Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಕಂಪ್ಲಿ ಭಾಗದಲ್ಲಿ ಧಾರಾಕಾರ...

Ballari | ಕಂಪ್ಲಿ ಭಾಗದಲ್ಲಿ ಧಾರಾಕಾರ ಮಳೆ; ರೈತರ ಮೊಗದಲ್ಲಿ ಮಂದಹಾಸ

ವಾರ್ತಾಭಾರತಿವಾರ್ತಾಭಾರತಿ18 July 2026 8:16 PM IST
share
Ballari | ಕಂಪ್ಲಿ ಭಾಗದಲ್ಲಿ ಧಾರಾಕಾರ ಮಳೆ; ರೈತರ ಮೊಗದಲ್ಲಿ ಮಂದಹಾಸ

ಬಳ್ಳಾರಿ/ಕಂಪ್ಲಿ: ಮುಂಗಾರು ಕೈಕೊಟ್ಟಿದ್ದರಿಂದ ಆತಂಕದಲ್ಲಿದ್ದ ರೈತರಿಗೆ ಶನಿವಾರ ಸುರಿದ ಧಾರಾಕಾರ ಮಳೆ ನೆಮ್ಮದಿ ತಂದಿದೆ. ಕಂಪ್ಲಿ ಪಟ್ಟಣ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿದ್ದು, ಒಣಗುತ್ತಿದ್ದ ಬೆಳೆಗಳಿಗೆ ಜೀವಕಳೆ ಬಂದಿದೆ.

ಕಳೆದ ಎರಡು ತಿಂಗಳಿಂದ ಸಮರ್ಪಕ ಮಳೆಯಿಲ್ಲದೆ ರೈತರು ಸಂಕಷ್ಟ ಅನುಭವಿಸುತ್ತಿದ್ದರು. ಉರಿ ಬಿಸಿಲಿನಿಂದ ಭೂಮಿ ಬಿರುಕು ಬಿಟ್ಟಿದ್ದರೆ, ಮಳೆ ಆಶ್ರಿತ ಬೆಳೆಗಳು ನೀರಿಲ್ಲದೆ ಒಣಗುವ ಸ್ಥಿತಿಗೆ ತಲುಪಿದ್ದವು. ಇಂತಹ ಸಂದರ್ಭದಲ್ಲಿ ಮಧ್ಯಾಹ್ನ ಸುಮಾರು 3.45ರ ವೇಳೆಗೆ ಆರಂಭವಾದ ಮಳೆ ಕಂಪ್ಲಿ ಪಟ್ಟಣ, ನಂ.10 ಮುದ್ದಾಪುರ, ರಾಮಸಾಗರ, ಸಣಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಾರು ಒಂದು ಗಂಟೆ ಸುರಿಯಿತು.

ಮಳೆಗಾಗಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಜಲಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದ್ದ ರೈತರು ಮತ್ತು ಗ್ರಾಮಸ್ಥರ ಪ್ರಾರ್ಥನೆ ಫಲಿಸಿದಂತಾಗಿದೆ. ಮಳೆಯಿಂದ ಬೆಳೆಗಳಿಗೆ ನೀರು ದೊರೆತು ಚಿಗುರೊಡೆಯುವ ನಿರೀಕ್ಷೆ ಮೂಡಿದ್ದು, ಹಸಿ ಮೇವು ಬೆಳೆಯಲು ಸಹ ಅನುಕೂಲವಾಗಲಿದೆ ಎಂದು ರೈತರು ಸಂತಸ ವ್ಯಕ್ತಪಡಿಸಿದರು.

ನಿರಂತರ ಮಳೆಯಾದರೆ ಕೆರೆ, ಹಳ್ಳ, ಕೊಳ್ಳಗಳು ತುಂಬಿ ಭೂಗರ್ಭ ಜಲಮಟ್ಟ ಹೆಚ್ಚುವುದರ ಜೊತೆಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ನಿವಾರಣೆಯಾಗಲಿದೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

ಮಳೆಯ ವೇಳೆ ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಪೋಷಕರು ಟವಲ್ ಹೊದಿಸಿ ಬೈಕ್‌ಗಳಲ್ಲಿ ಕರೆದೊಯ್ದರೆ, ಕೆಲವರು ಛತ್ರಿಯ ನೆರವಿನಲ್ಲಿ ಮನೆ ತಲುಪಿದರು. ಇನ್ನೂ ಕೆಲ ಮಕ್ಕಳು ಮಳೆಯಲ್ಲೇ ನೆನೆಯುತ್ತಾ ಸಂಭ್ರಮಿಸಿದರು. ಮಳೆ ಜೋರಾಗಿದ್ದರಿಂದ ಸಾರ್ವಜನಿಕರು ಅಂಗಡಿ ಹಾಗೂ ಶೆಡ್‌ಗಳಲ್ಲಿ ಆಶ್ರಯ ಪಡೆದು, ಮಳೆ ಕಡಿಮೆಯಾದ ಬಳಿಕ ತಮ್ಮ ಗಮ್ಯಸ್ಥಾನಗಳಿಗೆ ತೆರಳಿದರು.

Tags

KampliBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X