Ballari | ಜಾಬ್ ಲಿಂಕ್ಡ್ 100 ಐಟಿಐ ಯೋಜನೆಯಿಂದ ಉದ್ಯೋಗಾವಕಾಶ ಹೆಚ್ಚಳ: ತಿಮ್ಮರಾಜು ವಿ.

ಬಳ್ಳಾರಿ: ವಿದ್ಯಾರ್ಥಿಗಳಿಗೆ ಆಧುನಿಕ ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯವಿರುವ ಹೆಚ್ಚುವರಿ ಕೌಶಲಗಳನ್ನು ನೀಡಿ, ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಜಾಬ್ ಲಿಂಕ್ಡ್ 100 ಐಟಿಐ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ತಿಮ್ಮರಾಜು ವಿ. ಹೇಳಿದರು.
ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಮುಖ್ಯಮಂತ್ರಿಗಳ 100 ದಿನಗಳ ಕಾರ್ಯಕ್ರಮದಡಿ ಹಮ್ಮಿಕೊಂಡಿರುವ ಜಾಬ್ ಲಿಂಕ್ಡ್ 100 ಐಟಿಐ ಯೋಜನೆಯ ಹೆಚ್ಚುವರಿ ಕೌಶಲ್ಯ ತರಬೇತಿ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು.
ನವೆಂಬರ್ 2ರಿಂದ ಏಪ್ರಿಲ್ 27, 2027ರವರೆಗೆ ತರಬೇತಿ ನಡೆಯಲಿದ್ದು, ಪ್ರಾಯೋಗಿಕ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪ್ರಮುಖ ಕೈಗಾರಿಕೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ಶಿಪ್ ಹಾಗೂ ನೇರ ಉದ್ಯೋಗ ಸಂಪರ್ಕ ಕಲ್ಪಿಸಲಾಗುವುದು. ಈ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಮತ್ತು ಕಿರಿಯ ತರಬೇತಿ ಅಧಿಕಾರಿಗಳಾದ ಸುಭಾಷ್ ಚಂದ್ರ ಗೌಡ ಎಚ್., ಸತೀಶ್ ಡಿ.ಜಿ., ಪ್ರಮಿಳಾ ಎಂ. ಹಾಗೂ ಕಚೇರಿಯ ಪ್ರಥಮ ದರ್ಜೆ ಸಹಾಯಕ ಮಹೇಶ್ ಟಿ. ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






