Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಬಂಡ್ರಿ ಗ್ರಾಪಂನಲ್ಲಿ ಜಾಬ್...

Ballari | ಬಂಡ್ರಿ ಗ್ರಾಪಂನಲ್ಲಿ ಜಾಬ್ ಕಾರ್ಡ್ ಮೇಳ: ಸ್ಥಳೀಯವಾಗಿಯೇ ಉದ್ಯೋಗ ಪಡೆಯಲು ಕರೆ

ವಾರ್ತಾಭಾರತಿವಾರ್ತಾಭಾರತಿ1 Sept 2026 7:42 PM IST
share
Ballari | ಬಂಡ್ರಿ ಗ್ರಾಪಂನಲ್ಲಿ ಜಾಬ್ ಕಾರ್ಡ್ ಮೇಳ: ಸ್ಥಳೀಯವಾಗಿಯೇ ಉದ್ಯೋಗ ಪಡೆಯಲು ಕರೆ

ಸಂಡೂರು/ಬಳ್ಳಾರಿ: ಗ್ರಾಮೀಣ ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ನಿರಂತರ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ವಿ.ಬಿ.-ಜಿ ರಾಮ್ ಜಿ ಯೋಜನೆಯಡಿ ಬಂಡ್ರಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಾಬ್ ಕಾರ್ಡ್ ಮೇಳ ಹಮ್ಮಿಕೊಳ್ಳಲಾಯಿತು.

ಮೇಳವನ್ನು ಉದ್ದೇಶಿಸಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಪುತ್ರ ಅವರು, ಆ.15ರಿಂದ ಸೆ.15ರವರೆಗೆ ಜಾಬ್ ಕಾರ್ಡ್ ಮೇಳ ನಡೆಯಲಿದ್ದು, ಬಂಡ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಸಾರ್ವಜನಿಕರು ಹೊಸ ಜಾಬ್ ಕಾರ್ಡ್ ಪಡೆಯಲು ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಯೋಜನೆಯಡಿ ಕೂಲಿ ಕಾರ್ಮಿಕರಿಗೆ ನಿರಂತರವಾಗಿ ಕೆಲಸ ಒದಗಿಸಲಾಗುವುದು. ಹೀಗಾಗಿ ಉದ್ಯೋಗಕ್ಕಾಗಿ ಬೇರೆಡೆಗೆ ಗುಳೆ ಹೋಗುವ ಅಗತ್ಯವಿಲ್ಲ. ಪ್ರತಿ ದಿನಕ್ಕೆ 382 ರೂ. ಕೂಲಿ ನೀಡಲಾಗುತ್ತಿದ್ದು, ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ 125 ದಿನಗಳವರೆಗೆ ಕೆಲಸ ಒದಗಿಸಲಾಗುವುದು ಎಂದು ಅವರು ಹೇಳಿದರು.

ಇದರ ಜೊತೆಗೆ ಗ್ರಾಮೀಣ ಕುಟುಂಬಗಳಿಗೆ ವಿವಿಧ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ದನದ ಶೆಡ್ ನಿರ್ಮಾಣಕ್ಕೆ 62,000 ರೂ., ಕೋಳಿ ಶೆಡ್‌ಗೆ 66,000 ರೂ., ಕುರಿ/ಮೇಕೆ ಶೆಡ್‌ಗೆ 83,000 ರೂ., ವೈಯಕ್ತಿಕ ಕೊಳವೆ ಬಾವಿಗಳಿಗೆ ಜಲಮರುಪೂರ್ಣ ಘಟಕ ನಿರ್ಮಾಣಕ್ಕೆ 24,000 ರೂ. ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆ–ಗ್ರಾಮೀಣ (PMAY-G) ಮನೆ ನಿರ್ಮಾಣಕ್ಕೆ 34,000 ರೂ. ಸೇರಿದಂತೆ ಒಟ್ಟು 38 ವಿವಿಧ ವೈಯಕ್ತಿಕ ಕಾಮಗಾರಿಗಳಿಗೆ ಅವಕಾಶವಿದೆ ಎಂದು ತಿಳಿಸಿದರು.

ಸಾರ್ವಜನಿಕರು ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ಥಳೀಯವಾಗಿಯೇ ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಶಿವಪುತ್ರ ಕರೆ ನೀಡಿದರು.

ಈಗಾಗಲೇ ಹೊಸ ಜಾಬ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿರುವ 10 ಅರ್ಹ ಫಲಾನುಭವಿಗಳಿಗೆ ಕೂಡಲೇ ಜಾಬ್ ಕಾರ್ಡ್ ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಮೇಳದಲ್ಲಿ ತಾಲೂಕು ಐಇಸಿ ಸಂಯೋಜಕರು, ಗ್ರಾಮ ಕಾಯಕಮಿತ್ರರು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X