂನಿಟ್‌ಗಳಿಗೆ ಕ್ಷೇತ್ರದ ಶಾಸಕಿ ಅನ್ನಪೂರ್ಣ ತುಕಾರಾಮ್ ಚಾಲನೆ ನೀಡಿದರು. ಇದೇ ವೇಳೆ ಕ್ಷೇತ್ರದ 90 ಗ್ರಾಮಗಳಿಗೆ ಭೇಟಿ ನೀಡುವ ವಾರ್ಷಿಕ ವೇಳಾಪಟ್ಟಿಯ ಕ್ಯಾಲೆಂಡರ್‌ನ್ನು ಬಿಡುಗಡೆ ಮಾಡಲಾಯಿತು.

ಮೊಬೈಲ್ ಆರೋಗ್ಯ ಘಟಕಗಳು ಸಂಡೂರು ವಿಧಾನಸಭಾ ಕ್ಷೇತ್ರದ 90 ಗ್ರಾಮಗಳಿಗೆ ನಿಗದಿತ ವೇಳಾಪಟ್ಟಿಯಂತೆ ಭೇಟಿ ನೀಡಿ, ಗ್ರಾಮಸ್ಥರಿರುವ ಸ್ಥಳದಲ್ಲಿಯೇ ಮೂಲಭೂತ ಆರೋಗ್ಯ ತಪಾಸಣೆ ಹಾಗೂ ಅಗತ್ಯ ವೈದ್ಯಕೀಯ ಸೇವೆಗಳನ್ನು ಒದಗಿಸಲಿವೆ. ಪ್ರತಿ ಘಟಕದಲ್ಲಿ ಎಂಬಿಬಿಎಸ್ ವೈದ್ಯರು, ಫಾರ್ಮಸಿಸ್ಟ್, ಲ್ಯಾಬ್ ಟೆಕ್ನಿಷಿಯನ್, ಸೋಷಿಯಲ್ ಮೊಬಿಲೈಸರ್ ಹಾಗೂ ಚಾಲಕ ಕಮ್ ಅಟೆಂಡರ್ ಒಳಗೊಂಡ ತಂಡ ಕಾರ್ಯನಿರ್ವಹಿಸಲಿದೆ.

ಗ್ರಾಮಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಜನರ ಆರೋಗ್ಯ ತಪಾಸಣೆ ನಡೆಸುವುದರ ಜತೆಗೆ ಅಗತ್ಯ ಪರೀಕ್ಷೆಗಳನ್ನು ಸ್ಥಳದಲ್ಲಿಯೇ ಕೈಗೊಳ್ಳಲಾಗುತ್ತದೆ. ವೈದ್ಯಕೀಯ ಸಲಹೆ, ಔಷಧೋಪಚಾರ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಸಹ ನಡೆಸಲಾಗುತ್ತದೆ. ಇದರಿಂದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ಗ್ರಾಮೀಣ ಜನರು ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಅನಿವಾರ್ಯತೆ ಕಡಿಮೆಯಾಗಲಿದೆ.

ವಿಶೇಷವಾಗಿ ವಯೋವೃದ್ಧರು, ಮಹಿಳೆಯರು, ಮಕ್ಕಳು ಹಾಗೂ ದೂರದ ಗ್ರಾಮಗಳಲ್ಲಿ ವಾಸಿಸುವವರಿಗೆ ಮೊಬೈಲ್ ಆರೋಗ್ಯ ಘಟಕಗಳು ಹೆಚ್ಚಿನ ಅನುಕೂಲ ಕಲ್ಪಿಸಲಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಅನ್ನಪೂರ್ಣ ತುಕಾರಾಮ್, “ಆರೋಗ್ಯ ಸೇವೆಗಾಗಿ ಜನರು ದೂರದ ಆಸ್ಪತ್ರೆಗೆ ತೆರಳುವ ಬದಲು, ಆರೋಗ್ಯ ಸೇವೆಯೇ ಜನರ ಮನೆ ಬಾಗಿಲಿಗೆ ತಲುಪಬೇಕು ಎಂಬ ಆಶಯದೊಂದಿಗೆ ಈ ಯೋಜನೆ ಜಾರಿಗೆ ತರಲಾಗಿದೆ” ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಸಲಹೆ ದೊರೆತರೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮೊಬೈಲ್ ಹೆಲ್ತ್ ಯೂನಿಟ್‌ಗಳು ಪ್ರಮುಖ ಪಾತ್ರ ವಹಿಸಲಿವೆ. ಕ್ಷೇತ್ರದ 90 ಗ್ರಾಮಗಳನ್ನು ಒಳಗೊಂಡ ವಾರ್ಷಿಕ ವೇಳಾಪಟ್ಟಿಯಂತೆ ಆರೋಗ್ಯ ತಂಡಗಳು ಗ್ರಾಮಗಳಿಗೆ ತೆರಳಿ ಸೇವೆ ನೀಡಲಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

JSW ಸಂಸ್ಥೆಯ CSR ಸಹಕಾರದಿಂದ ಆರಂಭಗೊಂಡಿರುವ ಈ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಯ ಲಭ್ಯತೆ ಹೆಚ್ಚಿಸುವುದರ ಜತೆಗೆ, ತಡೆಗಟ್ಟುವ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಜಾಗೃತಿಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆಯಿದೆ.

Tags

SandurBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X